ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸೂಚನೆ

KannadaprabhaNewsNetwork |  
Published : Sep 02, 2026, 03:15 AM IST
ಶಾಸಕ ಸಿ.ಬಿ.ಸುರೇಶ್‌ಬಾಬು ಸೋಮವಾರ ಪಟ್ಟಣದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಬೇಟಿ ನೀಡಿ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯನ್ನು ನಡೆಸಿದರು. | Kannada Prabha

ಸಾರಾಂಶ

ಅಂಗನವಾಡಿಗಳಲ್ಲಿನ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ. ಅಗತ್ಯವಿರುವ ಕಡೆಗಳಲ್ಲಿ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕನಾಯಕನಹಳ್ಳಿ

ಅಂಗನವಾಡಿಗಳಲ್ಲಿನ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ. ಅಗತ್ಯವಿರುವ ಕಡೆಗಳಲ್ಲಿ ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.ಪಟ್ಟಣದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಇಲಾಖೆಯ ಪ್ರಗತಿ ಪರೀಶಿಲನೆ ನಡೆಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಮಾಹಿತಿಯನ್ನು ತಿಳಿಸಿ. ಅವುಗಳನ್ನು ಭರ್ತಿ ಮಾಡಲು ಅಗ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು. ಅಪೌಷ್ಠಿಕತೆಯಿಂದ ಇರುವಂತಹ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಿ, ಗರ್ಭಿಣಿ, ಬಾಣಂತಿಯರ ಬಗ್ಗೆ ಕಾಳಜಿವಹಿಸುವಂತೆ ಅಂಗವಾಡಿಗಳ ಕಾರ್ಯಕರ್ತೆಯರಿಗೆ ಸೂಚನೆ ನೀಡುವಂತೆ ಹೇಳಿದ ಅವರು ತಾಲೂಕಿನಲ್ಲಿರುವ ಎಲ್ಲಾ ಅಂಗನವಾಡಿಗಳಿಗೆ ಸ್ಥಳೀಯ ಗ್ರಾಮಪಂಚಾಯಿತಿವತಿಯಿಂದ ಮೂಲಭೂತ ಸೌಲಭ್ಯಗಳೊಂದಿಗೆ ಕಟ್ಟಡ ಜಾಗದ ಬಗ್ಗೆ ಈ ಸ್ವತ್ತನ್ನು ಮಾಡಿಕೊಡುವಂತೆ ಸೂಚನೆ ನೀಡಲಾಗುವುದು.

ಈಗ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆಯ ಬೆಲೆ ಹೆಚ್ಚಾಗಿದ್ದು ಸರ್ಕಾರ ೬ರುಪಾಯಿ ನೀಡುತ್ತಿದೆ ಅದರೆ ಮಾರಕಟ್ಟೆಯಲ್ಲಿ ೮ರುಪಾಯಿ ಇದೆ ಅದಕ್ಕೆ ಮೊಟ್ಟೆಯನ್ನು ಸರಿಯಾಗಿ ವಿತರಿಸಲು ಸಾದ್ಯವಾಗುತ್ತಿಲ್ಲ ಹೆಚ್ಚಾದ ಮೊಟ್ಟೆಯ ಬೆಲೆ ನೀಡಬೇಕು ಈ ಬಗ್ಗೆ ಸರ್ಕಾರದೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಹೊನ್ನಪ್ಪ ಮಾಹಿತಿ ನೀಡಿದರು. ಸಭೆಯಲ್ಲಿ ತಾಲೂಕಿನ ಎಸಿಡಿಪಿಒ ಸೋಮಶೇಖರ್, ಲಕ್ಷ್ಮೀ, ಶಾರದಮ್ಮ, ಲೀಲಾಬಾಯಿ, ರಮ್ಯ, ಸೌಮ್ಯ, ರೇಖಾ ಬಿ, ಸುನೀಲ್, ಸಂತೋಷ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದ ಮಾರ್ಗಸೂಚಿಯಂತೆ ಬರ ಘೋಷಣೆ: ಸಿಎಂ
ಕ್ಷೇತ್ರದಲ್ಲಿ 21 ಕೆಪಿಎಸ್ ಶಾಲೆಗಳ ಮಂಜೂರು-ಶಾಸಕ ಪಠಾಣ