ಹಾವೇರಿ:
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಲೋಕಸೇವಾ ಆಯೋಗದಿಂದ ೨೦೨೩-೨೪ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಪರೀಕ್ಷಾ ಮಾರ್ಗಸೂಚಿಗಳು, ಕೊಠಡಿ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ತ್ರಿ ಸದಸ್ಯ ಸಮಿತಿ ಸದಸ್ಯರಿಗೆ, ವೀಕ್ಷಕರ ಕರ್ತವ್ಯ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾರ್ಗಸೂಚಿಗಳನ್ನು ವಿವರಿಸಿದರು.
ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು.
ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಲಾಟರಿ ಮೂಲಕ ಕೊಠಡಿ ಮೇಲ್ವಿಚಾರಕರ ನೇಮಕ ಮಾಡಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಸಿಸಿ ಕ್ಯಾಮರಾ ಕಣ್ಗಾವಲಿನಲ್ಲೇ ಪ್ರಶ್ನೆ ಪತ್ರಿಕೆ ತೆರೆಯುವುದು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಸಹಾಯಕರನ್ನು ನೇಮಕ ಮಾಡಬೇಕು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
೭೯೦೮ ಅಭ್ಯರ್ಥಿಗಳು: ಸುಗಮ ಪರೀಕ್ಷೆಗಾಗಿ ಹಾವೇರಿ ನಗರದಲ್ಲಿ ೨೨ ಕೇಂದ್ರಗಳನ್ನು ತೆರೆಯಲಾಗಿದೆ. ೭೯೦೮ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ ೧೦ರಿಂದ ೧೨ ಗಂಟೆ ವರೆಗೆ ಹಾಗೂ ಮಧ್ಯಾಹ್ನ ೨ರಿಂದ ೪ ಗಂಟೆ ವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೂಲ ಪರೀಕ್ಷಾ ಪ್ರವೇಶ ಪತ್ರ ಹಾಗೂ ಐಡಿ ಕಾರ್ಡ್ ತರಬೇಕು ಎಂದರು.