ಕನ್ನಡಪ್ರಭ ವಾರ್ತೆ ಬೆಳಗಾವಿ ಮಕ್ಕಳು ದೇಶದ ಭವಿಷ್ಯ. ವಿದ್ಯಾರ್ಥಿಗಳಲ್ಲಿ ಬಾಲ್ಯದಲ್ಲಿಯೇ ಕಾನೂನು ಅರಿವು ಮೂಡಿಸುವುದು ಬಹಳ ಅಗತ್ಯವಾಗಿದೆ. ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ತಡೆ, ಬಾಲ ಕಾರ್ಮಿಕತೆ ನಿರ್ಮೂಲನೆ ಸೇರಿದಂತೆ ವಿವಿಧ ಸಾಮಾಜಿಕ ಅನಿಷ್ಠಗಳ ಬಗ್ಗೆ ಅರಿವು ಮೂಡಿಸಿದರೆ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ನ್ಯಾಯ ಸಮ್ಮತ ಮತ್ತು ಕಾನೂನು ಬದ್ಧ ಸಮಾಜ ನಿರ್ಮಾಣಕ್ಕೆ ಸಹಕರಿಸಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಬೆಳಗಾವಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ.ಜಯಂತ್ ಬ್ಯಾನರ್ಜಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮಕ್ಕಳು ದೇಶದ ಭವಿಷ್ಯ. ವಿದ್ಯಾರ್ಥಿಗಳಲ್ಲಿ ಬಾಲ್ಯದಲ್ಲಿಯೇ ಕಾನೂನು ಅರಿವು ಮೂಡಿಸುವುದು ಬಹಳ ಅಗತ್ಯವಾಗಿದೆ. ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ತಡೆ, ಬಾಲ ಕಾರ್ಮಿಕತೆ ನಿರ್ಮೂಲನೆ ಸೇರಿದಂತೆ ವಿವಿಧ ಸಾಮಾಜಿಕ ಅನಿಷ್ಠಗಳ ಬಗ್ಗೆ ಅರಿವು ಮೂಡಿಸಿದರೆ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ನ್ಯಾಯ ಸಮ್ಮತ ಮತ್ತು ಕಾನೂನು ಬದ್ಧ ಸಮಾಜ ನಿರ್ಮಾಣಕ್ಕೆ ಸಹಕರಿಸಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಬೆಳಗಾವಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ.ಜಯಂತ್ ಬ್ಯಾನರ್ಜಿ ಹೇಳಿದರು.
ನಗರದ ಟಿಳಕವಾಡಿಯ ಕೆಎಲ್ಎಸ್ ಹೈಸ್ಕೂಲ್ನಲ್ಲಿ ಸೋಮವಾರ ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕತೆ ನಿಷಧ ಕುರಿತ ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಉದ್ಘಾಟಿಸಿದರು.
ತದನಂತರ ಮಾತನಾಡಿದರು.ಜಿಲ್ಲೆಯಾದ್ಯಂತ ಅನೇಕ ಶಾಲೆಗಳಲ್ಲಿ ಒಂದೇ ಸಮಯದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ಅವರ ಪ್ರಯತ್ನವನ್ನು ಅವರು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತರಾದ ಬೋರಸೆ ಭೂಷಣ ಗುಲಾಬರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲೀಲಾವತಿ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನಕುಮಾರ್, ಡಯಟ್ ಪ್ರಾಂಶುಪಾಲ ಅಶೋಕ್ ಸಿಂದಗಿ, ಕೆಎಎಸ್ ಹೈಸ್ಕೂಲ್ ಮುಖ್ಯ ಶಿಕ್ಷಕಿ ಶ್ರೀಮತಿ ಲಕ್ಷ್ಮಿ ದೇಶಪಾಂಡೆ ಉಪಸ್ಥಿತರಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಪಾಟೀಲ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಈ ವಿಶೇಷ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಬೆಳಗ್ಗೆ 9 ರಿಂದ 10.30 ಗಂಟೆಯವರೆಗೆ ಒಟ್ಟು 1,221 ಹೈಸ್ಕೂಲ್ಗಳಲ್ಲಿ ಒಂದೇ ಸಮಯದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಸುಮಾರು 2.78 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ತಡೆ ಹಾಗೂ ಬಾಲಕಾರ್ಮಿಕತೆ ನಿಷೇಧ ಕುರಿತು ಅರಿವು ಪಡೆದರು.
ಕಾರ್ಯಕ್ರಮದ ವೇಳೆ ಬೆಳಗಾವಿಯ ಆರ್.ಎಲ್ ಲಾ ಕಾಲೇಜಿನ ವಿದ್ಯಾರ್ಥಿಗಳು ತಯಾರಿಸಿದ ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಮಾನವ ಕಳ್ಳಸಾಗಣೆ ಹಾಗೂ ಆ್ಯಸಿಡ್ ದಾಳಿ ಮುಂತಾದ ಸಾಮಾಜಿಕ ಸಮಸ್ಯೆಗಳ ಕುರಿತ ಕಿರುಚಿತ್ರಗಳನ್ನು ಪ್ರದರ್ಶಿಸಲಾಯಿತು.
ಇದಲ್ಲದೆ ಸುಮಾರು 100 ವಿದ್ಯಾರ್ಥಿಗಳು ಬೆಳಗಾವಿ ನಗರದ ನ್ಯಾಯಾಲಯಗಳಿಗೆ ಭೇಟಿ ನೀಡಿ ನ್ಯಾಯಾಲಯದ ಕಾರ್ಯವೈಖರಿಯನ್ನು ವೀಕ್ಷಿಸಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮ ತಮ್ಮ ತಾಲ್ಲೂಕುಗಳ ನ್ಯಾಯಾಲಯಗಳಿಗೆ ಭೇಟಿ ನೀಡಿ ನ್ಯಾಯಾಂಗ ವ್ಯವಸ್ಥೆಯ ಕಾರ್ಯವಿಧಾನವನ್ನು ತಿಳಿದುಕೊಂಡರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.