ಅಕ್ರಮ ನೇಮಕಾತಿ ತನಿಖೆ ನಡೆಸಿ: ಕಾಂತಕುಮಾರ್‌

KannadaprabhaNewsNetwork |  
Published : Nov 04, 2026, 01:15 AM IST
ಕಾಂತಕುಮಾರ | Kannada Prabha

ಸಾರಾಂಶ

ಕೆಇಎ ನಡೆಸಿದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಪಾರದರ್ಶಕ ತನಿಖೆಯಾಗಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಪ್ರಭಾವಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು.

ಧಾರವಾಡ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಹಲವು ಸ್ಪರ್ಧಾತ್ಮಕ ನೇಮಕಾತಿ ಪರೀಕ್ಷೆಗಳಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ ಆಗ್ರಹಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಭ್ರಷ್ಟಾಚಾರದ ವಿರುದ್ಧ ಸರ್ಕಾರದ ಮೌನ ಮತ್ತು ನಿರ್ಲಕ್ಷ್ಯ ಧೋರಣೆ ಖಂಡಿಸಿದರು. ಅಕ್ರಮದಲ್ಲಿ ಪಾಲ್ಗೊಂಡ ತಪ್ಪಿತಸ್ಥರನ್ನು ಜೈಲಿಗಟ್ಟಿ, ಪ್ರಾಮಾಣಿಕ ಅಭ್ಯರ್ಥಿಗಳ ಭವಿಷ್ಯ ರಕ್ಷಿಸಬೇಕು ಎಂದು ಒತ್ತಾಯ ಮಾಡಿದರು.

ಪರೀಕ್ಷೆ ಅಕ್ರಮದ ತನಿಖೆ: ಕೆಇಎ ನಡೆಸಿದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಪಾರದರ್ಶಕ ತನಿಖೆಯಾಗಬೇಕು. ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಪ್ರಭಾವಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಆಗ್ರಹಿಸಿದರು.

ಕೆಪಿಎಸ್ಸಿ ಸುಧಾರಣೆ:

ಕೆಪಿಎಸ್‌ಸಿ ವಿವಿಧ ಪರೀಕ್ಷೆಗಳಲ್ಲಿ ಎಸಗಿರುವ ಲೋಪದೋಷಗಳು, ಅಕ್ರಮಗಳ ಸತ್ಯಾಂಶ ಜನರ ಎದುರಿಗೆ ಇಡಬೇಕು. ವರ್ಷಗಟ್ಟಲೆ ಶ್ರಮಿಸಿ ಓದುವ ಉದ್ಯೋಗಾಕಾಂಕ್ಷಿಗಳಲ್ಲಿ ಮರಳಿ ನಂಬಿಕೆ ಮೂಡಿಸಲು ಪರೀಕ್ಷಾ ವ್ಯವಸ್ಥೆ ಭ್ರಷ್ಟಾಚಾರ ಮುಕ್ತಗೊಳಿಸುಬಂತೆ ಹೇಳಿದರು.

ಹೋರಾಟದ ಎಚ್ಚರಿಕೆ:

ಸರ್ಕಾರ ತಕ್ಷಣ ಸೂಕ್ತ ಕ್ರಮಕೈಗೊಳ್ಳದಿದ್ದರೆ, ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಕೊಡಿಸಲು ರಾಜ್ಯಾದ್ಯಂತ ಬೃಹತ್ ಮಟ್ಟದ ಪ್ರಜಾಸತ್ತಾತ್ಮಕ ಹೋರಾಟ ರೂಪಿಸಲಾಗುವುದು. ಪದವೀಧರರು, ಶಿಕ್ಷಕರು ಹಾಗೂ ಯುವಜನರ ಹಕ್ಕುಗಳ ರಕ್ಷಣೆಗೆ ಸಂಘಟನೆ ನಿರಂತರವಾಗಿ ಶ್ರಮಿಸಲಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಾಜಶೇಖರ ಅಸುಂಡಿ, ಬಸವರಾಜ ಬೋಸ್ಲೆ, ಆರ್. ರಂಜನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌