ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿಯಲ್ಲಿ ಇಂಟರ್ಶಿಪ್ ತರಬೇತಿ: ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

KannadaprabhaNewsNetwork |  
Published : Feb 28, 2026, 03:00 AM IST
ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿಯಲ್ಲಿ  ಇಂಟರ್ಶಿಪ್ ತರಬೇತಿಯ ಎರಡನೇ ಹಂತದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ  | Kannada Prabha

ಸಾರಾಂಶ

: ಇತ್ತೀಚಿನ ದಿನಗಳಲ್ಲಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರಿ ಕ್ಷೇತ್ರಗಳು ಬಲಿಷ್ಠವಾಗಿ ಬೆಳೆಯುತ್ತಿವೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ ಬರ್ನಾಡ್ ಹೇಳಿದರು.

ಮೂಲ್ಕಿ: ಇತ್ತೀಚಿನ ದಿನಗಳಲ್ಲಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರಿ ಕ್ಷೇತ್ರಗಳು ಬಲಿಷ್ಠವಾಗಿ ಬೆಳೆಯುತ್ತಿವೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ ಬರ್ನಾಡ್ ಹೇಳಿದರು.

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಸೊಸೈಟಿ ಆಶ್ರಯದಲ್ಲಿ ಸೊಸೈಟಿ ಸಭಾ ಭವನದಲ್ಲಿ ನಡೆದ ಇಂಟರ್ಶಿಪ್ ತರಬೇತಿಯ ಎರಡನೇ ಹಂತದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಸಹಕಾರಿ ರಂಗವು ಎಲ್ಲ ಆರ್ಥಿಕ ವ್ಯವಸ್ಥೆಗೆ ನಾಯಕತ್ವ ವಹಿಸಲಿದೆಯೆಂದು ಬರ್ನಾಡ್ ಹೇಳಿದರು.

ಯುವಜನತೆ ರಾಷ್ಟ್ರೀಕೃತ ಬ್ಯಾಂಕ್‌ ಗಳ ಮೊರೆ ಹೋಗದೆ ಸಹಕಾರಿ ಕ್ಷೇತ್ರದಲ್ಲಿ ಕೂಡ ತಮ್ಮ ಸೇವೆ ಮಾಡಲು ಮುಂದಾಗಬೇಕೆಂದು ಹೇಳಿದರು. ಈ ಸಂದರ್ಭ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಸುದರ್ಶನ್ ಪಂಜ ಸ್ವಾಗತಿಸಿದರು. ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು, ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಯಲ್ಲಿ ಕುಡಿವ ನೀರಿನ ಬಗ್ಗೆ ಎಚ್ಚರವಿರಲಿ
ಶಾಲಾ ಕಾಲೇಜುಗಳು ಮೊದಲು ನಶಾಮುಕ್ತವಾಗಲಿ:ಡಾ.ಭಗವಾನ್