ವಿಜಯಪುರ: ನಗರದ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ, ಪ್ರಯಾಣಿಕರಿಗೆ ಕಲ್ಪಿಸಿರುವ ಮೂಲಸೌಕರ್ಯ ಹಾಗೂ ಸ್ವಚ್ಛತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ವಿಜಯಪುರ: ನಗರದ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಿ, ಪ್ರಯಾಣಿಕರಿಗೆ ಕಲ್ಪಿಸಿರುವ ಮೂಲಸೌಕರ್ಯ ಹಾಗೂ ಸ್ವಚ್ಛತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಸುಸ್ಥಿತಯಲ್ಲಿರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗರಾಯ ನಂದಗಾವಿ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ ಪಾಟೀಲ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಮಹಾನಗರಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಕೆಕೆಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ, ಡಿವೈಎಸ್ಪಿ ಮಲ್ಲಿಕಾರ್ಜುನ ತುಳಸಿಗೇರಿ, ಸಿಪಿಐ ಆನಂದ ಟಕ್ಕಣ್ಣವರ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.