ಬಿಜೆಪಿಯಿಂದ ಇಡಿ, ಸಿಬಿಐ ಮೂಲಕ ವಿರೋಧ ಪಕ್ಷದವರನ್ನು ಬೆದರಿಸುವ ಕೆಲಸ

KannadaprabhaNewsNetwork |  
Published : Apr 20, 2024, 01:02 AM IST
19ಶಿರಾ1: ಶಿರಾ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಶಾಸಕ ಟಿ.ಬಿ.ಜಯಚಂದ್ರ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನುಡಿದಂತೆ ನಡೆಯಲಿದ್ದೆವೆ. ಮತದಾರರು ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು

ಕನ್ನಡಪ್ರಭ ವಾರ್ತೆ ಶಿರಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ನುಡಿದಂತೆ ನಡೆಯಲಿದ್ದೆವೆ. ಮತದಾರರು ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಸರ್ಕಾರ ಇಡಿ, ಸಿಬಿಐ ಮೂಲಕ ವಿರೋಧ ಪಕ್ಷದವರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ. ಅಲ್ಲದೆ ಅಧಿಕಾರವನ್ನು ಸಂಪೂರ್ಣವಾಗಿ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ. 5 ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನತೆಯನ್ನು ಕಾಂಗ್ರೆಸ್ ಸರ್ಕಾರ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.

ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಬಿಜೆಪಿ ಸಂವಿಧಾನಕ್ಕೆ ಗೌರವ ನೀಡುತ್ತಿಲ್ಲ. ಎಲೆಕ್ಟ್ರೋಲ್ ಬಾಂಡ್ ಹಾಗೂ ಪಿಎಂ ಕೇರ್ ಮೂಲಕ ಹಣ ಸಂಗ್ರಹಿಸಿ ಚುನಾವಣೆಗಳಲ್ಲಿ ಖರ್ಚು ಮಾಡುತ್ತಿದೆ. ಕಾರ್ಪೋರೇಟ್ ವಲಯಕ್ಕೆ ಹೆಚ್ಚು ಉತ್ತೇಜನ ನೀಡುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಬ್ರಿಟಿಷ್‌ರು ನಮ್ಮ ದೇಶಕ್ಕೆ ಬಂದು ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಲೂಟಿ ಮಾಡಿದ ರೀತಿ ಬಿಜೆಪಿಯವರು ಲೂಟಿ ಮಾಡುತ್ತಿದ್ದಾರೆ. ಯಾವುದೇ ತಂತ್ರಜ್ಞಾನ ಮುಂದುವರೆದರೂ ಸಹ ಅದರ ದುರ್ಬಳಕೆ ಮಾಡಬಹುದು. ಸದ್ಯದ ಚುನಾವಣೆಯಲ್ಲಿಯೂ ಇವಿಎಂ ಮಷಿನ್‌ ತಂತ್ರಜ್ಞಾನದಲ್ಲೂ ದುರುಪಯೋಗ ಮಾಡಲು ಅವಕಾಶ ಇದೆ ಎಂದರು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಉಪಾಧ್ಯಕ್ಷ ರೂಪೇಶ್ ಕೃಷ್ಣಯ್ಯ, ಗ್ರಾಮಾಂತರ ಅಧ್ಯಕ್ಷ ನಟರಾಜ್ ಬರಗೂರು, ನಗರಸಭೆ ಅಧ್ಯಕ್ಷೆ ಪೂಜಾ ಪೆದ್ದರಾಜು, ಮಾಜಿ ಅಧ್ಯಕ್ಷ ಅಮಾನುಲ್ಲಾ ಖಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶಂಕರ್, ಕೆಪಿಸಿಸಿ ಸದಸ್ಯ ಟಿ.ಲೋಕೇಶ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್, ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಕೊಟ್ಟ ಶಂಕರ್, ನಗರಸಭೆ ಸದಸ್ಯರಾದ ಕೃಷ್ಣಪ್ಪ, ಅಜಯ್ಕುಮಾರ್, ಬುರ್ಹಾಷನ್ ಮೊಹಮದ್, ಮಹೇಶ್, ರಾಧಾಕೃಷ್ಣ, ಮಂಜುನಾಥ್, ನೂರುದ್ದೀನ್, ನಗರ ಆಶ್ರಯ ಸಮಿತಿ ಸದಸ್ಯ ವಾಜರಹಳ್ಳಿ ರಮೇಶ್, ಬಗರ್ ಹುಕುಂ ಸಮಿತಿ ಸದಸ್ಯ ಮದ್ದಕ್ಕನಹಳ್ಳಿ ತಿಪ್ಪೇಸ್ವಾಮಿ, ಶಿರಾ ಯೋಜನಾ ಪ್ರಾಧಿಕಾರದ ಸದಸ್ಯ ಲಕ್ಕನಹಳ್ಳಿ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಮಹದೇವಮ್ಮ ಇತರರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ