ಎಲ್ಲ ಆಸ್ಪತ್ರೆಗಳ ಕಟ್ಟಡ ಪರಿಶೀಲಿಸಲುಸೂಚನೆ: ಶರಣ್‌ ಪ್ರಕಾಶ್ ಪಾಟೀಲ್

KannadaprabhaNewsNetwork |  
Published : May 01, 2026, 03:30 AM IST
Hospital

ಸಾರಾಂಶ

ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿತದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್‌ಗೆ ಆದೇಶಿಸಲಾಗಿದೆ. ಎಲ್ಲ ಆಸ್ಪತ್ರೆಯ ಕಟ್ಟಡ ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಇಲಾಖಾ ಅಧಿಕಾರಿಗಳಿಗೆ ಸೂಚನೆ

 ಬೆಂಗಳೂರು :  ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿತದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್‌ಗೆ ಆದೇಶಿಸಲಾಗಿದೆ. ಜತೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡ ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಮೃತ

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳು, ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ವೇಳೆ ಇನ್ನು ಮುಂದೆ ಇಲಾಖಾ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಇಂತಹ ದುರ್ಘಟನೆ ನಡೆಯದಂತೆ ಎಚ್ಚರವಹಿಸುತ್ತೇವೆ ಎಂದು ಭರವಸೆ ನೀಡಿದರು. ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ತಜ್ಞರ ತಂಡದಿಂದ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್‌ ಮೊಹಿಸಿನ್‌ ಮಾತನಾಡಿದರು. 

ಇಬ್ಬರಿಗೆ ಗಂಭೀರ ಗಾಯ: ಸಚಿವ

ಬುಧವಾರದ ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡಿದ್ದ 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರಲ್ಲಿ ಇಬ್ಬರಿಗೆ ಗಂಭೀರ ಗಾಯ ಆಗಿದೆ. ಒಬ್ಬರಿಗೆ ಶಸ್ತ್ರಚಿಕಿತ್ಸೆಗೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಸಚಿವ ಶರಣ್‌ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ದಕ್ಷತೆ, ಪಾರದರ್ಶಕತೆ ಇದ್ದರೆ ಸಂಘಟನೆ ಪ್ರಗತಿ: ಮಲ್ಲಿಕಾರ್ಜುನ ಬಳ್ಳಾರಿ
ಫಾಸ್ಟ್‌ಫುಡ್‌ ಬದಲು ತರಕಾರಿ, ಹಣ್ಣು ದೇಹಕ್ಕೆ ಉತ್ತಮ