ಕುತೂಹಲ ಮೂಡಿಸಿದ ಕೈ ನಾಯಕರ ಭೇಟಿ

KannadaprabhaNewsNetwork |  
Published : Nov 05, 2025, 12:30 AM IST
್ಿ್ಿ್ಿ | Kannada Prabha

ಸಾರಾಂಶ

ಕಾಂಗ್ರೆಸ್ ಮುಖಂಡರು ಸೋಮವಾರ ನಗರದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು ಅವರನ್ನು ಭೇಟಿ ಮಾಡಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಕೆಪಿಸಿಸಿ ಕಾರ್ಯಾಲಯ ಕಾರ್ಯದರ್ಶಿ ನಾರಾಯಣ್, ಉಪಾಧ್ಯಕ್ಷ ಮುರಳಿಧರ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಬಸವರಾಜ್ ಹಾಗೂ ಕಾಂಗ್ರೆಸ್ ಮುಖಂಡರು ಸೋಮವಾರ ನಗರದಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು ಅವರನ್ನು ಭೇಟಿ ಮಾಡಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಜಿ.ಎಸ್.ಬಸವರಾಜು ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆಯೂ ಫೋನ್‌ನಲ್ಲಿ ಮಾತನಾಡಿದರು. ಈ ಬೆಳವಣಿಗೆ ಜಿಲ್ಲೆಯ ರಾಜಕಾರಣದಲ್ಲಿ ಕೂತೂಹಲ ಮೂಡಿಸಿದೆ.ನಗರದ ಅಮರಜ್ಯೋತಿ ನಗರದ ಸಾಯಿಬಾಬಾ ಮಂದಿರದ ಕಚೇರಿಯಲ್ಲಿ ಮಾಜಿ ಸಂಸದ ಜಿ.ಎಸ್.ಬಸವರಾಜು ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು, ಈ ಭೇಟಿ ಕೇವಲ ಸೌಹಾರ್ದತೆಯ ಭೇಟಿ ಅಲ್ಲ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದು ಜಿಲ್ಲೆಯ ರಾಜಕಾರಣದಲ್ಲಿ ಹೊಸ ಬೆಳವಣಿಗೆಗೆ ನಾಂದಿಯಾಗಲಿದೆಯೇ ಎಂಬ ಪ್ರಶ್ನೆ ಮೂಡಿಸಿದೆ.21 ವರ್ಷಗಳ ದೀರ್ಘ ಕಾಲ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರೂ ಆಗಿದ್ದ, ಕಾಂಗ್ರೆಸ್ ಪಕ್ಷದಿಂದ ಸಂಸದರೂ ಆಗಿದ್ದ ಜಿ.ಎಸ್.ಬಸವರಾಜು ಕೆಲ ವರ್ಷಗಳ ಹಿಂದೆ ಬಿಜೆಪಿ ಸೇರಿ ಸಂಸದರೂ ಆಗಿದ್ದರು. ರಾಜಕೀಯ ಮುತ್ಸದ್ದಿ ಜಿ.ಎಸ್.ಬಸವರಾಜು ಅವರನ್ನು ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿ ಸಂಬಂಧ ವಿಚಾರಗಳನ್ನು ಮಾತನಾಡಿದೆವು. ಅವರೂ ಕಾಂಗ್ರೆಸ್ ಪಕ್ಷದಲ್ಲಿದ್ದಾಗಿನ ನೆನಪುಗಳು, ಕಾಂಗ್ರೆಸ್ ನಾಯಕರೊಂದಿಗಿನ ಒಡನಾಟವನ್ನು ಮೆಲುಕು ಹಾಕಿದರುಎಂದು ಮುರಳಿಧರ ಹಾಲಪ್ಪ ಹೇಳಿದರು.ವಿವಿಧೆಡೆ ಇದ್ದ ಜಿಲ್ಲಾ ಕಾಂಗ್ರೆಸ್ ಪಕ್ಷ ಕಚೇರಿಗಳ ಬಗ್ಗೆ ಮಾಹಿತಿ ಪಡೆದ ಜಿ.ಎಸ್.ಬಸವರಾಜು, ಕಾಂಗ್ರೆಸ್ ಮುಖಂಡರಿಗೆ ಸಾಯಿಬಾಬಾರ ಪ್ರಸಾದ ನೀಡಿದರು. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಫೋನ್‌ನಲ್ಲಿ ಮಾತುಕತೆ ನಡೆಸಿದರು.ತಾವು ಸಂಸದರಾಗಿದ್ದ ಅವಧಿಯಲ್ಲಿ ಜಿಲ್ಲೆಯಲ್ಲಿ ಆಗಿರುವ ಕಾರ್ಯಕ್ರಮಗಳು, ಪ್ರಸ್ತುತ ಜಿಲ್ಲೆಯಲ್ಲಿ ಅನುಷ್ಠಾನ ಆಗಬೇಕಾಗಿರುವ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜಿ.ಎಸ್.ಬಸವರಾಜು ಅವರೊಂದಿಗೆ ಚರ್ಚೆ ಮಾಡಿದ್ದಾಗಿ ಮುರಳಿಧರ ಹಾಲಪ್ಪ ಹೇಳಿದರು.ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ರೇವಣ್ಣಸಿದ್ದಯ್ಯ, ಹನುಮಂತಯ್ಯ, ಸಿಮೆಂಟ್ ಮಂಜುನಾಥ್, ಮಹೇಶ್, ಮರಿಚೆನ್ನಮ್ಮ, ನಟರಾಜು, ಗೋವಿಂದೇಗೌಡರು, ಸುಕನ್ಯಅವರು ಈ ಭೇಟಿ ವೇಳೆ ಹಾಜರಿದ್ದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ