ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ನಗರದ ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ನಡೆಸುವ ಮೂಲಕ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ, ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಹಾಗೂ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದರು.ಬೆಳಿಗ್ಗೆ 7 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಹಾಗೂ ಸಮರ್ಪಕವಾಗಿ ಆಯೋಜಿಸುವ ಸಂಬಂಧ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಪಹಾರ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆಗೆ ವ್ಯವಸ್ಥೆ, ಭದ್ರತೆ, ವಿದ್ಯುತ್ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯುಷ್ ಇಲಾಖೆಯ ಅಧಿಕಾರಿಗಳು ಇತರ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕಾರ್ಯಕ್ರಮಕ್ಕೆ 2000 ಕ್ಕಿಂತಲೂ ಹೆಚ್ಚಿನ ಜನರನ್ನು ಸೇರಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಹಾಗೂ ಇತರ ಇಲಾಖೆಯವರು ಸಹಕಾರ ನೀಡಲು ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಜಿಪಂ ಉಪಕಾರ್ಯದರ್ಶಿ ಅತಿಕ್ ಪಾಷಾ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಎಂ.ಎಲ್ ಸಂದರರಾಜ, ಪತಂಜಲಿ ಯೋಗ ಸಂಸ್ಥೆಯ ಜಿ.ಗೋವಿಂದ, ಯೋಗ ಗುರುಗಳಾದ ಡಾ.ಎನ್.ಲೋಕನಾಥ್, ನಾಗರಾಜ್, ವೀಣಾ ಲೋಕನಾಥ್ , ಪೌರಾಯುಕ್ತ ಮನ್ಸೂರ್ ಆಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ಧೇಶಕ ವೆಂಕಟೇಶರೆಡ್ಡಿ, ಯೋಗ ಶಿಕ್ಷಕರು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಸಿಕೆಬಿ-2 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸುವ ಕುರಿತು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿದರು.