ಪೌರಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ: ಶೀಲಾಸುಖೇಶ್

KannadaprabhaNewsNetwork |  
Published : Nov 21, 2026, 01:15 AM IST
ೇ್‌ | Kannada Prabha

ಸಾರಾಂಶ

ಶೃಂಗೇರಿಸೇವಾ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಪಂ ನೇರಪಾವತಿ ವೇತನ ಕಾರ್ಮಿಕರು ಕಳೆದ ಸೋಮವಾರದಿಂದ ಕಚೇರಿ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ.

ಶೃಂಗೇರಿಯಲ್ಲಿ 5ನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಅನಿರ್ಧಿಷ್ಠಾವಧಿ ಮುಷ್ಕರ

ಕನ್ನಡಪ್ರಭ ವಾರ್ತೆ ಶೃಂಗೇರಿ

ಸೇವಾ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಪಂ ನೇರಪಾವತಿ ವೇತನ ಕಾರ್ಮಿಕರು ಕಳೆದ ಸೋಮವಾರದಿಂದ ಕಚೇರಿ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ.

ಬಹುಜನ ಸಮಾಜ ಪಕ್ಷದ ತಾಲೂಕು ಘಟಕದ ಅಧ್ಯಕ್ಷೆ ಶೀಲಾ ಸುಖೇಶ್ ಮುಷ್ಕರ ನಿರತರನ್ನು ಬೆಂಬಲಿಸಿ ಮಾತನಾಡಿ ಕಳೆದ 25 ವರ್ಷಗಳಿಂದ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಯಾವುದೇ ಜೀವನ ಭದ್ರತೆ ಯಿಲ್ಲ.ವೇತನ ಕಡಿಮೆ. ಕಳೆದ 15-20 ವರ್ಷಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಮಾಡುತ್ತಲೇ ಬಂದಿದ್ದಾರೆ.

ಆದರೆ ಈವರೆಗಿನ ಯಾವುದೇ ಸರ್ಕಾರಗಳು ಬೇಡಿಕೆ, ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕೆಲ ವರ್ಷಗಳ ಹಿಂದೆ ಕರ್ತವ್ಯದಲ್ಲಿರುವಾಗಲೇ ಕಾರ್ಮಿಕರೊಬ್ಬರು ನಿಧನ ರಾದರೆ,ಇನ್ನೊಬ್ಬರು ಅನಾರೋಗ್ಯದಿಂದ ನಿಧನ ರಾದರೂ ಇವರ ಅಂತ್ಯಕ್ರಿಯೆಗೂ ಹಣ ಸಿಗಲಿಲ್ಲ. ಕನಿಷ್ಠ ಮಾನವೀಯತೆ ತೋರಲಿಲ್ಲ. ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿ,ನಿವೃತ್ತಿ ಅಂಚಿನಲ್ಲಿದ್ದರೂ ಸರ್ಕಾರ ಇವರನ್ನು ಕಾಯಂ ಮಾಡಿಲ್ಲ.

ಕ್ಷೇತ್ರದ ಶಾಸಕರು ಕೇವಲ ಭರವಸೆ ನೀಡುತ್ತಿದ್ದಾರೆ. ವಿಶೇಷ ಪ್ರಕರಣ ಎಂದು ಹೇಳುತ್ತಾರೆ. ಅಧಿವೇಶನದಲ್ಲಿ ಚರ್ಚೆ ಮಾಡುತ್ತಿಲ್ಲ. ಇನ್ನಾದರೂ ಗಂಭೀರವಾಗಿ ಪರಿಗಣಿಸಬೇಕು. ಇದೇ ರೀತಿ ನಿರ್ಲಕ್ಷ್ಯಮುಂದುವರಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ ನಾವು ಕಳೆದ 5 ದಿನಗಳಿಂದ ಮುಷ್ಕರ ನಡೆಸುತ್ತಿದ್ದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಕೇವಲ ಭರವಸೆಗಳನ್ನಷ್ಟೇ ನೀಡುತ್ತಿದ್ದಾರೆ. ಸೋಮವಾರದಿಂದ ಹೋರಾಟವನ್ನು ತೀವ್ರಗೊಳಿಸ ಲಾಗುವುದು ಎಂದರು. ಪಪಂ ಮಾಜಿ ಅಧ್ಯಕ್ಷೆ ಶಾರದಾ ಗೋಪಾಲ್,ಕುಮಾರ್,ಲಕ್ಷ್ಮಿ,ಗೋಪಾಲ್ ಮತ್ತಿತರರು ಇದ್ದರು.

20 ಶ್ರೀ ಚಿತ್ರ 1-ಶೃಂಗೇರಿ ಪಪಂ ಎದುರು ಪೌರಕಾರ್ಮಿಕರ ಮುಷ್ಕರ ಐದನೇ ದಿನವೂ ಮುಂದುವರೆಯಿತು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಹೆದ್ದಾರಿ ದುರಸ್ತಿಗಾಗಿ ರಸ್ತೆತಡೆ
ಅನುದಾನಿತ ಶಾಲಾ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ