ಯುವ ಸಂಸತ್ತಿನಿಂದ ವಿದ್ಯಾರ್ಥಿಗಳಿಗೆ ಸಂಸತ್ತಿನ ಪರಿಚಯ: ಯಶ್ಪಾಲ್ ಸುವರ್ಣ

KannadaprabhaNewsNetwork |  
Published : Oct 22, 2026, 02:30 AM IST
21ಯುವ | Kannada Prabha

ಸಾರಾಂಶ

ಯುವಕರಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶದ ಸಂವಿಧಾನ ಹಾಗೂ ಸಂಸತ್ತಿನ ಕಾರ್ಯಕಲಾಪಗಳ ಬಗ್ಗೆ ಪರಿಚಯಿಸಲು ಯುವ ಸಂಸತ್ತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂವಿಧಾನ ಹಾಗೂ ಸಂಸತ್ತಿನ ಕಾರ್ಯವಿಧಾನಗಳ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಯುವ ಸಂಸತ್ನಂತಹ ಕಾರ್ಯಕ್ರಮಗಳ ಆಯೋಜನೆ ಅರ್ಥಪೂರ್ಣ ಎಂದು ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಉಡುಪಿ: ಯುವಕರಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶದ ಸಂವಿಧಾನ ಹಾಗೂ ಸಂಸತ್ತಿನ ಕಾರ್ಯಕಲಾಪಗಳ ಬಗ್ಗೆ ಪರಿಚಯಿಸಲು ಯುವ ಸಂಸತ್ತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂವಿಧಾನ ಹಾಗೂ ಸಂಸತ್ತಿನ ಕಾರ್ಯವಿಧಾನಗಳ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವ ಯುವ ಸಂಸತ್ನಂತಹ ಕಾರ್ಯಕ್ರಮಗಳ ಆಯೋಜನೆ ಅರ್ಥಪೂರ್ಣ ಎಂದು ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟರು. ಅವರು ಇಲ್ಲಿನ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ನಡೆದ ಯುವ ಸಂಸತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

2047ರ ವೇಳೆಗೆ ದೇಶವು ಸಂಪೂರ್ಣ ಅಭಿವೃದ್ದಿ ಹೊಂದಿದ ವಿಕಸಿತ ಭಾರತವಾಗಬೇಕು ಎನ್ನುವುದು ನಮ್ಮೆಲ್ಲರ ಲಕ್ಷ್ಯ. ಈ ಲಕ್ಷ್ಯಪೂರ್ತಿಗಾಗಿ ಯುವಕರು ಸನ್ನದ್ದರಾಗಬೇಕು. ಭಾರತವು ಯುವ ದೇಶವಾಗಿದ್ದು, ಯುವಕರು ಸಂವಿಧಾನ ಹಾಗೂ ಸಂಸತ್ತಿನ ಕಾರ್ಯಕಲಾಪಗಳ ಬಗ್ಗೆ ಸರಿಯಾದ ಜ್ಞಾನ ಹೊಂದಿದ್ದಾಗ ದೇಶವನ್ನು ಅಭಿವೃದ್ದಿ ಪಥದಲ್ಲಿ ಮುನ್ನಡೆಸಬಹುದು ಎಂದರು.

ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಇಂದಿನ ಸಮಾಜಕ್ಕೆ ಬಹು ಅಗತ್ಯವಾಗಿರುವ ಕಾರ್ಯಕ್ರಮ ಇದಾಗಿದ್ದು ವಿದ್ಯಾರ್ಥಿ ಜೀವನದಲ್ಲೇ ಕೇಂದ್ರ ಸಂಸತ್ತಿನ ಹಾಗೂ ರಾಜ್ಯದ ಎರಡೂ ಸದನಗಳ ಕಾರ್ಯಕಲಾಪಗಳ ಪರಿಚಯವಾಗಲಿದೆ. ಎಂದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಕೆ., ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ತಾಪಂ ಕಾರ್ಯನಿರ್ವಾಹಣಾಧಿಕಾರಿ ವಿಜಯಾ, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್, ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ನಾರಾಯಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ತೀರ್ಪುಗಾರರಾಗಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಅದಿತಿ ಭಟ್, ನಿವೃತ್ತ ಉಪನ್ಯಾಸಕ ಸುರೇಂದ್ರನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಸ್ವಾಗತಿಸಿ, ಸಿಬ್ಬಂದಿ ಶ್ರೀದೇವಿ ನಿರೂಪಿಸಿ, ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಹನ ನಿಲ್ದಾಣ ಮೇಲ್ಛಾವಣಿ ಶೀಘ್ರ ಲೋಕಾರ್ಪಣೆ: ಮಂತರ್ ಗೌಡ
ಸೋಮವಾರಪೇಟೆ: ದಸರಾ ಜನೋತ್ಸವ ಸಂಭ್ರಮ