ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳು ನಡೆಯಲಿರುವ ಅಂತರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನದದಲ್ಲಿ ರಾಜ್ಯ ಅಲ್ಲದೇ,ಅಕ್ಕಪಕ್ಕದ ರಾಜ್ಯಗಳು ಮತ್ತು ವಿದೇಶಗಳಿಂದ ಭೌದ್ದ ಗುರುಗಳು, ಅನುಯಾಯಿಗಳು, ಉಪಾಸಕರು ಆಗಮಿಸಲಿದ್ದು, ಎರಡು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯೊಂದಿಗೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಸಮ್ಮೇಳನಕ್ಕೆ ಆಗಮಿಸುವ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಿದ್ದು, ಇದಕ್ಕಾಗಿ ಬೃಹತ್ ವೇದಿಕೆಯನ್ನು ಅನ್ನು ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿದೆ. ಸುತ್ತೂರು ಜಾತ್ರೆಯ ಸಂದರ್ಭದಲ್ಲಿ ಅಡುಗೆ ತಯಾರು ಮಾಡುವವರೆ ಈ ಸಮ್ಮೇಳನದ ಊಟದ ವ್ಯವಸ್ಥೆಯನ್ನು ವಹಿಸಿಕೊಂಡಿದ್ದು, ಇಂದು ಸಂಜೆಯಿಂದಲೇ ದಾಸೋಹ ಆರಂಭವಾಗಿದೆ.
ಬೌದ್ದ ಮಹಾಸಮ್ಮೇಳಕ್ಕೆ ಶ್ರೀಲಂಕಾ, ವಿಯೆಟ್ನಾಂ, ಜಪಾನ್, ಮಲೇಶಿಯಾ ಸೇರಿದಂತೆ ವಿವಿಧ ದೇಶಗಳಿಂದ ಸಾವಿರಾರು ಬೌದ್ಧ ಭಿಕ್ಕುಗಳು ಆಗಮಿಸಲಿದ್ದು, ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಐತಿಹಾಸಿಕ ಭೌದ್ದ ಸಮ್ಮೇಳವು ಅ.೨೪ ರಂದು ಉದ್ಘಾಟನೆಗೊಳ್ಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಕೊಲಂಬೊ ವಿಶ್ವವಿದ್ಯಾಲಯದ ಶೀಲವಂತ ಮಹಾಥೇರೋ ಬಂತೇಜಿ ಸಾನ್ನಿಧ್ಯ ವಹಿಸಲಿದ್ದು ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.ಅಲ್ಲದೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ವೈಜ್ಞಾನಿಕತೆ, ಮಾನವೀಯ ಮೌಲ್ಯಕ್ಕೆ ಬೌದ್ಧ ಧರ್ಮ ಒತ್ತು
ಡಾ.ಬಿ.ಆರ್.ಅಂಬೇಡ್ಕರ್ ಬೌದ್ಧ ಧಮ್ಮವನ್ನು ಸ್ವೀಕರಿಸುವ ಮೂಲಕ ಸಮಾನತೆ, ಸ್ವಾಭಿಮಾನ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರಿದ್ದಾರೆ. ಬುದ್ಧನ ವಿಚಾರಧಾರೆಗಳು ಮತ್ತು ಅಂಬೇಡ್ಕರ್ ಅವರ ಚಿಂತನೆಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಜಾತಿ, ಧರ್ಮದ ಭೇದಭಾವಗಳನ್ನು ಮೀರಿ ಎಲ್ಲರೂ ಪರಸ್ಪರ ಗೌರವದಿಂದ ಬದುಕುವ ಸಮಾಜ ನಿರ್ಮಾಣಕ್ಕೆ ಇಂತಹ ಸಮ್ಮೇಳನಗಳು ಪ್ರೇರಣೆ ನೀಡುತ್ತವೆ.