ಕೆಂಪೇಗೌಡರು ಕಟ್ಟಿದ ಬೆಂಗಳೂರಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆ: ಎಸ್.ಎಸ್.ಸಂತೋಷ್ ಕುಮಾರ್

KannadaprabhaNewsNetwork |  
Published : Jun 28, 2026, 02:30 AM IST
ನರಸಿಂಹರಾಜಪುರ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಕ.ಸಾ.ಪ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮುರಾರ್ಜಿ ದೇಸಾಯಿ ಪ್ರಾಂಶುಪಾಲರು, ಶಿಕ್ಷಕರಿಗೆ ಸಾಧಕ ಪ್ರತಿಷ್ಠಾಪಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. | Kannada Prabha

ಸಾರಾಂಶ

ನರಸಿಂಹರಾಜಪುರನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ದೊಡ್ಡ ನಗರವಾಗಿ ಬೆಳೆದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಹಾಗೂ ವಕೀಲ ಎಸ್.ಎಸ್.ಸಂತೋಷ್ ಕುಮಾರ್ ತಿಳಿಸಿದರು.

- ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾ.ಕಸಾಪ ದಿಂದ ಕೆಂಪೇಗೌಡ ಜಯಂತಿ । ರಸ ಪ್ರಶ್ನೆ, ಶಿಕ್ಷಕರಿಗೆ ಸನ್ಮಾನ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ದೊಡ್ಡ ನಗರವಾಗಿ ಬೆಳೆದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಹಾಗೂ ವಕೀಲ ಎಸ್.ಎಸ್.ಸಂತೋಷ್ ಕುಮಾರ್ ತಿಳಿಸಿದರು.

ಶನಿವಾರ ತಾಲೂಕಿನ ಅಳಲಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಕಸಾಪ ಹಮ್ಮಿಕೊಂಡಿದ್ದ ನಾಡ ಪ್ರಭು ಕೆಂಪೇಗೌಡ ಜಯಂತಿಯಲ್ಲಿ ರಸ ಪ್ರಶ್ನೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು. ಮುಂದಾಲೋಚನೆಯಿಂದ ಬೆಂಗಳೂರು ನಗರ ಕಟ್ಟಿರುವುದರಿಂದ 1 ಕೋಟಿ ಜನರಿಗೆ ನೀರು, ವಸತಿ ಸೌಕರ್ಯ ಕಲ್ಪಿಸಲು ಅನುಕೂಲವಾಗಿದೆ. ಮಕ್ಕಳು ದಿನಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಇದರಿಂದ ಮಕ್ಕಳಲ್ಲಿ ಮುಂದಿನ ಜೀವನಕ್ಕೆ ಬೇಕಾದ ಜ್ಞಾನ, ಕೌಶಲ್ಯ ತಿಳಿಯಲಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಸಮಾಜ ಸೇವಕಿ ಜುಬೇದ ಮಾತನಾಡಿ ಕೆಂಪೇಗೌಡರು ಅವರ ಕಸುಬಿಗೆ ತಕ್ಕ ಹಾಗೆ ಪೇಟೆ ಗಳನ್ನು ನಿರ್ಮಿಸಿದ್ದರು.ಇಂದು ಬೆಂಗಳೂರು ಸಿಲಿಕಾನ್ ಸಿಟಿ ಎಂಬ ಹೆಸರು ಪಡೆಯಲು ಕೆಂಪೇಗೌಡರ ದೂರ ದೃಷ್ಟಿಯೇ ಕಾರಣ. ದೇಶದ ಬೇರೆ ನಗರಕ್ಕಿಂತ ಬೆಂಗಳೂರಿನಲ್ಲೇ ಐಟಿಬಿಟಿ ಕಂಪನಿಗಳು ಹೆಚ್ಚಾಗಿ ನೆಲೆಸಿದೆ ಎಂದರು.

ಸಭೆ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಮಾತನಾಡಿ ಕೆಂಪೇಗೌಡರು ಬೆಂದಕಾಳೂರು ಎಂಬ ಹಳ್ಳಿ ಯನ್ನು ಬೆಂಗಳೂರು ನಗರವನ್ನಾಗಿ ಮಾಡಿದ್ದರಿಂದ 516 ವರ್ಷವಾದರೂ ಕೆಂಪೇಗೌಡ ಜಯಂತಿ ಆಚರಿಸಿಕೊಂಡು ಬರುತ್ತಿದ್ದೇವೆ. ಕೆಂಪೇಗೌಡರ ದೂರ ದೃಷ್ಟಿಯನ್ನು ದೇಶದಾದ್ಯಂತ ನಮ್ಮನ್ನು ಆಳುವ ಜನಪ್ರತಿನಿಧಿಗಳು ಮೈಗೂಡಿಸಿ ಕೊಂಡು ಪ್ರತಿಯೊಂದು ಪಟ್ಟಣ, ನಗರವನ್ನು ಸುಂದರವಾಗಿಸಬೇಕು. ಯಾವುದೇ ಮಹಾನ್ ವ್ಯಕ್ತಿಗಳ ಜಯಂತಿಯನ್ನು ಸಮುದಾಯಕ್ಕೆ ಸೀಮತವಾಗಿಸದೆ ಎಲ್ಲಾ ಸಮುದಾಯದವರು ಭಾಗವಹಿಸಬೇಕು ಎಂದು ಕರೆ ನೀಡಿದರು.

ಇದಕ್ಕೂ ಮೊದಲು ವಿದ್ಯಾರ್ಥಿಗಳಿಗೆ ನಾಡಪ್ರಭು ಕೇಂಪೇಗೌಡರ ಆದರ್ಶ ಆಡಳಿತ ಮತ್ತು ಜೀವನ ಚರಿತ್ರೆ ಬಗ್ಗೆ ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ರಸಪ್ರಶ್ನೆ ನಡೆಸಿಕೊಟ್ಟರು. ಇದರಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತಂಡದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶೇ.100 ರಷ್ಟು ಫಲಿತಾಂಶ ಬರಲು ಕಾರಣರಾದ ಶಾಲೆ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗೆ ಕಸಾಪದಿಂದ ಸಾಧಕ ಪ್ರತಿಷ್ಟಾಪಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ದ್ವಾರಮಕ್ಕಿ ಸತೀಶ್ ಉದ್ಘಾಟಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಪೂರ್ಣಿಮ ಮಾತನಾಡಿದರು.ಅತಿಥಿಗಳಾಗಿ ಕಸಾಪ ಯುವ ಘಟಕದ ಅಧ್ಯಕ್ಷೆ ಸುಷ್ಮಾ ಯುಗಾಂಧರ್, ಹಿರಿಯ ಪತ್ರಕರ್ತ ಯಡಗೆರೆ ಮಂಜುನಾಥ್, ಶಿಕ್ಷಕ ರಾಮಮೋಹನ್ , ಅಭೀಜ್ಞಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡೂರಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ: ಶಾಸಕ ಕೆ.ಎಸ್. ಆನಂದ್
ನಾಡಪ್ರಭುವಿಗೆ ನಮಿಸಿದ ಮುಖ್ಯಮಂತ್ರಿ ಡಿಕೆಶಿ