ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರಿಡಾಂಗಣ ೨೦೨೬ಕ್ಕೆ ಉದ್ಘಾಟನೆ

KannadaprabhaNewsNetwork | Published : Apr 8, 2025 12:33 AM

ಸಾರಾಂಶ

ವಸಂತ ನರಸಾಪುರ ಸಮೀಪ ೧೬೦ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಮ್ಮ ತುಮಕೂರು ಜಿಲ್ಲೆಗೆ ಹೆಮ್ಮೆ. ರಾಜ್ಯದ ೨ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಿ ಮುಂದಿನ ವರ್ಷದೊಳಗೆ ನಾವು ರಣಜಿ ಪಂದ್ಯ ವೀಕ್ಷಿಸಲಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ವಸಂತ ನರಸಾಪುರ ಸಮೀಪ ೧೬೦ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಮ್ಮ ತುಮಕೂರು ಜಿಲ್ಲೆಗೆ ಹೆಮ್ಮೆ. ರಾಜ್ಯದ ೨ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಿ ಮುಂದಿನ ವರ್ಷದೊಳಗೆ ನಾವು ರಣಜಿ ಪಂದ್ಯ ವೀಕ್ಷಿಸಲಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನುಮ ದಿನದ ಪ್ರಯುಕ್ತ ೩ದಿನಗಳ ಕಾಲ ನಡೆದ ಹೊನಲು ಬೆಳಕಿನ ಡಾ.ಜಿ.ಪರಮೇಶ್ವರ್ ಕಪ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಾವು ಓರ್ವ ಕ್ರೀಡಾಪಟುವಾಗಿ ಕ್ರೀಡೆಗೆ ಅತಿಹೆಚ್ಚು ಪ್ರೋತ್ಸಾಹ ನೀಡಿದ್ದೇನೆ. ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದ ೩ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣ ೪೦ದಿನದೊಳಗೆ ಉದ್ಘಾಟನೆ ಆಗಲಿದೆ. ಕೊರಟಗೆರೆ ಕ್ಷೇತ್ರದ ಯುವ ಕ್ರೀಡಾಪಟುಗಳಿಗೆ ನಾನು ನೀಡಿದ ಭರವಸೆ ಈಡೇರಿಸುವ ಕೆಲಸ ಮಾಡಿದ್ದೇನೆ. ಕ್ರೀಡಾ ಚಟುವಟಿಕೆ ಏನೇ ಇದ್ರು ಸಹ ನಾನು ಯುವ ಪ್ರತಿಭೆಗಳಿಗೆ ಸಹಾಯಹಸ್ತ ನೀಡುತ್ತೇನೆ ಎಂದರು.

ಮಾದಕ ವಸ್ತು ಮುಕ್ತ ಕರ್ನಾಟಕ ಮಾಡಲು ಗೃಹ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಶಾಲಾ ಕಾಲೇಜುಗಳಲ್ಲಿ ಉಪನ್ಯಾಸಕರು ಮಕ್ಕಳಿಗೆ ಕ್ರೀಡೆಗಳಲ್ಲಿ ಆಸಕ್ತಿ ತೋರಿಸಿದ್ರೇ ಮಾದಕ ವಸ್ತುಗಳೇ ದೂರ ಆಗಲಿದೆ. ಪೋಷಕರು ಸಹ ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಯುವ ಸಮೂಹ ಮಾದಕ ವಸ್ತುಗಳ ಬಳಕೆಯ ಬಗ್ಗೆ ಆಗುವ ಅನಾನುಕೂಲದ ಬಗ್ಗೆ ತಿಳಿದುಕೊಳ್ಳುವುದು ಅತ್ಯಾವಶ್ಯಕ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಮಂಜುನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಯುವಧ್ಯಕ್ಷ ಬೈರೇಶ್, ಯುವ ಉಪಾಧ್ಯಕ್ಷ ದೀಪು, ಕ್ರಿಕೆಟ್ ಆಯೋಜಕ ನಂದೀಶ್, ಬೈರೇಶ್, ರಘುವೀರ್, ಕಿರಣ್‌ಕುಮಾರ್, ಶಿವು, ದೀಪಕ್, ರಂಜಿತ್, ಗುಂಡ, ಗಗನ್, ಕಿಶೋರ್, ಬಾಬು ಸೇರಿದಂತೆ ಇನ್ನಿತರರು ಇದ್ದರು.

Share this article