ಯಲಹಂಕದಲ್ಲಿ ಯೋಗದಿನಾಚರಣೆ

KannadaprabhaNewsNetwork |  
Published : Jun 22, 2024, 01:33 AM ISTUpdated : Jun 22, 2024, 07:10 AM IST
ಚಿತ್ರ: ಯಲಹಂಕದ ಅಳ್ಳಾಳಸಂದ್ರ‌ ಕೆರೆಯ ಬಳಿ ಸುಮಾರು 2 ಸಾವಿರಕ್ಕೂ ಹೆಚ್ಚಿನ ನಾಗರೀಕರು, ಶಾಲಾಮಕ್ಕಳೊಂದಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಯೋಗ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗ ಪ್ರರ್ಶಿಸಿದರು. | Kannada Prabha

ಸಾರಾಂಶ

ವಿಶ್ವ ಯೋಗ ದಿನಾಚರಣೆಯ ದಶಮಾನೋ ತ್ಸವದ ಪ್ರಯುಕ್ತ ಯಲಹಂಕದ ಅಳ್ಳಾಳಸಂದ್ರ‌ ಕೆರೆಯ ಬಳಿ ಸುಮಾರು 2 ಸಾವಿರಕ್ಕೂ ಹೆಚ್ಚಿನ ನಾಗರೀಕರು, ಶಾಲಾಮಕ್ಕಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಯೋಗ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಮೂಹಿಕವಾಗಿ ಯೋಗಾಸನ ಪ್ರದರ್ಶಿಸಿದರು.

 ಯಲಹಂಕ :  ವಿಶ್ವ ಯೋಗ ದಿನಾಚರಣೆಯ ದಶಮಾನೋ ತ್ಸವದ ಪ್ರಯುಕ್ತ ಯಲಹಂಕದ ಅಳ್ಳಾಳಸಂದ್ರ‌ ಕೆರೆಯ ಬಳಿ ಸುಮಾರು 2 ಸಾವಿರಕ್ಕೂ ಹೆಚ್ಚಿನ ನಾಗರೀಕರು, ಶಾಲಾಮಕ್ಕಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಯೋಗ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಮೂಹಿಕವಾಗಿ ಯೋಗಾಸನ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷೆ‌ ವಾಣಿಶ್ರೀ ವಿಶ್ವನಾಥ್ ನಾಗರೀಕರೊಟ್ಟಿಗೆ ಸಹಜ ಯೋಗ ಪ್ರದರ್ಶನದ ಮೂಲಕ ಗಮನ ಸೆಳೆದರು.

ಕಾರ್ಯಕ್ರಮ ಉದ್ದೇಶಿಸಿ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ, ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ, ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮಾಜಿಕ ಆರೋಗ್ಯದ ಪರಸ್ಪರ ಸಂಬಂಧವನ್ನು ಒತ್ತಿ ಹೇಳುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪದ್ಮಶ್ರೀ, ಯೋಗ ಸಂಗಮ ಕಾರ್ಯಕ್ರಮದ ಆಯೋಜನಾ ಮಂಡಳಿಯ ಪ್ರಮುಖರಾದ ಕೆ.ವಿಜಯ ಕುಮಾರ್, ಎಚ್.ನಟರಾಜ್ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಹಿನ್ನಲೆ ಗಾಯಕ ಗೋಪಿ, ಮಾಜಿ ಬಿಬಿಎಂಪಿ ಸದಸ್ಯ ಸತೀಶ್ ಸೇರಿದಂತೆ ಇನ್ನಿತರ ಗಣ್ಯರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ