ಕೆಲಸದಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Aug 28, 2024, 12:54 AM IST
1 | Kannada Prabha

ಸಾರಾಂಶ

ದೇಶದಲ್ಲಿ ಡಿಜಿಟಲ್ ಉದ್ಯೋಗಕ್ಕೆ ಪೂರಕವಾದ ಕೌಶಲ್ಯತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮೈಸೂರುಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಮಾಹಿತಿ ಮತ್ತು ತಂತ್ರಜ್ಞಾನದ ಜತೆಗೆ ಕೃತಕ ಬುದ್ದಿ ಮತ್ತೆಯನ್ನು ತಮ್ಮ ಕೆಲಸದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಹೇಳಿದರು.ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮಂಗಳವಾರ ಬೆಳಗ್ಗೆ ಗ್ರಾಸ್ ರೂಟ್ಸ್ ರಿಸರ್ಚ್ ಅಂಡ್ ಅಡ್ವೊಕೆಸಿ ಮೂವ್ಮೆಂಟ್, ಮೈಸೂರು ವಿವಿಯ ಸಮಾಜ ಕಾರ್ಯ ವಿಭಾಗ, ಜಿಎಸ್ಎಸ್ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಯುವದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇಶದಲ್ಲಿ ಡಿಜಿಟಲ್ ಉದ್ಯೋಗಕ್ಕೆ ಪೂರಕವಾದ ಕೌಶಲ್ಯತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಏಕೆಂದರೆ ಸಾಂಪ್ರಾದಾಯಿಕ ಉದ್ಯೋಗಾವಕಾಶಕ್ಕಿಂತ ಡಿಜಿಟಲ್ಉದ್ಯೋಗಾವಕಾಶ ಹೆಚ್ಚುತ್ತಿದೆ. ಭಾರತದಲ್ಲಿ ಇತ್ತೀಚೆಗೆ ಶೇ. 12ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗ ಪಡೆಯುತ್ತಿದ್ದಾರೆ. ಮೊದಲು 17 ಸುಸ್ಥಿರ ಅಭಿವೃದ್ಧಿ ಗುರಿ ಹೊಂದಲಾಗಿದ್ದು, ಆ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದು ಅವರು ಹೇಳಿದರು.ದೇಶದಲ್ಲಿ 3 ಕೋಟಿ ಜನರು ಉನ್ನತ ಶಿಕ್ಷಣ ಪಡೆಯುತ್ತಿದ್ದು, ಉನ್ನತ ಶಿಕ್ಷಣದ ಪಾತ್ರ ದೇಶದ ಅಭಿವೃದ್ಧಿಯಲ್ಲಿ ಪ್ರಮುಖವಾದದ್ದು. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಮಾಹಿತಿ ಮತ್ತು ತಂತ್ರಜ್ಞಾನದೊಂದಿಗೆ ಕೃತಕ ಬುದ್ದಿ ಮತ್ತೆಯನ್ನು ತಮ್ಮ ಕೆಲಸಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ,‘ ಸರ್ಕಾರದ ನೀತಿ ನಿಯಮಗಳ ಜಾರಿಯಲ್ಲಿ ಯುವಜನರ ಪಾತ್ರ ಮುಖ್ಯ. ಮೈಸೂರಿನಲ್ಲಿ ಹಲವು ಸಮಸ್ಯೆಗಳ ಬಗ್ಗೆ ಸಮೀಕ್ಷೆ ನಡೆಸಿರುವುದು ಉತ್ತಮ ಬೆಳವಣಿಗೆ. ಇದರ ಪರಿಹಾರಕ್ಕೆ ಜನಪ್ರತಿನಿಧಿಗಳ ಜೊತೆ ಜನರ ಸಹಭಾಗಿತ್ವ ಅವಶ್ಯವಾಗಿದೆ ಎಂದರು.ಭಾರತದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖ. ಹಿರಿಯರ ಮಾರ್ಗದರ್ಶನದಲ್ಲಿ ಅವರು ಮುಂದುವರಿಯಬೇಕು. ಉತ್ತಮ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಪ್ರಮುಖವಾದುದು ಎಂದು ಅವರು ಹೇಳಿದರು.ಗ್ರ್ಯಾಮ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಬಸವರಾಜು ಆರ್. ಶ್ರೇಷ್ಠ ಮಾತನಾಡಿ,‘‘ ಯುವಜನರಿಗೆ ಮಾದರಿ ರೂಪಿಸಿಕೊಟ್ಟು ಅವರನ್ನು ಸ್ವಾವಲಂಬಿ ಮಾಡುವುದು ಯೂತ್ ಕಾರ್ಯಕ್ರಮದ ಉದ್ದೇಶವಾಗಿದೆ. ಮೈಸೂರಿನ ಕೆರೆಗಳು, ಚಾಮುಂಡಿ ಬೆಟ್ಟ, ವಾರ್ಡ್ ಅಭಿವೃದ್ಧಿ ಮೊದಲಾದವುಗಳ ಕುರಿತು ಈ ಯುವಜನರು ಸಂಶೋಧನೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.ಎಸ್ಎಸ್ಎಸ್ ಇಂಡಿಯಾದ ರೆಸಿಡೆಂಟ್ ರೆಪ್ರೆಸೆಂಟೇಟಿವ್ ಜುಡಿತ್ ವೈನ್ಬರ್ಗರ್ ಸಿಂಗ್ ಮಾತನಾಡಿ, ದೇಶದ ಜನಸಂಖ್ಯೆಯಲ್ಲಿ ಶೇ. 50 ರಷ್ಟು ಯುವ ಜನರಿದ್ದು, ಸುಸ್ಥಿರ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಬಲ್ಲರು. ಈ ಹಿನ್ನಲೆಯಲ್ಲಿ ಆಡಳಿತದಲ್ಲಿ ಯುವಜನರ ಸಹಭಾಗಿತ್ವ ಅತ್ಯಗತ್ಯ ಎಂದರು.ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕಿ ಡಾ.ಎಚ್.ಪಿ. ಜ್ಯೋತಿ ಇದ್ದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್