ಕನ್ನಡಪ್ರಭ ವಾರ್ತೆ ಬೆಳಗಾವಿ
ಪ್ರಶಸ್ತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ನಾಯಕತ್ವ ಗುಣವನ್ನು ಬೆಳೆಸುವ ವೇದಿಕೆ. ಇದರಿಂದ ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ವ್ಯಕ್ತಿತ್ವ ವಿಕಸನದ ಜೊತೆಗೆ ಶಿಸ್ತುಬದ್ಧ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಎಲ್ಲ ಕಾರ್ಯಕ್ರಮಗಳಿಗೆ ಜಿಲ್ಲಾ ಪಂಚಾಯತಿ ವತಿಯಿಂದ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದು ತಿಳಿಸಿದರು.ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅವರು ಮಾತನಾಡಿ, ದೇಶಾದ್ಯಂತ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ 2 ಕೋಟಿ ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ 8 ಲಕ್ಷ ಮಕ್ಕಳಿದ್ದಾರೆ. ಮುಂದೆಯೂ ರಾಜ್ಯದಲ್ಲಿ ಸೇರ್ಪಡೆಯಾಗುವ ಮಕ್ಕಳ ಸಂಖ್ಯೆ ಹೆಚ್ಚಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 64 ಸಾವಿರ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿದ್ದು, ಮುಂಬರುವ ದಿನಗಳಲ್ಲಿ ಒಂದು ಲಕ್ಷದವರೆಗೆ ಸೇರ್ಪಡೆಯಾಗುವ ವಿಶ್ವಾಸವಿದೆ ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಬೆಳಗಾವಿ ವಿಭಾಗದ ಮುಖ್ಯಸ್ಥೆ ಅಂಬಿಕಾ ಬ್ರಹ್ಮಕುಮಾರಿ ಅವರು ನಶಾ ಮುಕ್ತಿ ಅಭಿಯಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ನಶಾ ಮುಕ್ತಿ ಅಭಿಯಾನದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರ, ಕಬ್ಸ್ ಮತ್ತು ಬುಲ್-ಬುಲ್ ವಿದ್ಯಾರ್ಥಿಗಳಿಗೆ ಚತುರ್ಥ ಚರಣ ಹಾಗೂ ಹಿರಕ್ ಪಂಕ್ ಪ್ರಶಸ್ತಿ ಪತ್ರ, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಒಟ್ಟು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.