ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಗುರುವಾರ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವ ನಡೆಸಲಾಗಿದೆ. ಇದನ್ನು ಇನ್ನಷ್ಟು ವಿಸ್ತರಿಸಿ ಹೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಲು ಅನುವಾಗುವಂತೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕೆಂಬ ಉದ್ದೇಶವಿದೆ ಎಂದರು. ಭಾರತದ ಸಿನಿಮಾ ಕ್ಷೇತ್ರದಲ್ಲಿ ಕರಾವಳಿ ಕರ್ನಾಟಕದ ಬಹಳಷ್ಟು ಸಾಧಕರು ಕೊಡುಗೆ ನೀಡಿದ್ದಾರೆ. ಹಿಂದಿ, ಕನ್ನಡದೊಂದಿಗೆ ಸ್ಥಳೀಯ ತುಳು, ಬ್ಯಾರಿ, ಕೊಂಕಣಿ ಭಾಷೆಗಳಲ್ಲಿ ಚಲನಚಿತ್ರೋತ್ಸವಗಳು ಮೂಡಿ ಬಂದಿರುವುದು ಇಲ್ಲಿನ ಕಲಾ ಶ್ರೀಮಂತಿಕೆಯನ್ನು ತೋರಿಸುತ್ತದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು.ಚಲನಚಿತ್ರೋತ್ಸವ ಉದ್ಘಾಟಿಸಿದ ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಸಿನಿಮಾ ಇಲ್ಲಿನ ಸಂಸ್ಕೃತಿಯಾಗಿದೆ. ಎಲ್ಲಿ ಕಲೆಗೆ ಪ್ರಾಮುಖ್ಯತೆ ನೀಡಲಾಗುತ್ತದೆಯೋ ಅಲ್ಲಿ ಅಭಿವೃದ್ಧಿ ಉತ್ತಮವಾಗಿರುತ್ತದೆ. ಕಲೆಯನ್ನು ಕಲೆಯಾಗಿ ನೋಡಬೇಕೇ ಹೊರತು ಸಂಕುಚಿತ ಭಾವನೆಯಿಂದ ಕಾಣುವುದು ಸರಿಯಲ್ಲ ಎಂದು ಅವರು ಹೇಳಿದರು.
ಭಾರತ್ ಸಿನಿಮಾದ ಚಿತ್ರಮಂದಿರದ ಮುಖ್ಯಸ್ಥ ಬಾಲಕೃಷ್ಣ ಶೆಟ್ಟಿ, ಸುಬ್ರಾಯ ಪೈ, ಅಪರ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹರ್ಷವರ್ಧನ್ ಮತ್ತಿತರರು ಇದ್ದರು.ಫೋಟೊ
2ಫಿಲ್ಮ್