ಒಳಮೀಸಲಾತಿ: ತಿಪಟೂರಿನಲ್ಲಿ ಇಂದು ತಮಟೆ ಚಳುವಳಿ

KannadaprabhaNewsNetwork |  
Published : Sep 21, 2024, 01:49 AM IST
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ತಿಪಟೂರಿನಲ್ಲಿ ತಮಟೆ ಚಳುವಳಿ | Kannada Prabha

ಸಾರಾಂಶ

ತಿಪಟೂರು: ಒಳ ಮೀಸಲಾತಿಗೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ತಿಪಟೂರಿನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ ಶಾಂತಪ್ಪ ತಿಳಿಸಿದರು.

ತಿಪಟೂರು: ಒಳ ಮೀಸಲಾತಿಗೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ತಿಪಟೂರಿನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ ಶಾಂತಪ್ಪ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೂರು ದಶಕಗಳ ಹೋರಾಟದ ಫಲವಾಗಿ ಸಾಮಾಜಿಕ ನ್ಯಾಯದ ಪರವಾಗಿರುವ ಒಳಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಾಜ್ಯ ಸರ್ಕಾರಗಳು ಒಳಮೀಸಲಾತಿ ಜಾರಿಗೆ ಅಧಿಕಾರ ಹೊಂದಿರುವುದಾಗಿ ತಿಳಿಸಿದೆ. ಕೋರ್ಟ್ ಆದೇಶ ನೀಡಿದರೂ ಸಾಮಾಜಿಕ ನ್ಯಾಯದ ಪರ ಎಂದು ರಾಜ್ಯದ ಜನ ನಂಬಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವುದು ಖಂಡನೀಯ. ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಸೆಪ್ಟೆಂಬರ್ ೨೧ರಂದು ತಿಪಟೂರಿನಲ್ಲಿ ಬೃಹತ್ ತಮಟೆ ಚಳುವಳಿ ಹಮ್ಮಿಕೊಂಡಿದ್ದು. ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿ ನಂತರ ಶಾಸಕ ಕೆ. ಷಡಕ್ಷರಿಯವರಿಗೆ ಮನವಿ ಪತ್ರಸಲ್ಲಿಸಲಾಗುವುದು ಎಂದರು. ಮುಖಂಡ ಪೆದ್ದಿಹಳ್ಳಿ ನರಸಿಂಹಯ್ಯ ಮಾತನಾಡಿ ರಾಜ್ಯಸರ್ಕಾರ ಒಳಮೀಸಲಾತಿ ಜಾರಿಗೊಳಿಸಿ ಬದ್ದತೆ ಪ್ರದರ್ಶನ ಮಾಡಬೇಕು ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಮಾತನಾಡಿ ಭರವಸೆ ನೀಡಿದ ಸಿದ್ದರಾಮಯ್ಯ. ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಮಹದೇವಪ್ಪ ಚುನಾವಣೆ ನಂತರ ಮಾತು ತಪ್ಪಿದ್ದು ಮಾದಿಗ ಜನಾಂಗದ ವಿರೋಧಿಗಳಾಗಿ ವರ್ತಿಸುತ್ತಿದ್ದಾರೆ. ಸಂವಿಧಾನ ಬದ್ಧವಾಗಿ ನಮಗೆ ಅನ್ಯಾಯವಾಗಿದ್ದು ಮೀಸಲಾತಿಯಲ್ಲಿ ನ್ಯಾಯಬದ್ದವಾಗಿ ಫಲ ದೊರೆತಬೇಕಾದರೆ ಒಳಮೀಸಲಾತಿ ಜಾರಿಯಾಗಬೇಕು. ನಮ್ಮ ಪಾಲಿನ ಹಕ್ಕು ನಮಗೆ ದೊರೆಯಬೇಕು. ನಮ್ಮ ಹಕ್ಕುನಮಗೆ ದೊರೆಯದಿದ್ದರೆ ಯಾವುದೇ ತ್ಯಾಗಕ್ಕೂ ಹಿಂಜರಿಯುವುದಿಲ್ಲ. ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕು ಸರ್ಕಾರ ನಮ್ಮ ಹೋರಾಟ ನಿರ್ಲಕ್ಷ್ಯ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ತಿಪಟೂರಿಲ್ಲಿ ನಡೆಸುತ್ತಿರುವ ಬೃಹತ್ ತಮಟೆ ಚಳವಳಿಯಲ್ಲಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕುಪ್ಪಾಳು ರಂಗಸ್ವಾಮಿ, ಗಾಂಧಿನಗರ ಬಸವರಾಜು, ಬಿಳಿಗೆರೆ ಚಂದ್ರಶೇಖರ್, ಲಿಂಗದೇವರು, ಈಚನೂರು ಸೋಮಶೇಖರ್, ಟಿ.ಕೆ ಕುಮಾರ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು