ಅನುಮೋದನೆಗೊಂಡ ಕಾಮಗಾರಿ ಅನುಷ್ಠಾನಕ್ಕೆ ಸೂಚನೆ

KannadaprabhaNewsNetwork |  
Published : May 30, 2025, 12:06 AM IST
29ಸಿಎಚ್‌ಎನ್55ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ನಿಲಯದಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಡೆಸಿದರು. | Kannada Prabha

ಸಾರಾಂಶ

ಸಂತೇಮರಹಳ್ಳಿಯಲ್ಲಿರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ನಿಲಯದಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಕಾಮಗಾರಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಅವರು ಸೂಚನೆ ನೀಡಿದರು.

ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ನಿಲಯದಲ್ಲಿ ನಡೆದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯಲ್ಲಿ ಜಿಲ್ಲಾ ಕೇಂದ್ರದ ಡಾ.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಅನುಮೋದನೆಗೊಂಡ ಕಾಮಗಾರಿಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ನೆಟ್ ಬಾಲ್, ಬಾಸ್ಕೆಟ್ ಬಾಲ್, ಲಾನ್ ಟೆನ್ನಿಸ್, ನಿರ್ಮಾಣಕ್ಕೆ ಅಗತ್ಯವಾದ ಸ್ಥಳಾವಕಾಶವನ್ನು ಕ್ರೀಡಾಂಗಣದಲ್ಲಿ ಅಣಿಗೊಳಿಸಲು ತೀರ್ಮಾನಿಸಲಾಯಿತು. ನೂತನವಾಗಿ 50ಮೀ ರೈಸಿಂಗ್ ಪೂಲ್, 25ಮೀ ಪ್ರಾಕ್ಟಿಸ್ ಪೂಲ್ ಮತ್ತು ಬೇಬಿ ಪೂಲ್ ಒಳಗೊಂಡಂತೆ ಒಳಾಂಗಣ ಅಕ್ವೆಟಿಕ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸುಸಜ್ಜಿತವಾಗಿ ನಿರ್ಮಿಸಲು ಹಾಗೂ ಅಪೂರ್ಣಗೊಂಡ ಪೆವಿಲಿಯನ್, ಪಶ್ಚಿಮ ಭಾಗದಲ್ಲಿ ಸುತ್ತುಗೋಡೆ ಇನ್ನಿತರ ಕಾಮಗಾರಿಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಯಿತು.

ಸಂತೇಮರಹಳ್ಳಿಯ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿನಿಲಯಕ್ಕೆ ಪರಿಶಿಷ್ಟ ಪಂಗಡದ ಬಾಲಕಿಯರಿಗೆ ಪ್ರವೇಶಾತಿ ನೀಡುವ ಅನುಮತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನಿಸಲಾಯಿತು. ಕೊಳ್ಳೇಗಾಲ ತಾಲೂಕು ಕ್ರೀಡಾಂಗಣದಲ್ಲಿ ಅಪೂರ್ಣಗೊಂಡಿರುವ ಒಳ ಕ್ರೀಡಾಂಗಣ ಮತ್ತು ಜಿಮ್ ಕಟ್ಟಡ ಪೂರ್ಣಗೊಳಿಸಲು ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಹಾಗೂ ನೂತನವಾಗಿ ಬಾಸ್ಕೆಟ್ ಬಾಲ್ ಅಂಕಣವನ್ನು ನಿಗದಿಪಡಿಸಿದ ಸ್ಥಳದಲ್ಲೇ ನಿರ್ಮಾಣ ಮಾಡಲು ನಿರ್ಣಯಿಸಲಾಯಿತು.

ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿರುವ ಮತ್ತು ಸಂತೇಮರಹಳ್ಳಿಯಲ್ಲಿರುವ ಕ್ರೀಡಾ ವಸತಿ ನಿಲಯದ ಕ್ರೀಡಾ ಪಟುಗಳಿಗೆ ಉತ್ತಮ ಗುಣಮಟ್ಟದ ಊಟ, ಉಪಹಾರ, ವೈಜ್ಞಾನಿಕ ತರಬೇತಿ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಿ ಕ್ರೀಡಾಪಟುಗಳ ಮುಂದಿನ ಭವಿಷ್ಯ ರೂಪಿಸಲು ಅಧಿಕಾರಿಗಳು, ತರಬೇತುದಾರರು ಶ್ರಮಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚಿಸಿದರು. ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌