ಅಂತಾರಾಷ್ಟ್ರೀಯ ಒಪ್ಪಂದ ದೀರ್ಘಕಾಲದ ಪ್ರಕ್ರಿಯೆ

KannadaprabhaNewsNetwork |  
Published : Nov 09, 2026, 02:30 AM IST
ಫೋಟೋವಿವರ- (6ಎಚ್‌ಪಿಟಿ3)  ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ವತಿಯಿಂದ ಅಲ್ಲಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ಮಾತು - 41 ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ. ವಿ.ಜಿ. ಹೆಗಡೆ ಮಾತನಾಡಿದರು | Kannada Prabha

ಸಾರಾಂಶ

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಚರ್ಚೆ ಹಾಗೂ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ರೀತಿಯಲ್ಲಿ ಮುನ್ನಡೆಯಬೇಕು.

ಹೊಸಪೇಟೆ: ಪ್ರತಿಯೊಂದು ದೇಶ ತನ್ನದೇ ಆದ ನ್ಯಾಯಾಂಗ ಮತ್ತು ಕಾನೂನು ವ್ಯವಸ್ಥೆ ಹೊಂದಿದೆ. ನಾವು ಯಾವುದೇ ದೇಶಕ್ಕೆ ಭೇಟಿ ನೀಡಿದರೂ ಅಲ್ಲಿನ ಕಾನೂನು ಮತ್ತು ನಿಯಮ ಗೌರವಿಸಿ ಪಾಲಿಸಬೇಕು. ಅಂತಾರಾಷ್ಟ್ರೀಯ ಕಾನೂನು ಮುಖ್ಯವಾಗಿ ವಿವಿಧ ರಾಷ್ಟ್ರಗಳ ನಡುವಿನ ಸಂಬಂಧ, ಸಹಕಾರ ಮತ್ತು ವಿವಾದ ನಿರ್ವಹಣೆಗೆ ಸಂಬಂಧಿಸಿದೆ ಎಂದು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇಂಟರ್‌ನ್ಯಾಷನಲ್ ಲೀಗಲ್ ಸ್ಟಡೀಸ್‌ನ ಪ್ರಾಧ್ಯಾಪಕ ಡಾ.ವಿ.ಜಿ. ಹೆಗಡೆ ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಿಂದ ಅಲ್ಲಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನಮ್ಮ ಮಾತು- 41 ಕಾರ್ಯಕ್ರಮದಲ್ಲಿ ಭಾರತೀಯ ನ್ಯಾಯ ಪದ್ಧತಿ ಮತ್ತು ಅಂತಾರಾಷ್ಟ್ರೀಯ ಕಾನೂನು ವ್ಯವಸ್ಥೆ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಚರ್ಚೆ ಹಾಗೂ ಬೆಳವಣಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ರೀತಿಯಲ್ಲಿ ಮುನ್ನಡೆಯಬೇಕು. ಭಾರತೀಯ ಸಂವಿಧಾನ ಸಮಾಜದ ಎಲ್ಲ ವರ್ಗಗಳನ್ನು ಒಳಗೊಳ್ಳುವ ಸಮಾನತೆಯ ಆಶಯ ಹೊಂದಿದೆ. ಶಿಕ್ಷಣದ ಗುಣಮಟ್ಟ ಮತ್ತು ವ್ಯಾಪ್ತಿ ಹೆಚ್ಚಿಸಲು ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಇನ್ನಷ್ಟು ಹಣ ವ್ಯಯಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ವಿವಿಧ ದೇಶಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದಾಗ ಅಂತಾರಾಷ್ಟ್ರೀಯ ಕಾನೂನು ವ್ಯವಸ್ಥೆಯ ಮೂಲಕ ಪ್ರತಿಕ್ರಿಯಿಸಲು ಮತ್ತು ಕ್ರಮಕ್ಕೆ ಮುಂದಾಗಲು ಅವಕಾಶಗಳಿವೆ. ಆದರೆ ಈ ವಿಚಾರ ನಿರ್ಧಾರ ಕೈಗೊಳ್ಳುವುದು ಅಷ್ಟು ಸುಲಭವಲ್ಲ. ಏಕೆಂದರೆ ಪ್ರತಿಯೊಂದು ದೇಶದ ಕಾನೂನು ವ್ಯವಸ್ಥೆ, ನಿಯಮಗಳು ಮತ್ತು ನಿಲುವುಗಳಲ್ಲಿ ವ್ಯತ್ಯಾಸಗಳಿರುತ್ತವೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳುವುದು ಸವಾಲಿನ ಸಂಗತಿಯಾಗಿದೆ ಎಂದು ಹೇಳಿದರು.

ಇತ್ತೀಚಿನ ಯುದ್ಧಗಳ ಸ್ವರೂಪ ಗಮನಿಸಿದರೆ, ಮುಂದಿನ ದಿನಗಳಲ್ಲಿ ಯುದ್ಧದ ವಿಧಾನ ಮತ್ತಷ್ಟು ಬದಲಾಗುವ ಸಾಧ್ಯತೆಯಿದೆ. ಕೃತಕ ಬುದ್ಧಿಮತ್ತೆ, ಆಧುನಿಕ ತಂತ್ರಜ್ಞಾನ ಮತ್ತು ಮಾನವರಹಿತ ಡ್ರೋನ್‌ಗಳ ಬಳಕೆ ಹೆಚ್ಚಾಗಬಹುದು. ಇದರಿಂದ ಯುದ್ಧ ಕಾರ್ಯಾಚರಣೆಗಳಲ್ಲಿ ಮಾನವ ಸೈನಿಕರ ನೇರ ಪಾಲ್ಗೊಳ್ಳುವಿಕೆಯ ಅಗತ್ಯವೂ ಕೆಲವು ಹಂತಗಳಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ಡೀನ್ ಹಾಗೂ ಪ್ರಾಧ್ಯಾಪಕ ಡಾ.ಮಾಧವ ಪೆರಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿ ಸಭೆಯಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವೆಂಕಟಗಿರಿ ದಳವಾಯಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಸಭೆಯಲ್ಲಿ ಮಾತನಾಡಿದರು.

ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಂಶೋಧನಾರ್ಥಿ ಖಾಜಾಸಾಹೇಬ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ