ವಿವಿಧೆಡೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

KannadaprabhaNewsNetwork |  
Published : Jun 22, 2026, 01:45 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ೧೨ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನ ವಿಶೇಷವಾಗಿ ಆಚರಿಸಲಾಯಿತು.  | Kannada Prabha

ಸಾರಾಂಶ

ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು.

- ವಿಇಎಸ್, ಅನನ್ಯ, ಕನಕ ವಿದ್ಯಾಸಂಸ್ಥೆ ಸೇರಿದಂತೆ ಹಲವಡೆ ಯೋಗಾಭ್ಯಾಸ । ಯೋಗ ಕೇಂದ್ರಗಳ ಶಿಕ್ಷಕರಿಂದ ಯೋಗ ಕುರಿತು ಅರಿವು.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದ ವಿವಿಧೆಡೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಸಂಘ-ಸಂಸ್ಥೆಗಳಿಂದ ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಯೋಗ ಕೇಂದ್ರಗಳ ಶಿಕ್ಷಕರು ಹಾಜರಾಗಿ ಯೋಗ ಕಲಿಕೆ ಮಹತ್ವ, ಪರಂಪರೆ ಹಾಗೂ ವಿವಿಧ ಆಸನಗಳ ಕುರಿತು ಮಾಹಿತಿ ನೀಡಿದರು.

ಶ್ರೀ ಕನಕ ವಿದ್ಯಾಸಂಸ್ಥೆ:

ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು.

ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಸಿ.ಡಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಯೋಗ ಕಲಿಕೆ ಮಹತ್ವ ವಿವರಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಜಿ.ಕೆ ಹರೀಶ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ವಿಶ್ವೇಶ್ವರಾಯ ವಿದ್ಯಾಸಂಸ್ಥೆ:

ರಾಜ್ಯ ಸರ್ಕಾರಿ ನೌಕರ ಸಂಘ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ೧೨ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನ ವಿಶೇಷವಾಗಿ ಆಚರಿಸಲಾಯಿತು.

ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಬಾಲಕಿಯರ ಸರ್ಕಾರಿ ಸಂಚಿಯ ಹೊನ್ನಮ್ಮ ಪ್ರೌಢಶಾಲೆ ಉಪ ಪ್ರಾಂಶುಪಾಲ ಮನೋಹರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿವಲಿಂಗೇಗೌಡ, ದೈಹಿಕ ಶಿಕ್ಷಣ ಶಿಕ್ಷಕಿ ಪಿ. ರೇವತಿ ನಿರೂಪಿಸಿ, ಎಂ.ಎಸ್ ಮಂಜುನಾಥ್, ಟಿ.ಎಸ್ ವತ್ಸಲ ದೇವಿ, ದೈಹಿಕ ಶಿಕ್ಷಣ ಶಿಕ್ಷಕ ಆರ್. ರವಿ ಇದ್ದರು.

ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ:

ನಗರದ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು. ಅನನ್ಯ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ. ನಾಗರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನವನಿಗೆ ಎಲ್ಲದಕ್ಕಿಂತ ಆರೋಗ್ಯ ಮುಖ್ಯ, ಆರೋಗ್ಯವೇ ಭಾಗ್ಯ. ಯೋಗದಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.

ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಯೋಗಾಸನವನ್ನು ಪ್ರದರ್ಶಿಸಿದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್, ಆಡಳಿತಾಧಿಕಾರಿ ಎಸ್. ವೇಣುಗೋಪಾಲ್, ಮುಖ್ಯೋಪಾಧ್ಯಾಯಿನಿಯರಾದ ಆರ್. ಸುನಿತಾ ಹಾಗೂ ಎ. ತನುಜ, ಶಿಕ್ಷಕರು ಇದ್ದರು.ಡಿ೨೧-ಬಿಡಿವಿಟಿ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತ, ಶ್ರೀ ಕನಕ ವಿದ್ಯಾಸಂಸ್ಥೆಯಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನ ಆವರಣದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸುವ ಮೂಲಕ ಯೋಗ ದಿನ ಆಚರಿಸಲಾಯಿತು. ಡಿ೨೧-ಬಿಡಿವಿಟಿ(ಎ)

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ೧೨ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನ ವಿಶೇಷವಾಗಿ ಆಚರಿಸಲಾಯಿತು. ಡಿ೨೧-ಬಿಡಿವಿಟಿ(ಬಿ)

ಭದ್ರಾವತಿ ನಗರದ ಅಪ್ಪರ್ ಹುತ್ತಾ ಅನನ್ಯ ವಿದ್ಯಾಸಂಸ್ಥೆ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆ ಅಧ್ಯಕ್ಷ ಡಾ. ಕೆ. ನಾಗರಾಜ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಚ್ಚರಿಕೆ ಅಗತ್ಯ
ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ ಎಂದ ಸಂಸದ