ಮಕ್ಕಳಲ್ಲಿ ಭಾವೈಕ್ಯತೆ ಮೂಡಿಸುವುದು ಅಗತ್ಯ: ತಿಪ್ಪೇಸ್ವಾಮಿ

KannadaprabhaNewsNetwork |  
Published : Jan 05, 2024, 01:45 AM IST
ಚಿತ್ರ 1,2 | Kannada Prabha

ಸಾರಾಂಶ

ಇಂದಿನ ಮಕ್ಕಳಲ್ಲಿ ಭಾವೈಕ್ಯತೆ ಭಾವನೆ ಮೂಡಿಸುವುದು ಅತ್ಯವಶ್ಯಕವಾಗಿದೆ. ಮಕ್ಕಳಲ್ಲಿ ಭಾವೈಕ್ಯತೆ ಭಾವನೆ ಬಿತ್ತಿದ್ದರೆ ಅವಶ್ಯಕವಾಗಿ ಮಕ್ಕಳು ಉತ್ತಮ ಪ್ರಜೆಗಳಾಗುತ್ತಾರೆ.

ಹಿರಿಯೂರು: ಮಕ್ಕಳಲ್ಲಿ ಭಾವೈಕ್ಯತೆ ಮಾಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ನಗರದ ಗುರುಭವನದಲ್ಲಿ ಗುರುವಾರ ಭಾರತ ಸೇವಾದಳ ತಾಲೂಕು ಸಮಿತಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದವತಿಯಿಂದ ಸೇವಾದಳ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ರಾಷ್ಟ್ರೀಯ ಭಾವೈಕ್ಯತಾ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರ ನಿರ್ಮಾಣ ಮಾಡಲು ಭಾವೈಕ್ಯತೆಯ ಅಗತ್ಯತೆ ಇದ್ದು ಮಕ್ಕಳಿಗೆ ಶಿಸ್ತು, ದೇಶಾಭಿಮಾನ, ಸೇವಾ ಮನೋಭಾವನೆ ಮೂಡಿಸುವ ಕೆಲಸವಾಗಬೇಕಾಗಿದೆ. ಎಲ್ಲರೂ ಒಂದೇ ಸರ್ವರೂ, ಸಮಾನರು ಎಂಬ ಬೀಜ ಮಕ್ಕಳ ಮನದಲ್ಲಿ ಬಿತ್ತುವ ಅಗತ್ಯವಿದೆ. ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸಲು ಸೇವಾದಳ ಅತ್ಯವಶ್ಯವಾಗಿದೆ. ಸೇವಾದಳದ ಶಾರೀರಿಕ ಯೋಗ ಮತ್ತು ನೈತಿಕ ಶಿಕ್ಷಣವನ್ನು ಮಕ್ಕಳಿಗೆ ಅಳವಡಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಭಾರತ ಸೇವಾದಳ ಅಧ್ಯಕ್ಷ ಎಂ.ಪಿ.ತಿಪ್ಪೇಸ್ವಾಮಿ ಮಾತನಾಡಿ, ಸೇವಾದಳಕ್ಕೆ 100 ವರ್ಷ ತುಂಬಿದ ಅಂಗವಾಗಿ ಈ ಮಕ್ಕಳ ಮೇಳವನ್ನು ಆಯೋಜಿಸಲಾಗಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಸದ್ಭಾವನಾ ಗುಣಗಳನ್ನು ತುಂಬುವ ಕೆಲಸವಾಗಬೇಕು. ಸೇವೆಯ ಸಾರ್ಥಕತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು. ಕಾರ್ಯಕ್ರಮಕ್ಕೂ ಮುನ್ನ ಮಕ್ಕಳ ಜಾಥಾ ನಡೆಯಿತು. ಈ ಸಂದರ್ಭದಲ್ಲಿ

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮನೋಹರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಕುಮಾರ್, ವಲಯ ಸಂಘಟಕ ಅಣ್ಣಯ್ಯ, ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ತಿಪ್ಪೇರುದ್ರಪ್ಪ, ಸೇವಾದಳ ಜಿಲ್ಲಾ ಉಪಾಧ್ಯಕ್ಷ ಮಲ್ಕಪ್ಪ, ಉಪ ಪ್ರಾಂಶುಪಾಲ ಮೋಕ್ಷನಾಥ, ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಹಿರಿಯ ಕಾರ್ಯಕರ್ತರಾದ ಯೋಗಾನಂದ, ಶಿವಣ್ಣ, ಶ್ರೀನಿವಾಸ್, ಶಶಿಧರ್, ಬಾಲಾಜಿ ಯೋಗೇಶ್, ನಾಗರಾಜ್ ಹಾಗೂ ವಿವಿಧ ಶಾಲೆಯ ಮಕ್ಕಳು ಶಿಕ್ಷಕರು ಉಪಸ್ಥಿತರಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ