ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿ ತನಿಖೆ?

KannadaprabhaNewsNetwork |  
Published : May 01, 2025, 12:48 AM IST
ಮುನಿರತ್ನ  | Kannada Prabha

ಸಾರಾಂಶ

ಬಿಬಿಎಂಪಿ ಮಾಜಿ ಸದಸ್ಯೆ ಪತಿ ಹನಿಟ್ರ್ಯಾಪ್‌ ಯತ್ನ ಪ್ರಕರಣದಲ್ಲಿ ಕ್ಲೀನ್ ಚೀಟ್ ಪಡೆದು ನಿರಾಳರಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಂದು ಶಾಕ್‌ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಬಿಎಂಪಿ ಮಾಜಿ ಸದಸ್ಯೆ ಪತಿ ಹನಿಟ್ರ್ಯಾಪ್‌ ಯತ್ನ ಪ್ರಕರಣದಲ್ಲಿ ಕ್ಲೀನ್ ಚೀಟ್ ಪಡೆದು ನಿರಾಳರಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಂದು ಶಾಕ್‌ ನೀಡಿದೆ.

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಜೀವ ಬೆದರಿಕೆ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ17 (ಎ) ಅಡಿ ಆರೋಪಪಟ್ಟಿ ಸಲ್ಲಿಸಲು ವಿಧಾನಸಭಾ ಸ್ಪೀಕರ್ ಅವರಿಗೆ ಎಸ್‌ಐಟಿ ಮನವಿ ಮಾಡಿದೆ. ಈ ಮನವಿಗೆ ಸ್ಪೀಕರ್‌ ಅವರು ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಸಮ್ಮತಿಸಿದರೆ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಸ್‌ಐಟಿ ಆರೋಪಪಟ್ಟಿ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.

ಇನ್ನು ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ಅವರಿಗೆ ಜಾತಿನಿಂದನೆ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಗೆ ಅನುಮತಿ ನೀಡಿದ್ದ ಸರ್ಕಾರ, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ವಿಳಂಬ ನೀತಿ ಅನುಸರಿಸುತ್ತಿರುವುದು ಅನೇಕ ಪ್ರಶ್ನೆಗಳ ಹುಟ್ಟಿಗೆ ಕಾರಣವಾಗಿದೆ.

ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ಲಕ್ಷ್ಮೀದೇವಿನಗರ ವಾರ್ಡ್‌ನ ಡಿ.ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದ ಘನತಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ ನಿರ್ವಹಣೆ ಗುತ್ತಿಗೆ ನೀಡಿಕೆ ವಿಚಾರವಾಗಿ ಗುತ್ತಿಗೆದಾರ ಚೆಲುವರಾಜು ಅ‍ವರಿಗೆ ಅವಾಚ್ಯ ಶಬ್ದಗಳಿಂದ ಜೀವ ಬೆದರಿಕೆ ಆರೋಪ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಕಸ ವಿಲೇವಾರಿಗೆ ಆಟೋ ಕೊಡಿಸುವುದಾಗಿ ನಂಬಿಸಿ 20 ಲಕ್ಷ ರು. ಅನ್ನು ಗುತ್ತಿಗೆದಾರನಿಂದ ಶಾಸಕರು ಲಂಚ ಪಡೆದಿದ್ದರು ಎಂಬ ಆಪಾದನೆ ಇದೆ. ಹೀಗಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಿಸಲು ಎಸ್‌ಐಟಿ ನಿರ್ಧರಿಸಿತ್ತು. ಅಂತೆಯೇ ಶಾಸಕರಾಗಿರುವ ಕಾರಣಕ್ಕೆ ಸ್ಪೀಕರ್ ಅವರಿಂದ ಎಸ್‌ಐಟಿ ಪೂರ್ವಾನುಮತಿ ಕೋರಿದೆ ಎಂದು ಮೂಲಗಳು ಹೇಳಿವೆ.

PREV

Recommended Stories

ಹೆಬ್ಬಾಳ ಮೇಲ್ಸೇತುವೆ ಲೋಕಾರ್ಪಣೆ : ಕೆ.ಆರ್‌. ಪುರದಿಂದ ಮೇಖ್ರಿ ವೃತ್ತದ ಕಡೆಗೆ ನೂತನ ಲೂಪ್‌ ರಸ್ತೆ
ಎಸ್ಟೀಮ್‌ ಮಾಲ್‌ನಿಂದ ಬ್ಯಾಪ್ಟಿಸ್ಟ್‌ ಆಸ್ಪತ್ರೆವರೆಗಿನ 1.5 ಕಿಮೀ ಉದ್ದದಲ್ಲಿ ನೂತನ ಟನಲ್‌ ರಸ್ತೆ