ಕನ್ನಡಪ್ರಭ ವಾರ್ತೆ ಬೀದರ್
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಪ್ರಧಾನಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ, ನೀಟ್ ಯುಜಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಎನ್‌ಡಿಎ ಎನನ್ನು ಮರೆಮಾಚಲು ಹೊರಟಿದೆ? ನೀಟ್ ಯುಜಿ 2024ರ ಪರೀಕ್ಷಾ ಪ್ರಕ್ರಿಯೆ ಮತ್ತು ಫಲಿತಾಂಶಗಳ ಕುರಿತು ಉದ್ಭವಿಸುವ ಪ್ರಶ್ನೆ ಪರಿಹರಿಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿಬಿಐ ತನಿಖೆಗೆ ಒತ್ತಾಯಿಸುತ್ತದೆ.
ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ಮಾತನಾಡಿ, ವಿವಿಧ ಕಡೆಯಿಂದ ಅಕ್ರಮಗಳ ವರದಿಯಾಗಿವೆ. ಪರೀಕ್ಷೆ ದಿನವೇ ದೇಶದ ಕೆಲವು ಭಾಗಗಳಲ್ಲಿ, ವಿವಿಧ ಸ್ಥಳಗಳಲ್ಲಿ ಪರಿಹಾರಕಾರರು ಸಿಕ್ಕಿಬಿದ್ದಿದ್ದಾರೆ ಮತ್ತು ಕೆಲವು ಸ್ಥಳಗಳಲ್ಲಿ ಪ್ರಶ್ನೆ ಪತ್ರಿಕೆಗಳ ವಿತರಣೆಯಲ್ಲೂ ಅಕ್ರಮ ನಡೆದಿವೆ. ಎಬಿವಿಪಿ ನೀಟ್ ಪರೀಕ್ಷೆ ಅಭ್ಯರ್ಥಿಗಳ ಸಮರ್ಥನಿಯ ಬೇಡಿಕೆಗಳೊಂದಿಗೆ ಎಬಿವಿಪಿ ನಿಂತಿದೆ.ವೈದ್ಯಕೀಯ ಸಂಸ್ಥೆಗಳ ಪ್ರವೇಶಕ್ಕೆ ನಡೆಸುವ ಈ ಪರೀಕ್ಷೆ ಪಾರದರ್ಶಕತೆ ಬಗ್ಗೆ, ವಿದ್ಯಾರ್ಥಿಗಳಲ್ಲಿ ತೀವ್ರ ಅಪನಂಬಿಕೆ ಇದೆ. ನೀಟ್ ಪರೀಕ್ಷೆ ದಿನದಂದು ದೇಶದ ವಿವಿಧ ಭಾಗಗಳಿಂದ ವ್ಯವಸ್ಥೆಗಳಲ್ಲಿ ಆಕ್ರಮಗಳು ವರದಿಯಾಗಿವೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.
ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಎದ್ದು ಕಾಣುವ ಲೋಪದೋಷಗಳಿಗೆ ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ನಾವು ಬಲವಾಗಿ ನಂಬುತ್ತೇವೆ. ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಪರೀಕ್ಷೆ ನಡೆಸುವ ಬಗ್ಗೆ, ವಿದ್ಯಾರ್ಥಿಗಳಲ್ಲಿ ವಿಶ್ವಾಸದ ವಾತಾವರಣ ಮೂಡುವಂತೆ ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸುತ್ತದೆ.