ಬಾಬುಜಿ, ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆಗೆ ಸೂಚನೆ

KannadaprabhaNewsNetwork |  
Published : Mar 29, 2026, 02:00 AM IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ಮಟ್ಟದಲ್ಲಿ ಡಾ. ಬಾಬು ಜಗಜೀವನರಾಂ 119ನೇ ಜನ್ಮದಿನಾಚರಣೆ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ 135ನೇ ಜನ್ಮ ದಿನಾಚರಣೆ ವಿಜೃಂಭಣೆ ಹಾಗೂ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

ಹಾವೇರಿ: ಜಿಲ್ಲಾ ಮಟ್ಟದಲ್ಲಿ ಡಾ. ಬಾಬು ಜಗಜೀವನರಾಂ 119ನೇ ಜನ್ಮದಿನಾಚರಣೆ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ 135ನೇ ಜನ್ಮ ದಿನಾಚರಣೆ ವಿಜೃಂಭಣೆ ಹಾಗೂ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರವರ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆ ಏರ್ಪಡಿಸಿದ್ದ ಪೂರ್ವ ಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಸಮಾಜ ಮುಖಂಡರೊಂದಿಗೆ ಚರ್ಚಿಸಿ ಅವರು ಮಾತನಾಡಿದರು.ಏಪ್ರಿಲ್ 5ರಂದು ಡಾ. ಬಾಬು ಜಗಜೀವನರಾಂ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಗುವುದು. ಏ.14ರಂದು ಉಭಯ ನಾಯಕರ ಜಯಂತಿಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಗುವುದು ಎಂದರು.ಏ.14ರಂದು ಬೆಳಗ್ಗೆ 9 ಗಂಟೆಗೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತಿಯಿಂದ ಸಾರೋಟಿನಲ್ಲಿ ಉಭಯ ನಾಯಕರ ಭಾವಚಿತ್ರ ಮೆರವಣಿಗೆ ಹೊರಟು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ.ಬಿ.ಆರ್. ಅಂಬೇಡ್ಕರ್ ಭವನ ಸೇರಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಸಮಾಜದ ಮುಖಂಡರು ಯಶಸ್ವಿ ಕಾರ್ಯಕ್ರಮ ಆಯೋಜನೆಗೆ ಸಹಕಾರ ನೀಡಬೇಕು ಎಂದರು.ಮೆರವಣಿಗೆಗೆ ಕಲಾ ತಂಡ, ವೇದಿಕೆ ಅಲಂಕಾರ, ಸ್ವಚ್ಛತೆ, ಆಸನ, ಆಮಂತ್ರಣ ಪತ್ರಿಕೆ, ಉಪನ್ಯಾಸಕ ಆಯ್ಕೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಪುನಿತ್, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಪ್ರಶಾಂತ ವರಗಪ್ಪನವರ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಫಾಯಿ ಕರ್ಮಚಾರಿಗಳ ಸೇವೆ ಅತ್ಯಮೂಲ್ಯ: ಜಿಲ್ಲಾಧಿಕಾರಿ ಸಿ ಎನ್. ಶ್ರೀಧರ್‌
ಹೆಣ್ಣಿನ ಸಾಮರ್ಥ್ಯ ಅಡುಗೆ ಮನೆಯಿಂದ ಆಕಾಶದಗಲಕ್ಕೆ-ಡಾ. ದಾನಮ್ಮನವರ