ವೈದ್ಯರ ಸಂಘಗಳಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

KannadaprabhaNewsNetwork |  
Published : Jun 23, 2026, 02:45 AM IST
22ಯೋಗ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘ ಹಾಗೂ ಮಣಿಪಾಲ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘ, ಭಾರತೀಯ ವೈದ್ಯಕೀಯ ಸಂಘ ಉಡುಪಿ ವೈದ್ಯರ ಸಂಘಗಳಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಉಡುಪಿ: ಕರ್ನಾಟಕ ರಾಜ್ಯ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘ ಹಾಗೂ ಮಣಿಪಾಲ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಸಂಯುಕ್ತವಾಗಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಐಎಂಎ ಭವನದಲ್ಲಿ ನಡೆಸಲಾಯಿತು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ರಾಜಯೋಗಿ ಅವಿನಾಶ್ ವಂಕರ್ ಆಗಮಿಸಿ ಮಾಹಿತಿ ನೀಡಿ, ಯೋಗ ಸಂಪೂರ್ಣ ಆರೋಗ್ಯಕ್ಕೆ ಸಹಕಾರಿ ಎಂದರು. ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘದ ಅಧ್ಯಕ್ಷೆ ಡಾ. ರಾಜಶ್ರೀ ಪಾಲಡಿ ಪ್ರಸ್ತಾವನೆ ಮಾತುಗಳನ್ನಾಡಿ ಯೋಗದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ರಾಜಯೋಗಿ ಅವಿನಾಶ್ ವಂಕರ್ ಅವರನ್ನು ಅಭಿನಂದಿಸಲಾಯಿತು.

ಐಎಂಎ ಉಡುಪಿ ಕರಾವಳಿ ಕಾರ್ಯದರ್ಶಿ ಡಾ. ಮಾನಸ್, ಕೋಶಾಧಿಕಾರಿ ಡಾ. ಸನತ್ ರಾವ್, ಮಣಿಪಾಲ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘದ ಕಾರ್ಯದರ್ಶಿ ಡಾ. ಇಂದಿರಾ ಶಾನುಬೋಗ್ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಯೋಗ ಪಟು ಡಾ. ಅನ್ನಪೂರ್ಣ ಹಾಗೂ ಶಿಷ್ಯೆಯರಿಂದ ಯೋಗಾಸನ ಪ್ರಾತ್ಯಕ್ಷಿಕೆ ನಡೆಯಿತು. ಐಎಂಎ ಮಹಿಳಾ ವಿಭಾಗದವರಿಂದ ಯೋಗ ನೃತ್ಯ ಉತ್ತಮವಾಗಿ ಮೂಡಿಬಂತು. ಮಣಿಪಾಲ ಹೆರಿಗೆ ಹಾಗೂ ಸ್ತ್ರೀ ರೋಗ ತಜ್ಞರ ಸಂಘದ ಅಧ್ಯಕ್ಷೆ ಡಾ. ರಾಜಲಕ್ಷ್ಮೀ ಸ್ವಾಗತಿಸಿದರು. ಕೋಶಾಧಿಕಾರಿ ಡಾ. ಅಂಜಲಿ ಮುಂಡ್ಕೂರು ಹಾಗೂ ಡಾ. ರಂಜಿತಾ ನಾಯಕ್ ನಿರೂಪಿಸಿದರು. ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್ ಕಾಮತ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಎಂವಿಟಿಐ ವಿದ್ಯಾರ್ಥಿಗಳ ಸಂಶೋಧನೆ: ‘ನಡಿಗೆಯಿಂದ ವಿದ್ಯುತ್ ಉತ್ಪಾದನೆ’
ಸಂಶೋಧನಾ ಕ್ಷೇತ್ರ ಬಡವಾಗುತ್ತಿದೆ: ಪ್ರೊ. ವಿವೇಕ ರೈ ಕಳವಳ‍