ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ, ಉಚಿತ ಕಾಫಿ ವಿತರಣೆ

KannadaprabhaNewsNetwork |  
Published : Oct 02, 2024, 01:00 AM ISTUpdated : Oct 02, 2024, 01:01 AM IST
ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಣೆ | Kannada Prabha

ಸಾರಾಂಶ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಣೆ ಮಾಡಲಾಯಿತು. ಚಿಕ್ಕಬಸಪ್ಪ ಕ್ಲಬ್‌ ಅಧ್ಯಕ್ಷ ಮಹೇಶ್‌ ಚಾಲನೆ ನೀಡಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಬಿಗ್ ಕಪ್ ಮಡಿಕೇರಿ, ಬೆರಿಸ್ ಅಂಡ್ ಲೀಗ್ಸ್, ಬ್ಲಾಸಮ್ ಅಗ್ರಿ ಶಾವರ್ಸ್ ಮತ್ತು ಕಾಫಿ ಬೋರ್ಡ್ ಆಫ್ ಇಂಡಿಯಾ ಸಹಯೋಗದಲ್ಲಿ ಚಿಕ್ಕಬಸಪ್ಪ ಕ್ಲಬ್ ಆವರಣದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಉಚಿತ ಕಾಫಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮಕ್ಕೆ ಚಿಕ್ಕಬಸಪ್ಪ ಕ್ಲಬ್ ಅಧ್ಯಕ್ಷ ಮಹೇಶ್ ಚಾಲನೆ ನೀಡಿದರು. ನಂತರ ಮಾತನಾಡಿ, ಜನರಲ್ಲಿ ಕಾಫಿ ಬಗ್ಗೆ ಒಲವು ಮೂಡಿಸುವ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಕಾರ್ಯ ಶ್ಲಾಘನೀಯ. ಇಂತಹ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಸಂಸ್ಥೆಯ ಸಿಇಒ ಅನಿತಾ ನಂದ ಮಾತನಾಡಿ, ಕಾಫಿ ಬಳಕೆದಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಪ್ರಯುಕ್ತ ಇಂದು ಸಾರ್ವಜನಿಕರಿಗೆ ಉಚಿತವಾಗಿ ಇಂದು 1000 ಕಪ್ ಕಾಫಿ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 2016ರಿಂದ ಪ್ರತಿ ವರ್ಷ ದಿನಾಚರಣೆ ಆಚರಿಸಿಕೊಂಡು ಕಾಫಿ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಾಫಿ ಉದ್ಯಮವು ಬಿಕ್ಕಟ್ಟಿನಲ್ಲಿದ್ದಾಗ ಮತ್ತು ಕಾಫಿ ಬೆಲೆಗಳು ಅತ್ಯಂತ ಕಡಿಮೆ ಮಟ್ಟದಲ್ಲಿದ್ದಾಗ 2002 ರಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ ರಚನೆಯಾಯಿತು. ಇಂದು ಸಂಸ್ಥೆಯಲ್ಲಿ 400 ಕ್ಕೂ ಹೆಚ್ಚು ಮಹಿಳಾ ಕಾಫಿ ಬೆಳೆಗಾರ ಸದಸ್ಯರನ್ನು ಹೊಂದಿದ್ದು, ಲಾಭದಾಯಕವಾಗಿ ಮುಂದುವರೆದಿದೆ ಎಂದರು.

ದೇಶದ ಆಂತರಿಕವಾಗಿ ಕಾಫಿ ಬಳಕೆ ಕಡಿಮೆ ಇದ್ದು, ಬಳಕೆದಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಹಿಳಾ ಕಾಫಿ ಬೆಳೆಗಾರರು ಉತ್ತಮ ಕಾಫಿ ಬೆಳೆಸಲು ಮತ್ತು ಮಾಹಿತಿಗಾಗಿ ನಮ್ಮ ಸಂಸ್ಥೆಯೊಂದಿಗೆ ಸೇರಿಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭ ಸಂಸ್ಥೆಯ ಕಾರ್ಯದರ್ಶಿ ರಾಣಿ ನರೇಂದ್ರ, ನಿರ್ದೇಶಕಿ ಅನುರಾಧ ವಿಕ್ರಮ್, ಪೂರ್ಣಿಮಾ ವಿರೂಪಾಕ್ಷ ಮತ್ತಿತರರು ಇದ್ದರು.

PREV

Recommended Stories

ಪಕ್ಷ ಭೇದ ಮರೆತು ಅಭಿವೃದ್ಧಿ ಕೆಲಸ ಮಾಡಿ
ಮುತ್ತೂರು ನಡುಗಡ್ಡೆಯಿಂದ 7 ಕುಟುಂಬಗಳ ಸ್ಥಳಾಂತರ