ಎಂಪಿಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

KannadaprabhaNewsNetwork | Published : Oct 19, 2024 12:22 AM

ಸಾರಾಂಶ

ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಇಲ್ಲಿನ ಮಾನವಿಕ ಸಂಘ ಮತ್ತು ಮಹಿಳಾ ಸಂಘ ಆಶ್ರಯದಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಕಾಲೇಜು ಆವರಣದಲ್ಲಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಇಲ್ಲಿನ ಮಾನವಿಕ ಸಂಘ ಮತ್ತು ಮಹಿಳಾ ಸಂಘ ಆಶ್ರಯದಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಕಾಲೇಜು ಆವರಣದಲ್ಲಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಎ ಸಿವಿಲ್ ಜಡ್ಜ್ ಮತ್ತು ಜೆ. ಎಂ. ಎಫ್. ಎಫ್. ಸಿ ನ್ಯಾಯಾಧೀಶ ಕೋಮಲಾ ಆರ್. ಸಿ., ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ರಂಗದಲ್ಲೂ ಗಂಡು ಮಕ್ಕಳಿಗೆ ಸರಿ ಸಮಾನವಾಗಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಇತ್ತೀಚೆಗೆ ಲಿಂಗ ತಾರತಮ್ಯ ಕಡಿಮೆ ಆಗಿದ್ದು ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನಮಾನ ದೊರೆತಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಕಾರ್ಕಳದ ನ್ಯಾಯವಾದಿ ಸಂಘದ ಉಪಾಧ್ಯಕ್ಷ ಕೆ. ಹರೀಶ್ ಅಧಿಕಾರಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಸಂರಕ್ಷಣೆಗಾಗಿ ಸಂವಿಧಾನದ ಕಾನೂನುಗಳಲ್ಲಿ ಕೆಲ ತಿದ್ದುಪಡಿ ಮಾಡಿದ್ದು, ಜನರಲ್ಲಿ ಈ ರೀತಿಯ ಕಾರ್ಯಕ್ರಮದ ಮುಖಾಂತರ ಜಾಗೃತಿ ಮೂಡಿಸುವ ಅಗತ್ಯತೆ ತುಂಬಾ ಇದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನ್ಯಾಯವಾದಿ ನಂದಿನಿ. ಬಿ. ಶೆಟ್ಟಿ ಮಾತನಾಡಿ, ವಿಶ್ವದಾದ್ಯಂತ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಿಸಲಾಗುತ್ತಿದ್ದು ಹೆಣ್ಣು ಮಕ್ಕಳು ಎಲ್ಲಾ ರಂಗದಲ್ಲೂ ಮುಂದೆ ಬರಬೇಕು ಎಂದರು.

ಅಧ್ಯಕ್ಷತೆ ವಹಿಸಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಚಂದ್ರಾವತಿ ಮಾತನಾಡಿದರು.

ಐಕ್ಯೂಎಸಿ ಸಂಚಾಲಕಿ ಸುಷ್ಮಾ ರಾವ್, ಮಾನವಿಕ ಸಂಘ ಮತ್ತು ಮಹಿಳಾ ವೇದಿಕೆ ಸಂಚಾಲಕಿ ಭಾಗ್ಯಲಕ್ಷ್ಮಿ ಇದ್ದರು.ರಕ್ಷಿತಾ ಆಚಾರ್ಯ ನಿರೂಪಿಸಿದರು. ಮಾನವಿಕ ಸಂಘ ಮತ್ತು ಮಹಿಳಾ ವೇದಿಕೆಯ ಸಂಚಾಲಕಿ ಭಾಗ್ಯಲಕ್ಷ್ಮಿ ಸ್ವಾಗತಿಸಿದರು. ದಿವ್ಯ ವಂದಿಸಿದರು.

Share this article