ಮಕ್ಕಳಿಗೆ ಕಲೆ, ಸಂಸ್ಕೃತಿ ಅರಿವು ಮೂಡಿಸಿ: ಶ್ರೀ

KannadaprabhaNewsNetwork |  
Published : Nov 07, 2026, 02:00 AM IST
ಪೋಟೋ 6 : ಸೋಂಪುರ ಹೋಬಳಿಯ ಕಂಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಿವಗಂಗೆ ಕ್ಲಸ್ಟರ್ ಮಟ್ಟದ  ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮವನ್ನು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು | Kannada Prabha

ಸಾರಾಂಶ

ದಾಬಸ್‍ಪೇಟೆ: ಮಕ್ಕಳಲ್ಲಿ ಕೇವಲ ಪಠ್ಯದ ಜ್ಞಾನ ಮಾತ್ರವಲ್ಲದೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅರಿವು ಮೂಡುವುದು ಅತ್ಯಗತ್ಯ. ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ನೀಡಲು ಅತ್ಯಂತ ಸಹಕಾರಿಯಾಗಿವೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು

ದಾಬಸ್‍ಪೇಟೆ: ಮಕ್ಕಳಲ್ಲಿ ಕೇವಲ ಪಠ್ಯದ ಜ್ಞಾನ ಮಾತ್ರವಲ್ಲದೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅರಿವು ಮೂಡುವುದು ಅತ್ಯಗತ್ಯ. ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ನೀಡಲು ಅತ್ಯಂತ ಸಹಕಾರಿಯಾಗಿವೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸೋಂಪುರ ಹೋಬಳಿಯ ಕಂಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಿವಗಂಗೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಲೆ ಮತ್ತು ಸಾಹಿತ್ಯವು ಮನಸ್ಸನ್ನು ಶುದ್ಧೀಕರಿಸುತ್ತವೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಕೊಂಚ ದೂರವಿದ್ದು, ಇಂತಹ ಸುವರ್ಣ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು. ಸೋಲಿಗೆ ಧೃತಿಗೆಡದೆ ಸತತ ಪ್ರಯತ್ನದ ಮೂಲಕ ಉನ್ನತ ಶಿಖರವನ್ನು ಏರಬೇಕು ಎಂದರು.

ಕಂಬಾಳು ವಿಎಸ್‍ಎಸ್‍ಎನ್ ಅಧ್ಯಕ್ಷ ಪ್ರಭುದೇವ್ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿಯಾಗಲಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅದ್ಭುತ ಕಲಾ ಸಾಮಥ್ರ್ಯವಿದ್ದು, ಇವರು ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮಿಂಚುವಂತಾಗಲಿ. ಇದಕ್ಕೆ ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾಹದ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಇಸಿಒ ಸಿದ್ದರಾಮೇಗೌಡ, ಸಿಆರ್ ಪಿ ಸಿದ್ದಗಂಗಯ್ಯ, ಎಸ್ ಡಿಎಂಸಿ ಅಧ್ಯಕ್ಷ ಜ್ಞಾನೇಶ್, ಕಂಬಾಳು ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಸೀಬನಯ್ಯ, ಸಂಸ್ಕøತ ಶಿಕ್ಷಕ ನಿರಂಜನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಾಸುದೇವಮೂರ್ತಿ ಸೇರಿದಂತೆ 13 ಶಾಲೆಗಳ ಮುಖ್ಯಶಿಕ್ಷಕರು, ಸಹಶಿಕ್ಷಕರು, ಗ್ರಾಮಸ್ಥರು ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಟೋ 6 : ಸೋಂಪುರ ಹೋಬಳಿಯ ಕಂಬಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಿವಗಂಗೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮವನ್ನು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ