ವಿಶ್ವ ಮಹಿಳಾ ದಿನಾಚರಣೆ: ‘ಮಾತೆಯ ಮಡಿಲು’ ವಿಚಾರ ವಿನಿಮಯ ಕಾರ್ಯಕ್ರಮ

KannadaprabhaNewsNetwork |  
Published : Mar 09, 2024, 01:35 AM IST
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ | Kannada Prabha

ಸಾರಾಂಶ

ಶುಕ್ರವಾರ ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಮಾತೆಯ ಮಡಿಲು’ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳಮುಖ್ಯ. ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು.

ಅವರು ಶುಕ್ರವಾರ ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಮಾಣಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ‘ಮಾತೆಯ ಮಡಿಲು’ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು.

ಯುವವಾಹಿನಿ ಮಾಣಿ ಘಟಕ ಅಧ್ಯಕ್ಷ ನಾಗೇಶ್ ಪೂಜಾರಿ ಕೊಂಕಣಪದವು ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಮಾಣಿಯ ಮಹಿಳಾ ಅಧ್ಯಕ್ಷೆ ಹರಿನಾಕ್ಷಿ ಮುರುವ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನಾ ಸುರೇಶ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಮಾಣಿಯ ಅಧ್ಯಕ್ಷ ಸುರೇಶ್ ಸೂರ್ಯ, ಯುವವಾಹಿನಿ ಮಾಣಿ ಘಟಕದ ಮಹಿಳಾ ನಿರ್ದೇಶಕಿ ಶಕೀಲಾ ಕೃಷ್ಣ ಮಿತ್ತಕೋಡಿ ಮೊದಲಾದವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್‌ನ ಡಾ.ಗಾಯತ್ರಿ ಜಿ. ಪ್ರಕಾಶ್, ನೋಟರಿ ವಕೀಲೆ ಶೋಭಾಲತಾ ಸುವರ್ಣ ವಿಚಾರ ವಿನಿಮಯ ಮಾಡಿದರು.

ಕಾರ್ಯಕ್ರಮದಲ್ಲಿ ಸಂಘದ 10 ಗ್ರಾಮಗಳ ಮಹಿಳಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪಂಚಾಯಿತಿ ಸದಸ್ಯರನ್ನು ಅಭಿನಂದಿಸಲಾಯಿತು.

ಸಂಘದ ಸದಸ್ಯೆ ಭಾರತಿ ಪ್ರಾರ್ಥಿಸಿದರು. ಯುವವಾಹಿನಿ ಮಾಣಿ ಘಟಕ ಕಾರ್ಯದರ್ಶಿ ಶಾಲಿನಿ ಸ್ವಾಗತಿಸಿದರು. ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶುಭ ಪೆರ್ನೆ ವಂದಿಸಿದರು. ಮಾಣಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಉಷಾ ದಿನಕರ್ ಹಾಗೂ ಘಟಕದ ಸದಸ್ಯ ರಾಜೇಶ್ ಬಲ್ಯ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ