ಪಿ.ಜಿ.ಪಾಳ್ಯ ಗ್ರಾಮದ ವಯೋವೃದ್ಧೆ ಮನೆಗೆ ಇ-ಸ್ವತ್ತು ನೀಡುವಂತೆ ಸೂಚನೆ

KannadaprabhaNewsNetwork |  
Published : Mar 23, 2025, 01:36 AM IST
ಪಿ.ಜಿ. ಪಾಳ್ಯ ಗ್ರಾಮದ ವಯೋವೃದ್ದೆ ಮನೆಗೆ ಈ ಸ್ವತ್ತು ನೀಡುವಂತೆ  ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ  | Kannada Prabha

ಸಾರಾಂಶ

ಹನೂರು ತಾಲೂಕಿನ ಪಾಳ್ಯ ಗ್ರಾಮದ ವೃದ್ಧೆಗೆ ಇ-ಸ್ವತ್ತು ನೀಡುವಂತೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆದೇಶ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹನೂರುಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಪಿ.ಜಿ.ಪಾಳ್ಯ ಗ್ರಾಮದ ವಯೋವೃದ್ದೆ ಮನೆಗೆ ಇ-ಸ್ವತ್ತು ನೀಡುವಂತೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಮದ ವೃದ್ಧೆಯೋರ್ವೆ ತಮ್ಮ ನಿವೇಶನಕ್ಕೆಇ-ಸ್ವತ್ತು ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ದೂರನ್ನು ನೀಡಿದ್ದರು. ಈ ಹಿನ್ನೆಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಗಳು ಸಮಗ್ರ ಪರಿಶೀಲಿಸಿ, ಸೂಕ್ತ ಕ್ರಮವನ್ನು ಕೈಗೊಳ್ಳಲು ಆದೇಶಿಸಿದ್ದಾರೆ. ಮಾ.7ರಂದು ನೆಡೆದ ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಪಿಜಿಪಾಳ್ಯ ಗ್ರಾಮದ ಶಿವರುದ್ರಮ್ಮ ಎಂಬ ವೃದ್ಧೆ ನನಗೆ ಸೇರಿದ ನಿವೇಶನಕ್ಕೆ ಹಲವು ವರ್ಷಗಳಿಂದ ಕಂದಾಯವನ್ನು ಕಟ್ಟಿಕೊಂಡು ಬಂದಿರುತ್ತೇವೆ ಆದರೂ ಕೂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಇ-ಸ್ವತ್ತು ನೀಡಲು ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ ಇ-ಸ್ವತ್ತು ನೀಡಿ ನಮಗೆ ಮನೆ ಕಟ್ಟಲು ಅವಕಾಶ ಮಾಡಿಕೊಡಿ ಎಂದು ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದರು.

ಸೂಚನೆ: ಈ ಹಿನ್ನೆಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಶ್ರೀನಿವಾಸ್, ಪಿಜಿ ಪಾಳ್ಯ ಗ್ರಾಮದ ವೃದ್ಧೆಗೆ ಆದ್ಯತೆಯ ಮೇರೆಗೆ ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಂಡು ಗ್ರಾಮ ಪಂಚಾಯಿತಿ ವತಿಯಿಂದ ಅನುಕೂಲ ಕಲ್ಪಿಸುವಂತೆ ಸೂಚಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು