ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಅಡಿವೇಶ ಇಟಗಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಅಡಿವೇಶ ಇಟಗಿ ಹೇಳಿದರು.
ಕಿತ್ತೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಅರಿವೇ ಗುರು ಕಾರ್ಯಕ್ರಮದಲ್ಲಿ ಶ್ರೀಗಳ ಆಶೀರ್ವಾದದೊಂದಿಗೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಜ್ಞಾನ ಮತ್ತು ಸಂಸ್ಕಾರದ ಮಹತ್ವವನ್ನು ವಿವರಿಸಿದರು.ಈ ಸಂದರ್ಭದಲ್ಲಿ ನಿಜಗುಣಾನಂದ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಶ್ರೀಗಳು ಆಶೀರ್ವಚನ ನೀಡಿದರು. ಜೊತೆಗೆ ಗ್ರಾಮದ ಹಿರಿಯರು, ಭಕ್ತರು ಹಾಗೂ ಸ್ಥಳೀಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.