ಅಮೆರಿಕದ ನ್ಯೂಯಾರ್ಕ್‌ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ: ಶ್ರೀಗಳಿಂದ ಆಶೀರ್ವಚನ

KannadaprabhaNewsNetwork |  
Published : Aug 31, 2026, 01:45 AM IST
30ಕೆಎಂಎನ್ ಡಿ31 | Kannada Prabha

ಸಾರಾಂಶ

ವಿಭಿನ್ನ ಧರ್ಮಗಳ ನಾಯಕರು ಒಂದೇ ವೇದಿಕೆಯಲ್ಲಿ ಒಟ್ಟಾಗಿ ಸೇರಿ ಒಂದು ಜಗತ್ತು ಒಂದು ಮಾನವಕುಲ ಎಂಬ ಸಾರ್ವತ್ರಿಕ ಸಂದೇಶವನ್ನು ಸಾರಿರುವುದು ವಿಶ್ವ ಸಾಮರಸ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಮಾನವ ಸಮಾಜವು ವಿಭಜನೆಗಳನ್ನು ಮೀರಿ ಪ್ರೀತಿ, ಕರುಣೆ, ಪರಸ್ಪರ ಗೌರವ ಮತ್ತು ಸಹಕಾರದೊಂದಿಗೆ ಮುನ್ನಡೆಯಬೇಕು.

ನಾಗಮಂಗಲ:

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಒಂದು ಜಗತ್ತು ಒಂದು ಮಾನವಕುಲ ಎಂಬ ಆಶಯ ಕುರಿತು ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸುಮಾರು 14 ವಿವಿಧ ಧರ್ಮಗಳನ್ನು ಪ್ರತಿನಿಧಿಸಿದ ಧಾರ್ಮಿಕ ನಾಯಕರು ಭಾಗವಹಿಸಿ ವಿಶ್ವಶಾಂತಿ, ಮಾನವೀಯತೆ, ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಸಹಬಾಳ್ವೆಯ ಕುರಿತು ತಮ್ಮ ಸಂದೇಶ ಹಂಚಿಕೊಂಡರು.

ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಧರ್ಮ, ದೇಶ, ಭಾಷ, ಸಂಸ್ಕೃತಿ ಹಾಗೂ ವಿವಿಧ ನಂಬಿಕೆಗಳ ವೈವಿಧ್ಯತೆಯನ್ನು ಗೌರವಿಸುವುದರ ಜೊತೆಗೆ, ಇಡೀ ಮಾನವಕುಲ ಒಂದೇ ಎಂಬ ಅರಿವು ಮತ್ತು ಭಾವನೆಯನ್ನು ಬೆಳೆಸುವ ಅಗತ್ಯವಿದೆ ಎಂದರು.

ವಿಭಿನ್ನ ಧರ್ಮಗಳ ನಾಯಕರು ಒಂದೇ ವೇದಿಕೆಯಲ್ಲಿ ಒಟ್ಟಾಗಿ ಸೇರಿ ಒಂದು ಜಗತ್ತು ಒಂದು ಮಾನವಕುಲ ಎಂಬ ಸಾರ್ವತ್ರಿಕ ಸಂದೇಶವನ್ನು ಸಾರಿರುವುದು ವಿಶ್ವ ಸಾಮರಸ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಮಾನವ ಸಮಾಜವು ವಿಭಜನೆಗಳನ್ನು ಮೀರಿ ಪ್ರೀತಿ, ಕರುಣೆ, ಪರಸ್ಪರ ಗೌರವ ಮತ್ತು ಸಹಕಾರದೊಂದಿಗೆ ಮುನ್ನಡೆಯಬೇಕು. ಧರ್ಮಗಳು ಮಾನವೀಯತೆ ಬೆಸೆಯುವ ಸೇತುವೆಗಳಾಗಬೇಕು ಎಂಬ ಆಶಯ ಸಮ್ಮೇಳನದಲ್ಲಿ ಪ್ರತಿಧ್ವನಿಸಿತು.

ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಜೀ ಭಾಗವತ್ ಹಾಗೂ ಸ್ವಾಮಿ ಪರಮಾತ್ಮಾನಂದಜೀ ಅವರೂ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ಗೆಜ್ಜಲಗೆರೆ ಗ್ರಾಪಂ ಆಗಿ ಉಳಿಸಲು ಸಿಎಂ, ಅಧಿಕಾರಿಗಳ ಬಳಿ ಚರ್ಚೆ: ಕೆ.ಎಂ.ಉದಯ್

ಕನ್ನಡಪ್ರಭ ವಾರ್ತೆ ಮದ್ದೂರುಗೆಜ್ಜಲಗೆರೆ ಗ್ರಾಪಂ ಅನ್ನು ನಗರಸಭೆಯಿಂದ ಕೈಬಿಡುವಂತೆ ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಅಧಿಕಾರಿಗಳ ಬಳಿ ಚರ್ಚಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಗೆಜ್ಜಲಗೆರೆ ಗ್ರಾಪಂ ನಗರಸಭೆಗೆ ಸೇರ್ಪಡೆ ಖಂಡಿಸಿ ಗ್ರಾಪಂ ಕಚೇರಿ ಎದುರು 251 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶಾಸಕರು 2ನೇ ಬಾರಿಗೆ ಭೇಟಿ ನೀಡಿ ಪ್ರತಿಭಟನಾ ನಿರತರೊಂದಿಗೆ ಮಾತನಾಡಿದರು.ಇನ್ನೊಂದು ವಾರದೊಳಗೆ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಗ್ರಾಮದ ಕೆಲವು ಪ್ರಮುಖ ಹೋರಾಟಗಾರರ ಜೊತೆಗೆ ಸಭೆ ನಡೆಸಲಾಗುವುದು. ಗ್ರಾಪಂ ನಗರಸಭೆಯಾದರೂ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡುವುದಿಲ್ಲ. ಇನ್ನು ಎರಡು ವರ್ಷಗಳಲ್ಲಿ ಎಷ್ಟು ಸಾಧ್ಯವೋ ಅಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದರು.

ರೈತ ನಾಯಕಿ ಸುನಂದ ಜಯರಾಮು ಮಾತನಾಡಿ, ಗೆಜ್ಜಲಗೆರೆ ಗ್ರಾಪಂ ನಗರಸಭೆಗೆ ಸೇರ್ಪಡೆ ವಿರೋಧಿಸಿ ಸುಮಾರು 251 ದಿನಗಳಿಂದ ನಿರಂತರವಾಗಿ ಶಾಂತಿಯುತ ಹೋರಾಟ ಮಾಡುತ್ತಿದ್ದು, ಶಾಸಕಕು ಗೆಜ್ಜಲಗೆರೆಯನ್ನು ಮದ್ದೂರು ನಗರಸಭೆಯಿಂದ ಕೈ ಬಿಟ್ಟು ಗ್ರಾಪಂ ಆಗಿಯೇ ಉಳಿಸುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರ ನಮ್ಮ ಬೇಡಿಕೆ ಈಡೇರಿಸಬೇಕೆಂದು ಮನವಿ ಮಾಡಿದರು.ಈ ವೇಳೆ ಮುಖಂಡರಾದ ಜಿ.ಎಚ್.ವೀರಪ್ಪ, ಗುರುಮೂರ್ತಿ, ಜಿ.ಟಿ.ಚಂದ್ರಶೇಖರ್, ಡಾ.ಹೊನ್ನಯ್ಯ, ತಾಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್, ಶಾಂತಮ್ಮ, ಗೌರಮ್ಮ, ಜಯಮ್ಮ ಸೇರಿದಂತೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

222 ಬೀದಿ ದೀಪಗಳ ಪೈಕಿ 140 ದೀಪ ಬಂದ್!
ಲಾಲ್ಬಾಗಲ್ಲಿ ಪರಿಸರವಾದಿಗಳ ಪ್ರತಿಭಟನೆ