ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ 135 ಕಿ.ಮೀ ಮಾನವ ಸರಪಳಿ

KannadaprabhaNewsNetwork |  
Published : Sep 07, 2024, 01:40 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ | Kannada Prabha

ಸಾರಾಂಶ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ. 15 ರಂದು ಪ್ರಜಾಪ್ರಭುತ್ವ ದಿನವನ್ನು ರಾಜ್ಯಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ 135 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದ್ದಾರೆ.

ಕನ್ನಡಪ್ರಭವಾರ್ತೆ ಚಿತ್ರದುರ್ಗಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ. 15 ರಂದು ಪ್ರಜಾಪ್ರಭುತ್ವ ದಿನವನ್ನು ರಾಜ್ಯಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ 135 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದ್ದಾರೆ.ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪೂರ್ವ ಸಿದ್ಧತಾ ಸಭೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಪ್ರತಿ ವರ್ಷ ಸೆ. 15 ರಂದು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಕಳೆದ ವರ್ಷ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ರಾಜ್ಯಾದ್ಯಂತ ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ರಾಜ್ಯದಲ್ಲಿ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸಿ, ಸಂವಿಧಾನ ಪೀಠಿಕೆ ವಾಚನ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರುಗಳು ಆಸಕ್ತಿ ವಹಿಸಿ, ಆಯಾ ಜಿಲ್ಲೆಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವು ದೇಶಾಭಿಮಾನ ಬಿಂಬಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಎಲ್ಲ ಜಿಲ್ಲೆಗಳಲ್ಲೂ ಅಂದು ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದ ಯಶಸ್ವಿಗೆ ಆಯಾ ಜಿಲ್ಲಾಧಿಕಾರಿಗಳು ವಿವಿಧ ಸಂಘಸಂಸ್ಥೆಗಳು, ಸಂಘಟನೆಗಳು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಸೂಚನೆ ನೀಡಿದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ರಾಜ್ಯದಲ್ಲಿ ಏರ್ಪಡಿಸಲಾಗುತ್ತಿರುವ ಮಾನವ ಸರಪಳಿ ಕಾರ್ಯಕ್ರಮ ಸಂದರ್ಭವನ್ನು ಬಳಸಿಕೊಂಡು ಅರಣ್ಯ ಇಲಾಖೆಯಿಂದ ರಾಜ್ಯದಲ್ಲಿ ಒಟ್ಟು 10 ಲಕ್ಷ ಸಸಿಗಳನ್ನು ನೆಡಲು ಕ್ರಮ ಕೈಗೊಳ್ಳಲಾಗುವುದು ತಿಳಿಸಿದರು.ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾಹಿತಿ ನೀಡಿ, ಜಿಲ್ಲೆಯಲ್ಲಿ 135 ಕಿಮೀ ನಷ್ಟು ಮಾನವ ಸರಪಳಿ ನಿರ್ಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೆ ಕೈಗೊಳ್ಳಲಾಗಿದೆ. ರಾಜ್ಯ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಿದ್ಧತಾ ಸಭೆಯನ್ನು ನಡೆಸಲಾಗಿದೆ ಎಂದರು.

ಉಸ್ತುವಾರಿ ಸಚಿವರು ಕಾರ್ಯಕ್ರಮ ಯಶಸ್ವಿಗೆ ಅಗತ್ಯವಿರುವ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಸೆ.9 ರಂದು ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರಿನಲ್ಲಿ ಮತ್ತೊಂದು ಬಾರಿ ಸಿದ್ಧತಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?