ಮೈದಾನದ ಸ್ವಚ್ಛತೆ ಕೈಗೊಂಡು ಯೋಗ ದಿನಾಚರಣೆಗೆ ಸಜ್ಜುಗೊಳಿಸಬೇಕು. ಯೋಗ ಅಭ್ಯಾಸದಲ್ಲಿ ಪಾಲ್ಗೊಳ್ಳುವವರಿಗೆ ಕುಡಿಯುವ ನೀರು, ಉಪಾಹಾರದ ವ್ಯವಸ್ಥೆ ಕಲ್ಪಿಸಬೇಕು. ಆ್ಯಂಬ್ಯುಲೆನ್ಸ್, ವೈದ್ಯರು, ಆರೋಗ್ಯ ಸಿಬ್ಬಂದಿ ನಿಯೋಜನೆಯೊಂದಿಗೆ ತುರ್ತು ಚಿಕಿತ್ಸೆ ವ್ಯವಸ್ಥೆ ಇರಬೇಕು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನ ಘೋಷ್ಯವಾಕ್ಯವು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬುದಾಗಿದೆ. ಎಲ್ಲರೂ ಸಹಕರಿಸುವ ಮೂಲಕ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ ಸೇರಿ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇದೇ ಜೂ. 21ರಂದು ನಗರದಲ್ಲಿ ಹಮ್ಮಿಕೊಂಡಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಸಂಬಂಧ ನಡೆದ ಪೂರ್ವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜೂ. 21ರಂದು ಬೆಳಗ್ಗೆ 6.30 ಗಂಟೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಯೋಗ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪೂರ್ವ ಭಾವಿಯಾಗಿ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.
ಶಾಲಾ- ಕಾಲೇಜು, ನರ್ಸಿಂಗ್ ಕಾಲೇಜು, ಹಾಸ್ಟೆಲ್ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ ಮತ್ತು ಗೈಡ್ಸ್, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೋಂದಾಯಿತವಾಗಿರುವ ಯುವ ಸಂಸ್ಥೆಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ವಿಶೇಷವಾಗಿ ಪತಂಜಲಿ ಯೋಗ ಸಂಸ್ಥೆ ಸೇರಿ ಇನ್ನಿತರ ಯೋಗ ಆಸಕ್ತ ಸಂಸ್ಥೆಗಳು ಸಹ ಭಾಗವಹಿಸಿ ಸಹಕರಿಸಬೇಕು. ಜಿಲ್ಲೆಯ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮ ಅರ್ಥಪೂರ್ಣಗೊಳಿಸಬೇಕು ಎಂದು ಹೇಳಿದರು.
ಮೈದಾನದ ಸ್ವಚ್ಛತೆ ಕೈಗೊಂಡು ಯೋಗ ದಿನಾಚರಣೆಗೆ ಸಜ್ಜುಗೊಳಿಸಬೇಕು. ಯೋಗ ಅಭ್ಯಾಸದಲ್ಲಿ ಪಾಲ್ಗೊಳ್ಳುವವರಿಗೆ ಕುಡಿಯುವ ನೀರು, ಉಪಾಹಾರದ ವ್ಯವಸ್ಥೆ ಕಲ್ಪಿಸಬೇಕು. ಆ್ಯಂಬ್ಯುಲೆನ್ಸ್, ವೈದ್ಯರು, ಆರೋಗ್ಯ ಸಿಬ್ಬಂದಿ ನಿಯೋಜನೆಯೊಂದಿಗೆ ತುರ್ತು ಚಿಕಿತ್ಸೆ ವ್ಯವಸ್ಥೆ ಇರಬೇಕು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನ ಘೋಷ್ಯವಾಕ್ಯವು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬುದಾಗಿದೆ. ಎಲ್ಲರೂ ಸಹಕರಿಸುವ ಮೂಲಕ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಇದೇ ವೇಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಜಿ. ಹೊನ್ನರಾಜು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಗೌರಮ್ಮ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ. ನಾಗರಾಜು, ಸಿಮ್ಸ್ ಪ್ರಾಂಶುಪಾಲರಾದ ಡಾ. ಆರ್.ಟಿ ಅಜಯ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಚಿನ್ನಭೋವಿ, ಪತಂಜಲಿ ಯೋಗ ಶಿಕ್ಷಣ ಸೇವಾ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕರಾದ ಬಿ.ಪಿ. ಪ್ರಕಾಶ, ಚಾಮರಾಜನಗರ ನಗರಸಭೆ ಪೌರಾಯುಕ್ತರಾದ ಪರಶುರಾಮ ಎಂ ಛಲವಾದಿ, ಸಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಎನ್. ನಮ್ರತಾ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.