ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಸೂಚನೆ

KannadaprabhaNewsNetwork |  
Published : May 13, 2025, 11:47 PM IST
೧೩ಕೆಎಲ್‌ಆರ್-೨ಕೋಲಾರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ದೇಶದಲ್ಲಿ ಯುದ್ದ ಸನ್ನಿವೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ತುರ್ತು ಮುಂಜಾಗ್ರತಾ ಕ್ರಮಗಳ ಕುರಿತು ಜರುಗಿದ ವಿಪತ್ತು ನಿರ್ವಹಣೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರೀಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜತೆ ನೇರ ಸಂಪರ್ಕದಲ್ಲಿರಬೇಕು.

ಸಭೆ ಕೈಗೊಂಡ ನಿರ್ಧಾರ

ಮಾರ್ಕಂಡೆಯ ಡ್ಯಾಂ, ಕೆಇಬಿ ಪವರ್ ಗ್ರಿಡ್‌ಗೆ ಬಂದೋಬಸ್ತ್‌

.. ಜಿಲ್ಲಾ ದೊಡ್ಡ ಆಸ್ಪತ್ರೆಗೆ ವಿಶೇಷ ಭದ್ರತೆ ಕಲ್ಪಿಸಬೇಕು.

3......... ಜನಸಾಮಾನ್ಯರಲ್ಲಿ ಆತ್ಮಸ್ಥೈರ್ಯ ತುಂಬ ಕಾರ್ಯಕ್ರಮ4.......... ಸುಳ್ಳು ಸುದ್ದಿಗಳ ಹರಡದಂತೆ ಜನತೆಗೆ ಸೂಚನೆ5.......... ಮಾಧ್ಯಮಗಳಿಗೆ ಸುದ್ದಿ ನೀಡಲು ನೋಡಲ್ ಅಧಿಕಾರಿ ನೇಮಕ

ಕನ್ನಡಪ್ರಭ ವಾರ್ತೆ ಕೋಲಾರದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸರ್ವ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕರೆ ನೀಡಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ದೇಶದಲ್ಲಿ ಯುದ್ದ ಸನ್ನಿವೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜರುಗಿದ ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನಸಂದಣಿ ಸ್ಥಳದಲ್ಲಿ ನಿಗಾ ವಹಿಸಿಜಿಲ್ಲೆಯಲ್ಲಿ ಪ್ರಮುಖ ಸ್ಥಳಗಳು, ದೇವಾಲಯ, ಮಸೀದಿ, ಚರ್ಚ, ಜನಸಂದಣಿ ಇರುವ ಪ್ರದೇಶಗಳಲ್ಲಿ ಒಂದು ವೇಳೆ ಅಹಿತಕರ ಘಟನೆ ನಡೆದರೆ ಪೂರ್ವ ತಯಾರಿಯಾಗಿ ಸಾರ್ವಜನಿಕರ ರಕ್ಷಣಾ ಕಾರ್ಯದ ಕಡೆ ನಿಗಾ ವಹಿಸಬೇಕು. ತಾಲೂಕು ಮಟ್ಟದಲ್ಲಿಯೂ ಸಹ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ ಇಲಾಖೆಯ ಸಮನ್ವಯತೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ಜರುಗಿಸಬೇಕು ಎಂದು ಸೂಚಿಸಿದರು. ಮಾಜಿ ಸೈನಿಕರು ಎನ್‌ಸಿಸಿ, ಎನ್‌ಎಸ್‌ಎಸ್ , ಪೊಲೀಸ ಇಲಾಖೆಯವರು ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಮಾರ್ಗಸೂಚಿ ಪಾಲಿಸಿ

ಕೆಜಿಎಫ್ ಎಸ್‌ಪಿ ಶಾಂತರಾಜ್ ಮಾತನಾಡಿ, ಯುದ್ದ ಸನ್ನಿವೇಶದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿಗಳ ಪಾಲನೆ ಅವಶ್ಯವಾಗಿದೆ. ಆರೋಗ್ಯ ಇಲಾಖೆಯವರು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಔ?ಧಿಗಳ ಸರಬರಾಜು, ವೈದ್ಯಕೀಯ ಸೇವೆ, ಆಕ್ಸಿಜನ್, ಆಂಬ್ಯುಲನ್ಸ್ ಗಳ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಅಗತ್ಯಕ್ಕನುಗುಣವಾಗಿ ಸಾರ್ವಜನಿಕರ ರಕ್ಷಣೆಗಾಗಿ ಅಗ್ನಿ ಶಾಮಕ, ಕಂದಾಯ, ಯುವಜನ ಸೇವೆ, ಲೋಕೋಪಯೋಗಿ, ಅಹಾರ , ಶಿಕ್ಷಣ , ಸಾರಿಗೆ , ಬೆಸ್ಕಾಂ, ಪೊಲೀಸ ಇಲಾಖೆಯವರು ಕಾರ್ಯನಿರ್ವಹಣೆಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಬೇಕು ಎಂದರು.ನಿವೃತ್ತ ಸೈನಿಕರಿಗೂ ಸಹ ಪ್ರತ್ಯೇಕ ಜವಾಬ್ದಾರಿಯನ್ನು ಕೊಡಲಾಗುತ್ತದೆ. ಮಾಕ್ ಡ್ರಿಲ್ ಕಾರ್ಯಕ್ರಮ ಕೈಗೊಳ್ಳಬೇಕು. ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳ ಸಂಘಟನೆಯೊಂದಿಗೆ ನಾಗರಿಕರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವಾಗಬೇಕು. ಜಿಲ್ಲೆಯಲ್ಲಿನ ಜಲ ಸ್ಥಾವರಗಳು, ಆಸ್ಪತ್ರೆ , ಕೈಗಾರಿಕೆ, ಧಾರ್ಮಿಕ ಕೇಂದ್ರಗಳು, ವೈರ್‌ಲೆಸ್ ಕಂಟ್ರೋಲ್ ರೂಮ್ ಸ್ಥಾಪಿಸಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಮಾತನಾಡಿ, ಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರೀಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜತೆ ನೇರ ಸಂಪರ್ಕದಲ್ಲಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ರವಿಶಂಕರ್ ಅವರು ವಿವಿಧ ಇಲಾಖೆಗಳು ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು. ಸಭೆಯಲ್ಲಿ ಎಸಿ ಡಾ.ಮೈತ್ರಿ, ಡಿಡಿಪಿಐ ಕೃ?ಮೂರ್ತಿ ಇದ್ದರು.

PREV

Recommended Stories

ನಾಲ್ಕು ಜಿಲ್ಲೆಗಳಲ್ಲಿ ಮಳೆ ಆರ್ಭಟ : ಬೆಳೆ ಹಾನಿ ಆತಂಕದಲ್ಲಿ ರೈತರು
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌