ಕನ್ನಡಪ್ರಭ ವಾರ್ತೆ ಸಿಂಧನೂರು
ನಗರದ ನಗರಸಭೆ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಮೂರನೇ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ವಿವಿಧ ಪಕ್ಷಗಳು, ಸಂಘ-ಸಂಸ್ಥೆಗಳು ಸೇರಿದಂತೆ ತಾಲ್ಲೂಕಿನ ಜನತೆಯನ್ನು ಒಳಗೊಳ್ಳುವಂತೆ ಕಾರ್ಯಕ್ರಮ ಆಯೋಜಿಸಬೇಕು. ಎಲ್ಲ ಕಾರ್ಯಕ್ರಮಗಳಲ್ಲಿ ಸಚಿವರು, ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ, ಸೆ.22 ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಪತಿಗಳಿಂದ ದಸರಾ ಉತ್ಸವ ಉದ್ಘಾಟನೆಯಾಗಲಿದ್ದು, ಕಳೆದ ವರ್ಷಕ್ಕಿಂತ ಭಿನ್ನವಾಗಿ ಈ ಬಾರಿ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ, ಕ್ರೀಡೆಗಳಿಗೆ ಉತ್ತೇಜನೆ ನೀಡುವ ನಿಟ್ಟಿನಲ್ಲಿ ಐದು ಪಂಚಾಯಿತಿ ಒಳಗೊಂಡು ಒಂದು ಸ್ಥಳದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರಂತೆ ತಾಲ್ಲೂಕು ವ್ಯಾಪ್ತಿಯ ಬರುವ 25 ಗ್ರಾಮ ಪಂಚಾಯಿತಿಗಳನ್ನು ಒಳಗೊಳ್ಳುವಂತೆ ಐದು ಕಡೆಗಳಲ್ಲಿ ಸಭೆ ಮಾಡಿ ಅಲ್ಲಿಯೇ ಕಾರ್ಯಕ್ರಮ ಆಯೋಜಿಸುವ ಕುರಿತು ರೂಪುರೇಷ ತಯಾರಿಸಲಾಗುವುದು ಎಂದರು.ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ, ಕಳೆದ ವರ್ಷ ಆಗಿರುವ ಸಣ್ಣಪುಟ್ಟ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಈ ಬಾರಿ ದಸರಾ ಆಚರಿಸಬೇಕು ಎಂದು ತಿಳಿಸಿದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ದಸರಾ ಉತ್ಸವದಲ್ಲಿ ಎಲ್ಲ ಧರ್ಮೀಯರು ಭಾಗವಹಿಸಿ ಸಹಕಾರ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಡಿವೈಎಸ್ಪಿ ಬಿ.ಎಸ್.ತಳವಾರ, ನಗರಸಭೆ ಪ್ರಭಾರಿ ಪೌರಾಯುಕ್ತೆ ಶೃತಿ ಕೆ ಹಾಗೂ ಸದಸ್ಯರು ಇದ್ದರು.