ಹುಬ್ಬಳ್ಳಿ:
ಬಳಿಕ ಸುದ್ದಿಗೋಷ್ಠಿಯಲ್ಲಿ ಕ್ಷಮತಾ ಸೇವಾ ಸಂಸ್ಥೆ ಸಂಚಾಲಕ ಗೋವಿಂದ ಜೋಶಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತಿ ಹಾಗೂ ದೇಶಿ ಕ್ರೀಡೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಸಂಸದ ಸಾಂಸ್ಕೃತಿಕ ಮಹೋತ್ಸವ ಮಾಡಲಾಗುತ್ತಿದೆ. ನಶಿಸುತ್ತಿರುವ ದೇಶಿ ಕ್ರೀಡೆ ಹಾಗೂ ಸಂಸ್ಕೃತಿ ಉಳಿಸಿಕೊಂಡು ಹೋಗುವ ಉದ್ದೇಶವಾಗಿದೆ ಎಂದರು.
20ರಂದು ಬೆಳಗ್ಗೆ ದೇಸಿ ಕ್ರೀಡೆಗೆ ಶಾಸಕ ಅರವಿಂದ ಬೆಲ್ಲದ ಹಾಗೂ ಜಂಗಿ ನಿಕಾಲಿ ಕುಸ್ತಿ ಸ್ಪರ್ಧೆಗೆ ಶಾಸಕ ಮಹೇಶ ಟೆಂಗಿನಕಾಯಿ ಚಾಲನೆ ನೀಡುವರು. ಅಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಕ್ರೀಡೆ ಹಾಗೂ ಮನರಂಜನೆಗೆ ನಡೆಯಲಿವೆ. ಎರಡ್ಮೂರು ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೇಶ ಹಾಗೂ ವಿದೇಶಗಳಿಂದ ಗಾಳಿಪಟ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಫೆ. 20ರಂದು ಸಂಜೆ ಗಾಯಕ ಕೈಲಾಶ ಖೇರ್ ಹಾಗೂ ಬಾಲ ಗಾಯಕಿ ಮಹನ್ಯ ಪಾಟೀಲ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಫೆ. 21ರಂದು ಗಾಯಕ ರಘು ದೀಕ್ಷಿತ್ ಹಾಗೂ ಬಿಗ್‌ಬಾಸ್ ವಿಜೇತ ಹನುಮಂತ ಲಮಾಣಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ದೇಶಿ ಕ್ರೀಡೆಗಳಾದ ಜಂಗಿ ನಿಕಾಲಿ ಕುಸ್ತಿ, ಮೊದಲ ಬಾರಿಗೆ ಸಾಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ ಹಾಗೂ ಮಲ್ಲಕಂಬ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.ಮೇಯರ್ ರಾಮಪ್ಪ ಬಡಿಗೇರ, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚವ್ಹಾಣ ಇದ್ದರು.