ಪ್ರಧಾನಿ ಮೋದಿ ನಿಂದನೆ: ಮಂಜುನಾಥ ಮೇಲೆ ಕ್ರಮಕ್ಕೆ ಆಗ್ರಹ

KannadaprabhaNewsNetwork | Published : Mar 12, 2024 2:06 AM

ಸಾರಾಂಶ

ಅವಾಚ್ಯ ಶಬ್ದಗಳಿಂದ ನಿಂದಿಸಿ ದೇಶದ ಪ್ರ ನರೇಂದ್ರ ಮೋದಿಯನ್ನು ಅವಮಾನಿಸಿರುವ ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಮೊಳಕಾಲ್ಮುರು: ಅವಾಚ್ಯ ಶಬ್ದಗಳಿಂದ ನಿಂದಿಸಿ ದೇಶದ ಪ್ರ ನರೇಂದ್ರ ಮೋದಿಯನ್ನು ಅವಮಾನಿಸಿರುವ ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇಲ್ಲಿನ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಸೋಮವಾರ ಮನವಿ ಸಲ್ಲಿಸಿರುವ ಕಾರ್ಯಕರ್ತರು ಕಾರ್ಮಿಕ ಮಂಡಳಿಯ ರಾಜ್ಯ ಉಪಾಧ್ಯಕ್ಷರಾಗಿರುವ ಹಿರಿಯೂರಿನ ಜಿ.ಎಸ್.ಮಂಜುನಾಥ ಖಾಸಗಿ ಕಾರ್ಯಕ್ರಮದಲ್ಲಿ ಪ್ರಧಾನಿಯನ್ನು ಅವಮಾನಿಸುವಂತ ಮಾತುಗಳನ್ನಾಡಿದ್ದಾರೆ.

ಮೋದಿ ನನ್ನ ಕೈಗೆ ಸಿಕ್ಕಲ್ಲಿ ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುತ್ತೇನೆಂದು ತುಚ್ಛವಾಗಿ ಮಾತನಾಡಿರುವ ಕ್ರಮ ಖಂಡನೀಯ. ದೇಶದ ಪ್ರಧಾನಿಯನ್ನು ಕನಿಷ್ಟ ಗೌರವವಿಲ್ಲದಂತೆ ಮಾತನಾಡಿರುವ ಜಿ.ಎಸ್.ಮಂಜುನಾಥ ಬಹಿರಂಗ ಕ್ಷಮೆ ಕೋರಬೇಕು ಎಂದಿದ್ದಾರೆ.

ಸಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯವರ ಕುರಿತು ನೀಡಿರುವ ಹೇಳಿಕೆ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನು ಅವಮಾನಿಸಿದ್ದಾರೆ. ಜನಾದೇಶ ಪಡೆದು ಅಧಿಕಾರಕ್ಕೇರಿದ ಬಿಜೆಪಿ ಜನಪರ ಕಾರ್ಯಕ್ರಮಗಳನ್ನು ಸಹಿಸದ ಕಾಂಗ್ರೆಸ್ ನಾಯಕರು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಅಶಾಂತಿ ನಿರ್ಮಾಣಕ್ಕೆ ಕಾರಣವಾಗುತ್ತಿದ್ದಾರೆ. ದೇಶದ ಪ್ರಧಾನಿಯನ್ನು ಹೀನಾಯವಾಗಿ ಮಾತನಾಡುವ ನಾಗರೀಕ ಸಮಾಜವೇ ತಲೆ ತಗ್ಗಿಸುವಂತಾಗಿದೆ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳ ಭರವಸೆಗಳಿಂದ ಅಧಿಕಾರಕ್ಕೆ ಬಂದ ಸರ್ಕಾರದಿಂದ ರಾಜ್ಯದಲ್ಲಿ ಅಶಾಂತಿ ನಿರ್ಮಾಣವಾಗಿದೆ. ಮಂಜುನಾಥ ಹೇಳಿಕೆಯಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ. ಹಾಗಾಗಿ ಕೂಡಲೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಪಿಎಸ್‌ಐ ಪಾಂಡುರಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ, ಹಿರಿಯ ಮುಖಂಡ ಚಂದ್ರಶೇಖರ ಗೌಡ,ಕಿರಣ್ ಗಾಯಕವಾಡ್, ಎಸ್.ಸಿ.ಮೋರ್ಚ ಅಧ್ಯಕ್ಷ ಸಿದ್ದಾರ್ಥ, ಪಟ್ಟಣ ಪಂಚಾಯಿತಿ ಸದಸ್ಯರಾದ ಟಿ.ಟಿ.ರವಿ ಕುಮಾರ್, ತಿಪ್ಪೇಸ್ವಾಮಿ, ಮುಕಂಡ ಬೀಮಣ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಮಲ್ಲಿಕಾರ್ಜುನ ಭಗವತಿ, ರಾಮಾಂಜಿನೇಯ, ವಕೀಲ ಶಿವು, ಭೀಮಣ್ಣ, ರಮೇಶ, ನಾಗರಾಜ, ನುಂಕೇಶ ಗೌಡ, ಜಿಂಕ್ಲ ಬಸವರಾಜ ಇದ್ದರು.

Share this article