ಲಂಬಾಣಿ ತಾಂಡಾಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಸೂಚನೆ

KannadaprabhaNewsNetwork |  
Published : Oct 30, 2025, 02:15 AM IST
ಗಜೇಂದ್ರಗಡ ಸಮೀಪದ ಲಕ್ಕಲಕಟ್ಟಿ ತಾಂಡಾಕ್ಕೆ ತಾಪಂ ಇಒ ಭೇಟಿ ನೀಡಿದರು. | Kannada Prabha

ಸಾರಾಂಶ

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಲಕ್ಕಲಕಟ್ಟಿ ತಾಂಡಾದ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆ ಬುಧವಾರ ತಾಂಡಾಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಆಲಿಸಿದರು.

ಗಜೇಂದ್ರಗಡ: ತಾಲೂಕಿನ ತಾಂಡಾ ನಿವಾಸಿಗಳಿಗೆ ಮೂಲ ಸೌಲಭ್ಯಗಳ ಪೂರೈಕೆಯಲ್ಲಿ ಲೋಪದೋಷಗಳಾಗದಂತೆ ನೋಡಿಕೊಳ್ಳಿ ಎಂದು ಗ್ರಾಪಂ ಸಿಬ್ಬಂದಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಸೂಚಿಸಿದರು.

ನಿರಂತರ ವಿದ್ಯುತ್ ಹಾಗೂ ಸಮರ್ಪಕ ನೀರು ಪೂರೈಕೆಗೆ ದೂರವಾಣಿ ಮೂಲಕ ಕರೆ ಮಾಡಿ ಸಮೀಪದ ಲಕ್ಕಲಕಟ್ಟಿ ತಾಂಡಾದ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆ ಬುಧವಾರ ತಾಂಡಾಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಆಲಿಸಿದರು.ಲಕ್ಕಲಕಟ್ಟಿ ತಾಂಡಾದಲ್ಲಿ ೫೦ಕ್ಕೂ ಅಧಿಕ ಕುಟುಂಬಗಳಿದ್ದು, ತಾಂಡಾದಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದರು. ಹೀಗಾಗಿ ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನಿರಂತರ ವಿದ್ಯುತ್ ಸಂಪರ್ಕವಿಲ್ಲದ ಪರಿಣಾಮ ತಾಂಡಾ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ನಿರಂತರ ವಿದ್ಯುತ್ ಸಂಪರ್ಕ ನೀಡಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ ತಾಪಂ ಇಒ ಅವರು, ತಾಂಡಾಕ್ಕೆ ಸಮರ್ಪಕ ಕುಡಿಯುವ ನೀರು ಹಾಗೂ ತಾಂಡಾದಲ್ಲಿ ಸ್ವಚ್ಛತೆ ಕಾರ್ಯ ನಿರಂತರವಾಗಿ ಕೈಗೊಂಡು ವಾತಾವರಣ ಸ್ವಚ್ಛವಾಗಿ ಇಟ್ಟುಕೊಳ್ಳಲು ಶ್ರಮಿಸಬೇಕು. ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಪಂಗೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು. ತಾಂಡಾ ನಿವಾಸಿಗಳು ಇ- ಕೆವೈಸಿ ಮಾಡಿಸಿಕೊಂಡು ನರೇಗಾ ಯೋಜನೆ ಸದುಪಯೋಗ ಪಡೆಯಿರಿ. ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಲು ಕೂಲಿಕಾರರಿಗೆ ಕೇಂದ್ರ ಸರ್ಕಾರ ಇ- ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಅ. ೩೧ರೊಳಗಾಗಿ ಲಕ್ಕಲಕಟ್ಟಿ ತಂಡಾದ ನರೇಗಾ ಕೂಲಿಕಾರರೆಲ್ಲರೂ ಇ- ಕೆವೈಸಿ ಮಾಡಿಸಿಕೊಳ್ಳಬೇಕು. ಇಲ್ಲವೇ ನರೇಗಾ ಉದ್ಯೋಗ ಚೀಟಿ ರದ್ದಾಗುವ ಸಾಧ್ಯತೆ ಹೆಚ್ಚು ಎಂದರು.

ಈ ಸಂದರ್ಭದಲ್ಲಿ ಲಕ್ಕಲಕಟ್ಟಿ ಗ್ರಾಪಂ ಪಿಡಿಒ ಶಿವಯೋಗಿ ರಿತ್ತಿ, ಕಾರ್ಯದರ್ಶಿ ಶರಣಪ್ಪ ಮೇಟಿ, ತಾಂಡಾ ರೋಜಗಾರ ಮಿತ್ರ ಸಕ್ಕುಬಾಯಿ ರಾಥೋಡ, ಗ್ರಾಮ ಕಾಯಕ ಮಿತ್ರ ಸುಜಾತ ಮ್ಯಾಗೇರಿ ಸೇರಿ ಇತರರು ಇದ್ದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು