ಜ.೭ರಿಂದ ಅಂತಾರಾಷ್ಟ್ರೀಯ ಪುರುಷರ ಕಬಡ್ಡಿ ಪಂದ್ಯಾವಳಿ

KannadaprabhaNewsNetwork |  
Published : Nov 26, 2026, 01:30 AM IST
೨೫ಕೆಎಂಎನ್‌ಡಿ-೧ಮಂಡ್ಯದ ಕಲ್ಲಹಳ್ಳಿಯಲ್ಲಿರುವ ನಾಗಸಿರಿ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸುವ ಕುರಿತು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. | Kannada Prabha

ಸಾರಾಂಶ

ಸಕ್ಕರೆ ನಾಡು ಮಂಡ್ಯವನ್ನು ಅಂತಾರಾಷ್ಟ್ರೀಯ ಕ್ರೀಡಾ ಚಟುವಟಿಕೆಗಳ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ೭೩ನೇ ಅಂತಾರಾಷ್ಟ್ರೀಯ ಪುರುಷರ ಕಬಡ್ಡಿ ಪಂದ್ಯಾವಳಿ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಸಕ್ಕರೆ ನಾಡು ಮಂಡ್ಯವನ್ನು ಅಂತಾರಾಷ್ಟ್ರೀಯ ಕ್ರೀಡಾ ಚಟುವಟಿಕೆಗಳ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ೭೩ನೇ ಅಂತಾರಾಷ್ಟ್ರೀಯ ಪುರುಷರ ಕಬಡ್ಡಿ ಪಂದ್ಯಾವಳಿ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿವೆ.

ಕರ್ನಾಟಕ ರಾಜ್ಯ ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಹಾಗೂ ಮಂಡ್ಯ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಆಶ್ರಯದಲ್ಲಿ ಸಿಆರ್‌ಎಸ್ ಕಪ್ ಕಬಡ್ಡಿ ಪಂದ್ಯಾವಳಿಯನ್ನು ೨೦೨೭ರ ಜನವರಿ ೭, ೮, ೯ ಮತ್ತು ೧೦ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸುವ ಕುರಿತು ಪೂರ್ವಭಾವಿ ಸಭೆ ನಡೆಸಿ, ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.

ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಅಗತ್ಯವಿರುವ ವ್ಯವಸ್ಥೆಗಳು, ಮೈದಾನದ ಸಿದ್ಧತೆ, ಕ್ರೀಡಾಪಟುಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ, ಸಾರಿಗೆ ಸೌಲಭ್ಯ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕಬಡ್ಡಿ ಭಾರತದ ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದು, ಗ್ರಾಮೀಣ ಪ್ರದೇಶದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಅಪಾರ ಜನಪ್ರಿಯತೆ ಹೊಂದಿದೆ. ಈ ಪಂದ್ಯಾವಳಿಯ ಮೂಲಕ ಮಂಡ್ಯ ಜಿಲ್ಲೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಕ್ರೀಡಾ ಗುರುತಿಸುವಿಕೆ ದೊರೆಯುವ ನಿರೀಕ್ಷೆಯಿದೆ. ವಿವಿಧ ಪ್ರದೇಶಗಳಿಂದ ಆಗಮಿಸುವ ಕ್ರೀಡಾಪಟುಗಳು, ಕ್ರೀಡಾಧಿಕಾರಿಗಳು ಹಾಗೂ ಕಬಡ್ಡಿ ಅಭಿಮಾನಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಆಯೋಜಕರ ಪ್ರಮುಖ ಜವಾಬ್ದಾರಿಯಾಗಿದೆ.

ಯಶಸ್ವಿ ಆಯೋಜನೆಗೆ ಪೂರ್ವ ಸಿದ್ಧತೆ:

ಪಂದ್ಯಾವಳಿಯ ಸಂಘಟನೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ವಿವಿಧ ಸಮಿತಿ ರಚಿಸುವುದು, ಆಯೋಜನಾ ರೂಪುರೇಷೆ ಸಿದ್ಧಪಡಿಸುವುದು, ಕ್ರೀಡಾಂಗಣದ ಸಿದ್ಧತೆ, ಪಂದ್ಯಗಳ ವೇಳಾಪಟ್ಟಿ, ತಾಂತ್ರಿಕ ವ್ಯವಸ್ಥೆ ಹಾಗೂ ಪ್ರೇಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಜಿಲ್ಲೆಯ ಕ್ರೀಡಾಭಿಮಾನಿಗಳು, ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪಂದ್ಯಾವಳಿಗೆ ಪ್ರೋತ್ಸಾಹ ನೀಡುವಂತೆ ಮಾಡುವ ನಿಟ್ಟಿನಲ್ಲಿಯೂ ಚರ್ಚಿಸಲಾಯಿತು.

ಮಂಡ್ಯದಲ್ಲಿ ಇಂತಹ ದೊಡ್ಡ ಮಟ್ಟದ ಕ್ರೀಡಾಕೂಟ ಆಯೋಜನೆಯಾಗುತ್ತಿರುವುದರಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವಾತಾವರಣವನ್ನು ಹತ್ತಿರದಿಂದ ವೀಕ್ಷಿಸುವ ಅವಕಾಶ ದೊರೆಯಲಿದೆ. ಜೊತೆಗೆ ಜಿಲ್ಲೆಯ ಕಬಡ್ಡಿ ಪ್ರತಿಭೆಗಳಿಗೆ ಸ್ಫೂರ್ತಿ ಹಾಗೂ ಪ್ರೇರಣೆ ದೊರೆಯುವ ನಿರೀಕ್ಷೆಯಿದೆ.

ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಡ್ಯ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಪದಾಧಿಕಾರಿಗಳು, ಸಂಘಟಕರು ಮತ್ತು ಕ್ರೀಡಾ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕ್ರೀಡೆಗೆ ಏನು ಬೇಕಿದ್ದರೂ ಸಹಕಾರ ನೀಡಲು ಸಿದ್ಧನಿದ್ದೇನೆ. ಯಾವುದೇ ಅಸಮಾಧಾನ, ಗೊಂದಲಗಳಿಗೆ ಅವಕಾಶ ನೀಡದೆ ಪಕ್ಷಾತೀತವಾಗಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಿ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು.

- ಎನ್.ಚಲುವರಾಯಸ್ವಾಮಿ, ಜಲಸಂಪನ್ಮೂಲ ಸಚಿವರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವೇಶ್ವರರ ಬಗ್ಗೆ ಅವಹೇಳನಕಾರಿ ಪದಬಳಕೆ ನಾಡಿಗೆ ಕಪ್ಪುಚುಕ್ಕೆ: ಡಾ.ಶ್ರೀ.ಗುರುಬಸವ ಮಹಾಸ್ವಾಮಿ
ಸರ್ಕಾರಿ ಕೆಲಸವಿದ್ರೂ ರೈತನ ವರಿಸಲಿದ್ದಾಳೆ ಲಕ್ಷ್ಮೀ