ನೀಟ್ ಅಕ್ರಮ ಉನ್ನತಮಟ್ಟದ ತನಿಖೆ ನಡೆಸಿ: ಶಹಬಾಜ್‌ ಖಾನ್‌

KannadaprabhaNewsNetwork |  
Published : Jul 02, 2024, 01:33 AM IST
1ಕೆಡಿವಿಜಿ5-ದಾವಣಗೆರೆಯಲ್ಲಿ ಸೋಮವಾರ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಉನ್ನತಮಟ್ಟದ ಸೂಕ್ತ ತನಿಖೆ ಕೈಗೊಂಡು, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕೋಟ್ಯಂತರ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸುವಂತೆ ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

- ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಲು ಕೇಂದ್ರದ ಮೇಲೆ ರಾಜ್ಯದ ಒತ್ತಡ ತರಲು ಆಗ್ರಹ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ನೀಟ್ ಪರೀಕ್ಷೆ ಅಕ್ರಮದ ಬಗ್ಗೆ ಉನ್ನತಮಟ್ಟದ ಸೂಕ್ತ ತನಿಖೆ ಕೈಗೊಂಡು, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕೋಟ್ಯಂತರ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸುವಂತೆ ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷಾ ಅಕ್ರಮ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವಂತೆ ಕೇಂದ್ರದ ರಾಜ್ಯ ಸರ್ಕಾರವು ಒತ್ತಡ ಹೇರುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 67 ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 6 ವಿದ್ಯಾರ್ಥಿಗಳು ಟಾಪರ್ ಆಗಿದ್ದು, ನೀಟ್ ಪರೀಕ್ಷೆ ಅಕ್ರಮ ನಡೆದಿರುವುದಕ್ಕೆ ಪುಷ್ಟಿ ನೀಡುತ್ತಿದೆ. ಪ್ರಶ್ನೆ ಪತ್ರಿಕೆ ಲೀಗ್ ಆಗಿರುವ ಬಗ್ಗೆ ವಿದ್ಯಾರ್ಥಿ, ಪಾಲಕ ವಲಯದಿಂದಲೂ ಆರೋಪ ಕೇಳಿ ಬರುತ್ತಿದೆ ಎಂದರು.

ನೀಟ್ ಪರೀಕ್ಷಾ ಅಕ್ರಮ, ಅನ್ಯಾಯ, ಮೋಸದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸುವ ಕೆಲಸ ಆಗಬೇಕು. ರಾಜ್ಯ ಸರ್ಕಾರದ ಕ್ರಮವನ್ನು ನೋಡಿಕೊಂಡು, ಮುಂದಿನ ದಿನಗಳಲ್ಲಿ ತಮ್ಮ ಪಕ್ಷವು ಸೂಕ್ತ ತೀರ್ಮಾನ ಕೈಗೊಂಡು, ಬೀದಿಗಿಳಿದು ಹೋರಾಟ ನಡೆಸಲಿದೆ. ಅಗತ್ಯ ಬಿದ್ದರೆ ಕಾನೂನು ಹೋರಾಟವನ್ನೂ ರೂಪಿಸಲಿದೆ ಎಂದು ಶಹಬಾಜ್ ಖಾನ್ ಎಚ್ಚರಿಸಿದರು.

ಪಕ್ಷದ ಉಪಾಧ್ಯಕ್ಷೆ ಬಿ.ಬಿ.ಸಪೂರ, ಫರ್ ಕುಂದ, ಮೊಹಮ್ಮದ್ ಇರ್ಫಾನ್ ರಜವಿ, ಇಸೂಫ್ ಅಲಿಖಾನ್, ವಸೀಂ ಇತರರು ಇದ್ದರು.

- - - -1ಕೆಡಿವಿಜಿ5:

ದಾವಣಗೆರೆಯಲ್ಲಿ ಸೋಮವಾರ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ