- ಸಮೀಕ್ಷೆಯಿಂದ ಹೊರಗುಳಿದವರು ಲಿಂಕ್ ಬಳಸಿ ಸ್ವಯಂಘೋಷಣೆ ಸಲ್ಲಿಸಿ
ಕನ್ನಡಪ್ರಭ ವಾರ್ತೆ ಯಾದಗಿರಿ
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಹಿಂದುಳಿದ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಅವಧಿಯನ್ನು ಮೇ 5ರಿಂದ 17ರವರೆಗೆ ವಿಸ್ತರಿಸಲಾಗಿದ್ದು, ಮನೆ ಮನೆ ಸಮೀಕ್ಷೆಯಿಂದ ಹೊರಗುಳಿದ ಪರಿಶಿಷ್ಟ ಜಾತಿ ಕುಟುಂಬಗಳು https://schedulecastesurvey.karnataka.gov.in/self declaration ಲಿಂಕ್ ಮೂಲಕ ಸ್ವಯಂ ಘೋಷಣೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ತಿಳಿಸಿದ್ದಾರೆ.ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮನೆ ಮನೆ ಸಮೀಕ್ಷೆ ವೇಳೆಗೆ ಲಭ್ಯ ಇಲ್ಲದವರು ಹಾಗೂ ಜಿಲ್ಲೆಯಿಂದ ಬೆಂಗಳೂರು, ಗೋವಾ, ಪುಣೆ, ಹೈದರಾಬಾದ್ ಇತ್ಯಾದಿ ಸ್ಥಳಗಳಿಗೆ ತೆರಳಿರುವವರು ಈ ಆನ್ಲೈನ್ ಲಿಂಕ್ ನ್ನು ಬಳಸಿಕೊಳ್ಳುವ ಮೂಲಕ ಸ್ವಯಂ ಘೋಷಣೆ ಸಲ್ಲಿಸುವಂತೆ ಅವರು ತಿಳಿಸಿದರು.
ಅದರಂತೆ ಮೇ 19 ರಿಂದ ಜೂ. 1ರವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಶಿಬಿರಗಳನ್ನು ಮೇ 30, ಮೇ 31 ಹಾಗೂ ಜೂನ್ 1 ರಂದು ಏರ್ಪಡಿಸಲಾಗಿದೆ. ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು https://schedulecastesurvey.karnataka.gov.in/selfdeclaration/ ಪೋರ್ಟಲ್ ಮುಖಾಂತರ ಸಲ್ಲಿಸಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್, ಆಧಾರ್ ನೋಂದಣಿ ಸಂಖ್ಯೆ ಮುಖಾಂತರ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
* ಯಾದಗಿರಿ ಜಿಲ್ಲೆ : ಶೇ. 85 ರಷ್ಟು ಪ್ರಗತಿ ಸಾಧನೆ
ಈ ಸಮೀಕ್ಷೆಯಲ್ಲಿ ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯನ್ನು Enumeration Block ಎಂದು ಪರಿಗಣಿಸಲಾಗಿದೆ. EDCS ನಿರ್ದೇಶನಾಲಯದಿಂದ ಅಭಿವೃದ್ಧಿ ಪಡಿಸಲಾದ ಮೋಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು,ಜಿಲ್ಲೆಯ ಪ್ರತಿ ಮತಕ್ಷೇತ್ರಕ್ಕೆ ಸಹಾಯಕ ಆಯುಕ್ತರ ದರ್ಜೆಯ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.
* ನೋಡಲ್ ಅಧಿಕಾರಿಗಳ ನೇಮಕ
ಜಿಲ್ಲೆಯ 1134 ಗಣತಿದಾರರು , ಮತಗಟ್ಟೆವಾರು ಸಮೀಕ್ಷೆ ನಡೆಸುವರು. ಪ್ರತಿ 1 ರಿಂದ 12 ಮತಗಟ್ಟೆ ಗಳಿಗೆ ಒಬ್ಬರನ್ನು ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದೆ.ಪ್ರತಿ ಮತಗಟ್ಟೆ ವಾರು ಪ.ಜಾ ಕುಟುಂಬಗಳು ಹೆಚ್ಚಿರುವ ಗ್ರಾಮ/ನಗರಗಳಲ್ಲಿ 350 ಹೆಚ್ಚುವರಿ ಗಣತಿದಾರರನ್ನು ನೇಮಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಾಸ್ಟರ್ ಟ್ರೇನರ ಗಳನ್ನು ನೇಮಿಸಲಾಗಿದೆ.ಪ್ರತಿ ಹತ್ತು ಎನುಮರೇಶನ್ ಬ್ಲಾಕ್ ಉಸ್ತುವಾರಿ ನೋಡಿಕೊಳ್ಳಲು ಓರ್ವ ಸೂಪರ್ ವೈಜರ್ ನೇಮಿಸಲಾಗಿದೆ. ಇವರು ಗಣತಿದಾರರು ಮಾಡಿದ ಗಣತಿಯ ಎನ್ಯುಮರೇಶನ್ ಬ್ಲಾಕ್ ಪ್ರಕಾರ ಶೇ.10ರಷ್ಟು ಮರು ಪರಿಶೀಲನೆಯನ್ನು ಮೋಬೈಲ್ ಆಪ್ ಮೂಲಕ ಮರು ಪರಿಶೀಲನೆ ಮಾಡುವರು ಎಂದು ಡಿಸಿ ಡಾ. ಸುಶೀಲಾ ಹೇಳಿದರು.
-
ಕೋಟ್- : ಮನೆ ಮನೆ ಸಮೀಕ್ಷೆ ವೇಳೆಗೆ ಲಭ್ಯ ಇಲ್ಲದವರು ಹಾಗೂ ಜಿಲ್ಲೆಯಿಂದ ಬೆಂಗಳೂರು, ಗೋವಾ, ಪುಣೆ, ಹೈದರಾಬಾದ್ ಇತ್ಯಾದಿ ಸ್ಥಳಗಳಿಗೆ ತೆರಳಿರುವವರು ಈ ಆನ್ಲೈನ್ ಲಿಂಕ್ ನ್ನು ಬಳಸಿಕೊಳ್ಳುವ ಮೂಲಕ ಸ್ವಯಂ ಘೋಷಣೆ ಸಲ್ಲಿಸಬಹುದು. ಮೇ 19 ರಿಂದ ಜೂ. 1 ರವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಶಿಬಿರಗಳನ್ನು ಮೇ 30, ಮೇ 31 ಹಾಗೂ ಜೂನ್ 1 ರಂದು ಏರ್ಪಡಿಸಲಾಗಿದೆ. ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು https://schedulecastesurvey.karnataka.gov.in/selfdeclaration/ ಪೋರ್ಟಲ್ ಮುಖಾಂತರ ಸಲ್ಲಿಸಬೇಕು. : ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ. (27ವೈಡಿಆರ್14ಎ)-
27ವೈಡಿಆರ್13ಎ : ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಪತ್ರಿಕಾಗೋಷ್ಠಿ ನಡೆಸಿದರು.