ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಪ್ರಾಂಶಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳಿಗೆ ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂಬಂಧ ನೀಡಲಾಗಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ಕಟ್ಟುನಿಟ್ಟಾಗಿ ಪರೀಕ್ಷೆ ಕೆಲಸ ಮಾಡಬೇಕು ಎಂದರು.
ಶಾಲಾ ಕಾಲೇಜುಗಳಲ್ಲಿ ಉಳಿದಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶ್ರಮವಹಿಸಿ ಅಧ್ಯಯನ ಮಾಡಲು ಉತ್ತೇಜಿಸಬೇಕು. ಜಿಲ್ಲೆಗೆ ಉತ್ತಮ ಫಲಿತಾಂಶ ಹಾಗೂ ಉನ್ನತ ಸ್ಥಾನ ಏರಲು ಪೂರಕವಾಗಿರುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು. ವಿಶೇಷ ತರಗತಿಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ತಿಳಿಸಿದರು.ಪರೀಕ್ಷಾ ದಿನಾಂಕಗಳು ಹತ್ತಿರವಾಗುತ್ತಿರುವ ಹಿನ್ನೆಲೆ ಗ್ರಾಪಂಯಲ್ಲಿರುವ ಗ್ರಂಥಾಲಯಗಳನ್ನು ಬೆಳಗಿನ ವೇಳೆ ಬೇಗನೆ ತೆರೆಯುವ ಅವಶ್ಯವಿದ್ದಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು. ಪೋಷಕರೊಂದಿಗೆ ಸಂಪರ್ಕದಲ್ಲಿದ್ದು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷಣ ಇಲಾಕೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಪರೀಕ್ಷಾ ಸಿದ್ದತೆಗಳ ಸಂಬಂಧ ವಿವರ ನೀಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕಾಶಿನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು.