ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಡಿಸಿಸಿ ಬ್ಯಾಂಕ್‌ಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಶುಕ್ರವಾರ ಬೆಳಗ್ಗೆಯೇ ಆಗಮಿಸಿದ ಬೆಳ್ಳಿ ಪ್ರಕಾಶ್ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರೊಂದಿಗೆ ತೆರಳಿ ಚುನಾವಣಾಧಿಕಾರಿಯೂ ಆದ ಎಸಿ ಸುದರ್ಶನ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಇದಾದ ಕೆಲವೇ ನಿಮಿಷದಲ್ಲಿ ಆಗಮಿಸಿದ ಶಾಸಕ ಕೆ.ಎಸ್.ಆನಂದ್ ತಾವೂ ಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಕೆ ಮಾಡಿದರು.
ಇನ್ನುಳಿದಂತೆ ಡಿಸಿಸಿ ಬ್ಯಾಂಕ್ ನಿಕಟಪೂರ್ವ ಅಧ್ಯಕ್ಷ ಹಾಗೂ ತರೀಕೆರೆ ಮಾಜಿ ಶಾಸಕ ಡಿ.ಎಸ್.ಸುರೇಶ್ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನಪರಿಷತ್ ಸದಸ್ಯರು, ಶಾಸಕರು ಹಾಗೂ ಮಾಜಿ ಶಾಸಕರು ಈ ಬಾರಿ ಡಿಸಿಸಿ ಬ್ಯಾಂಕ್ ಚುನಾವಣಾ ಕಣದಲ್ಲಿರುವುದರಿಂದ ಚುನಾವಣೆ ರಂಗೇರಿದೆ.ಬೆಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಡಿಸಿಸಿ ಬ್ಯಾಂಕ್‌ನ 13 ನಿರ್ದೇಶಕ ಸ್ಥಾನಕ್ಕೆ ಎನ್‌ಡಿಎಯಿಂದ ಅಭ್ಯರ್ಥಿಗಳು ಕಣಕ್ಕಿಳಿದಿದ್ದೇವೆ. ತರೀಕೆರೆ, ಎನ್.ಆರ್.ಪುರ, ಮೂಡಿಗೆರೆ ಸೇರಿದಂತೆ 4 ಕಡೆ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದರು.
ಇನ್ನು ಯಾವ ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆಯಬಹುದು ಎಂಬ ಬಗ್ಗೆ ಪರಿಶೀಲನೆ ನಡೆಸಲಿದ್ದೇವೆ. ಡಿಸಿಸಿ ಬ್ಯಾಂಕ್‌ನಲ್ಲಿ ರಾಜಕೀಯ ಪಕ್ಷಗಳಿಲ್ಲ. ಆದರೆ, ಎನ್‌ಡಿಎ ಬೆಂಬಲದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದರು.9 ಕೆಸಿಕೆಎಂ 5ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಚಿಕ್ಕಮಗಳೂರಿನ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಶುಕ್ರವಾರ ನಾಮಪತ್ರ ಸಲ್ಲಿಸಿದರು.--9 ಕೆಸಿಕೆಎಂ 6ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಶುಕ್ರವಾರ ನಾಮಪತ್ರ ಸಲ್ಲಿಸಿದರು.