ಕಾಂಗ್ರೆಸ್‌ನಿಂದ ಸಂವಿಧಾನಾತ್ಮಕ ಹುದ್ದೆಗೆ ಅವಮಾನ

KannadaprabhaNewsNetwork |  
Published : Jul 17, 2025, 12:36 AM IST
೧೬ಬಿಎಸ್ವಿ೦೨- ಬಸವನಬಾಗೇವಾಡಿ ಬಸವ ಭವನದಲ್ಲಿ ಜನರೊಂದಿಗೆ ಜನತಾದಳ ಹಾಗೂ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಅನುದಾನ ಬೇಕಾದರೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಹತ್ತಿರ ಹೋದರೆ ಮಾತ್ರ ಅನುದಾನ ಸಿಗುತ್ತದೆ. ಸಿಎಂ ಸಿದ್ದರಾಮಯ್ಯನವರು ಹೆಸರಿಗೆ ಮಾತ್ರ ಸಿಎಂ ಆಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಸಂವಿಧಾನಾತ್ಮಕ ಸಿಎಂ ಹುದ್ದೆಗೆ ಮಾಡುತ್ತಿರುವ ಅಪಮಾನ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಅನುದಾನ ಬೇಕಾದರೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಹತ್ತಿರ ಹೋದರೆ ಮಾತ್ರ ಅನುದಾನ ಸಿಗುತ್ತದೆ. ಸಿಎಂ ಸಿದ್ದರಾಮಯ್ಯನವರು ಹೆಸರಿಗೆ ಮಾತ್ರ ಸಿಎಂ ಆಗಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಸಂವಿಧಾನಾತ್ಮಕ ಸಿಎಂ ಹುದ್ದೆಗೆ ಮಾಡುತ್ತಿರುವ ಅಪಮಾನ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ಪಟ್ಟಣದ ಬಸವಭವನದಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ, ಸದಸ್ಯತ್ವ ಅಭಿಯಾನ ಹಾಗೂ ಬೃಹತ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನರ ಮೇಲೆ ತೆರಿಗ ಹೊರೆ ಹಾಕುತ್ತಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ನಿರಂತರವಾಗಿ ನಡೆಯುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತಿಹಾಕಿ ಮುಂಬರುವ ೨೦೨೮ ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಮತ್ತೆ ರಾಜ್ಯದಲ್ಲಿ ಕುಮಾರಸ್ವಾಮಿ ಸಿಎಂ ಆಗುವ ಆಶಾಭಾವವಿದೆ. ಅದಕ್ಕಾಗಿ ನಿರಂತರವಾಗಿ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ನಾನು ಪ್ರವಾಸ ಮಾಡುತ್ತೇನೆ. ರಾಜ್ಯದ ಸಮಗ್ರ ಅಭಿವೃದ್ದಿಗೆ ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗಬೇಕೆಂಬುವದೇ ನನ್ನ ಕನಸಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಅಪ್ಪುಗೌಡ ಪಾಟೀಲ ಮನಗೂಳಿ ಅಧಿಕಾರಕ್ಕೆ ಬರಬೇಕಿದೆ ಎಂದರು. ರಾಜ್ಯದಲ್ಲಿ ೨೦ ತಿಂಗಳ ಕಾಲ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ರಾಜ್ಯಕ್ಕೆ ನೀಡಿದ ಜನಪರ ಯೋಜನೆಗಳು ಮರೆಯುವಂತಿಲ್ಲ. ಅವರು ಮೂರು ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದರೂ ಚಾಮುಂಡೇಶ್ವರಿ ದೇವಿ, ದೇವೇಗೌಡ ಹಾಗೂ ಕಾರ್ಯಕರ್ತರ ಪ್ರಾರ್ಥನೆಯಿಂದ ಜನರ ಸೇವೆ ಮಾಡಲು ಬದುಕಿದ್ದಾರೆ. ಅವರ ಸಾಧನೆ ರಾಜ್ಯದಲ್ಲಿ ಮನೆ ಮಾತಾಗಿದೆ. ಕುಮಾರಸ್ವಾಮಿಯಲ್ಲಿರುವ ನಾಯಕತ್ವ ಗುಣವನ್ನು ಅರಿತು ನರೇಂದ್ರ ಮೋದಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಸೂಚಿಸಿದಾಗ ದೇವೇಗೌಡರು, ಕುಮಾರಸ್ವಾಮಿ ಅವರು ಸಂಸತ್ತು ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರು. ಕೇಂದ್ರಕ್ಕೆ ಎರಡು ಪಕ್ಷದಿಂದ ೧೯ ಸಂಸದರು ಆಯ್ಕೆಯಾಗುವಲ್ಲಿ ಎರಡು ಪಕ್ಷದ ಕಾರ್ಯಕರ್ತರ ಶಕ್ತಿ ಮರೆಯುವಂತಿಲ್ಲ. ಇದೀಗ ರಾಜ್ಯದಲ್ಲಿ ಎರಡು ಪಕ್ಷದವರು ಇದನ್ನು ಸ್ವಾಗತಿಸಿದ್ದಾರೆ. ಕೆಲವರು ಇದರಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳುತ್ತಿರುವದು ಸುಳ್ಳು ಎಂದು ಹೇಳಿದರು.ದೇಶದಲ್ಲಿ ಅನಿರೀಕ್ಷಿತವಾಗಿ ದೇವೇಗೌಡ ಅವರು ಪ್ರಧಾನಿಯಾದ ಸಂದರ್ಭದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದರು. ಅದರಂತೆ ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದ ಫಲವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಫಲ ತಟ್ಟಿದ್ದನ್ನು ನೋಡುತ್ತೇವೆ. ಪ್ರಧಾನಿಯಾಗಿ ದೇಶಕ್ಕೆ ಇವರು ನೀಡಿದ ಕೊಡುಗೆ ಜನರು ಮರೆಯುವಂತಿಲ್ಲ. ಇಂತಹ ಧೀಮಂತ ನಾಯಕರನ್ನು ಹೊಂದಿರುವ ಜೆಡಿಎಸ್ ಪಕ್ಷವನ್ನು ಕಾರ್ಯಕರ್ತರು ತಳಮಟ್ಟದಿಂದ ಸಂಘಟನೆ ಮಾಡುವ ಮೂಲಕ ಅಧಿಕಾರಕ್ಕೆ ಬರುವಂತೆ ಇಂದಿನಿಂದಲೇ ಮಾಡಬೇಕಿದೆ. ೨೦೨೮ ರ ವಿದಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಬೇಕೆಂಬ ಆಶಯ ಹೊಂದಿರುವದಾಗಿ ಹೇಳಿದರು. ಈ ಕ್ಷೇತ್ರದಲ್ಲಿ ನಾಲ್ಕು ಸಲ ಸೋತಿರುವ ಅಪ್ಪುಗೌಡ ಪಾಟೀಲ ಮನಗೂಳಿ ಅವರು ಜನರ ಪ್ರೀತಿ ವಿಶ್ವಾಸ ಮಾತ್ರ ಕಳೆದುಕೊಂಡಿಲ್ಲ. ಅವರು ಯಾವಾಗಲೂ ಮಂದಹಾಸದಿಂದ ಜನರೊಂದಿಗೆ ನಿರಂತರವಾಗಿ ಇದ್ದಾರೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಇಂತಹ ವ್ಯಕ್ತಿಯನ್ನು ಕ್ಷೇತ್ರದ ಶಾಸಕರನ್ನಾಗಿ ಕಾರ್ಯಕರ್ತರು ಮುಂಬರುವ ಚುನಾವಣೆಯಲ್ಲಿ ಖಂಡಿತ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮಾತನಾಡಿ, ನಾನು ನಾಲ್ಕು ಸಲ ಸೋತಿದ್ದರೂ ಕ್ಷೇತ್ರದ ಜನರು ತಮ್ಮ ಮನಸ್ಸಿನಲ್ಲಿ ನನ್ನನ್ನು ಸದಾ ಇಟ್ಟುಕೊಂಡಿದ್ದಾರೆ. ನನಗೆ ಅಧಿಕಾರ ಇಲ್ಲದೇ ಇದ್ದರೂ ಜನರ ಸೇವೆ ಸದಾ ಮಾಡುತ್ತಿರುವೆ. ಅಧಿಕಾರ ಇದ್ದರೆ ಇನ್ನಷ್ಟು ಕ್ಷೇತ್ರದ ಜನರ ಕೆಲಸಗಳನ್ನು ಮಾಡಲು ಅನುಕೂಲವಾಗುತ್ತದೆ. ನಾನು ಎಂದಿಗೂ ಅಧಿಕಾರಕ್ಕೆ ಆಸೆ ಪಟ್ಟಿಲ್ಲ. ಜನರ ಸೇವೆ ಮಾಡಲು ಅಧಿಕಾರ ಬೇಕಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದೇನೆ. ನನ್ನನ್ನು ಮೋಸದಿಂದ ಸೋಲಿಸಿದ್ದು ನಮ್ಮ ಕಾರ್ಯಕರ್ತರಿಗೆ ಗೊತ್ತಿದೆ ಎಂದರು.ಮಾಜಿ ಸಚಿವರಾದ ವೆಂಕಟರಾವ ನಾಡಗೌಡ, ಅಲ್ಕೋಡ ಹನುಮಂತಪ್ಪ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ, ಅಪ್ಸರಾಬೇಗಂ ಚಪ್ಪರಬಂದ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ, ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಮಾಜಿ ಶಾಸಕ ವೀರಭದ್ರಪ್ಪ ಹಾಲಳ್ಳಿ, ಬಾಲಚಂದ್ರ ಗುತ್ತೆದಾರ, ಡಾ.ಸುನೀತಾ ಚವ್ಹಾಣ, ಸುಭಾಸಗೌಡ ಪಾಟೀಲ, ಬಿ.ಕೆ.ಕಲ್ಲೂರ, ಅಂಬೋಜಿ ಪವಾರ, ಶಿವಪ್ಪ ವಾಡೇದ, ಮಲ್ಲಿಕಾರ್ಜುನ ಅವಟಿ, ರವಿ ಪಟ್ಟಣಶೆಟ್ಟಿ, ಮನಾನ್ನ ಶಾಬಾದಿ, ಉಮೇಶ ಹಾರಿವಾಳ, ಪೂರ್ಣಿಮಾಗೌಡ ಬಾಬು ಬೆಲ್ಲದ, ಶಾಂತಾ ನಾಯಕ, ಅಶೋಕ ಮಸಳಿ, ರಾಮಣ್ಣ ಲಗಟಗಿ, ಬಾಳುಗೌಡ ಕುಮಶಿ, ಶಂಕರ ರೇವಡಿ, ಆಕಾಶ ಮನಗೂಳಿ, ರಾಜಶೇಖರ ವಾಲೀಕಾರ ಇತರರು ಇದ್ದರು. ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ರಾಜು ಪಾಟೀಲ ಸ್ವಾಗತಿಸಿದರು. ಬಸವರಾಜ ಅವಟಿ ನಿರೂಪಿಸಿದರು.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ