ಕನ್ನಡಪ್ರಭ ವಾರ್ತೆ ಉಡುಪಿ
ಸಭೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಮಂಗನ ಕಾಯಿಲೆ, ಸಾಂಕ್ರಾಮಿಕ ರೋಗಗಳ ಸ್ಥಿತಿಗತಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ನ್ಯುಮೋನಿಯಾ ತಡೆಗಟ್ಟುವಿಕೆ, ನವಜಾತ ಶಿಶು ಸಪ್ತಾಹ, ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ, ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ, ಆಶಾ ಕುಂದು ಕೊರತೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ವಿವಿಧ ಇಲಾಖೆಗಳ ಸಹಕಾರದೊಂದಿಗೆ ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಸಮುದಾಯದಲ್ಲಿ ಅರ್ಹ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ತಲುಪಿಸಲು ತಹಸೀಲ್ದಾರರು ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಅವರು ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಅವರು ಕಾರ್ಯಕ್ರಮ ನಿರೂಪಿಸಿದರು, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ತೆರೆಸಾ ಎಂ. ವಂದಿಸಿದರು.