ಕಾಲಕಾಲಕ್ಕೆ ವಿದ್ಯಾರ್ಥಿಗಳ ಜತೆ ಸಮಾಲೋಚಿಸಿ

KannadaprabhaNewsNetwork |  
Published : Nov 25, 2025, 03:15 AM IST
ಕಕಕಕಕ | Kannada Prabha

ಸಾರಾಂಶ

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಿಂದ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಿ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸುಧಾರಿಸುವ ಕಾರ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರಿಂದ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಿ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸುಧಾರಿಸುವ ಕಾರ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಮಕ್ಕಳ ಮಾನಸಿಕ ಆರೋಗ್ಯ ಸುಧಾರಿಸುವ ಮತ್ತು ಆತ್ಮಹತ್ಯೆ ತಡೆಗಟ್ಟುವ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಈ ತರಬೇತಿ ಕಾರ್ಯಕ್ರಮಕ್ಕೆ ತಾಲೂಕುಮಟ್ಟದ ಎಲ್ಲ ಅಧಿಕಾರಿಗಳನ್ನು ಕರೆದು ಅವರಿಗೂ ಈ ವಿಷಯದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಸೂಚನೆ ನೀಡಿದರು.ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಮಲೋಚಕರನ್ನು ನಿಯೋಜಿಸಿಕೊಂಡು ಕಾಲಕಾಲಕ್ಕೆ ವಿದ್ಯಾರ್ಥಿಗಳೊಡನೆ ಸಮಾಲೋಚನೆ ಮಾಡಿ ವಿದ್ಯಾರ್ಥಿಗಳ ಆತಂಕ ದೂರು ಮಾಡಬೇಕು. ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಭೇದ ಭಾವ ಮಾಡಬಾರದು. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಜಾಣ ವಿದ್ಯಾರ್ಥಿಗಳು ಎಂಬ ಭೇದ ಮಾಡಬಾರದು ಎಂದರು.ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಈ ವಿಷಯದ ಕುರಿತು ಕಾರ್ಯನಿರ್ವಹಿಸಲು ತಿಳಿಸಿದರು. ಮಕ್ಕಳ ಸಮಸ್ಯೆಗಳ ಕುರಿತು ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಸಮಾಲೋಚನೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಮಕ್ಕಳ ರಕ್ಷಣಾ ನೀತಿಯನ್ನು ಎಲ್ಲ ಶಾಲೆಗಳಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಯಿತು. ಜಿಲ್ಲಾಮಟ್ಟದ ಅಧಿಕಾರಿಗಳು ವಸತಿ ನಿಲಯಗಳಿಗೆ, ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ನೀಡುವ ಕಾರ್ಯವಾಗಬೇಕು ಎಂದು ತಿಳಿಸಿದರು.ಪ್ರತಿಯೊಂದು ಶೈಕ್ಷಣಿಕ ಸಂಸ್ಥೆಗಳಲ್ಲಿ ಸಮಲೋಚಕರನ್ನು ನಿಯೋಜಿಸಿಕೊಂಡು ಕಾಲಕಾಲಕ್ಕೆ ವಿದ್ಯಾರ್ಥಿಗಳೊಡನೆ ಸಮಾಲೋಚನೆ ಮಾಡಿ ವಿದ್ಯಾರ್ಥಿಗಳ ಆತಂಕ ದೂರು ಮಾಡಬೇಕು. ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳಾದ 1098, 112 ಮತ್ತು ಟೆಲಿ ಮಾನಸ ಸಂಖ್ಯೆಯಾದ 11416 ಎಲ್ಲಾ ಶಾಲೆಗಳಲ್ಲಿ ಎದ್ದು ಕಾಣುವಂತೆ ಗೋಡೆಯ ಮೇಲೆ ಬರೆಯಿಸಲು ಸೂಚಿಸಿದರು. ಪಟ್ಟಣ ಮತ್ತು ನಗರಗಳಲ್ಲಿ ಪೌರಾಡಳಿತದ ನೆರವು ಪಡೆದು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸುಧಾರಿಸುವ ಮತ್ತು ಆತ್ಮಹತ್ಯೆ ತಡೆಗಟ್ಟಲು ವ್ಯಾಪಕ ಪ್ರಚಾರ ಮಾಡಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು.ಒಬ್ಬ ವಿದ್ಯಾರ್ಥಿ ಶಾಲೆಯಲ್ಲಿ ಒಂದೇ ಕಡೆ ಕೂರದೆ ಪ್ರತಿನಿತ್ಯ ಎಲ್ಲ ವಿದ್ಯಾರ್ಥಿಗಳ ಜೊತೆ ಬೇರೆ ಬೇರೆ ಸ್ಥಳಗಳಲ್ಲಿ ಕುಳಿತು ವಿದ್ಯಾಭ್ಯಾಸ ಮಾಡುವಂತೆ ವ್ಯವಸ್ಥೆ ಮಾಡಬೇಕು. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ತಪಾಸನೆ ಮತ್ತು ಆತ್ಮಹತ್ಯೆ ತಡೆಗಟ್ಟುವ ತೆಗೆದುಕೊಂಡ ಕ್ರಮಗಳ ಕುರಿತು ವರದಿಗಳನ್ನು ಕ್ರೂಢೀಕರಿಸಿ ಕ್ರಮವಹಿಸಲು ಸೂಚಿಸಿದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಮಹೇಶ ಕೋನಿ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ.ಕೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ ತಜ್ಞರು ಉಪಸ್ಥಿತರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಶವ ಬಗ್ಗೆ ಬುರುಡೆ ಬಿಟ್ಟ ಚಿನ್ನಯ್ಯಗೆ ಬೇಲ್
ಕೈ ರೆಬೆಲ್ಸ್‌ ಜತೆ ಸೇರಿ ನಾವು ಸರ್ಕಾರ ಮಾಡಲ್ಲ : ಅಶೋಕ್‌